ಹಾವೇರಿ | ಹದಗೆಟ್ಟ ರಸ್ತೆ; ಕರ್ಜಗಿ ಗ್ರಾಮಸ್ಥರ ಗೋಳು ಕೇಳುವವರಿಲ್ಲ

Date:

ರಸ್ತೆಗಳ ಮಧ್ಯೆ ಡಾಂಬರ್‌ ಕಿತ್ತು ಹೋಗಿದ್ದು, ದೊಡ್ಡ ದೊಡ್ಡ ತಗ್ಗುಗಳು ಉಂಟಾಗಿವೆ. ಇದರಿಂದ ರಸ್ತೆ ಪೂರ್ತಿ ಹದಗೆಟ್ಟು ಕೆಸರುಮಯವಾಗಿದೆ. ರಸ್ತೆ ದುರಸ್ಥಿಯಾಗದೆ ಸುಮಾರು ವರ್ಷಗಳಾದರೂ ಇತ್ತ ತಿರುಗಿ ನೋಡುವವರಿಲ್ಲದಂತಾಗಿದೆ. ಈ ಗ್ರಾಮೀಣ ಜನರ ಗೋಳು ಕೇಳುವವರಿಲ್ಲದಂತಾಗಿದೆ. ವಾಹನ ಸವಾರರು ನಿತ್ಯವೂ ಜೀವ ಭಯದಲ್ಲಿಯೇ ಸಂಚಾರ ಮಾಡುತ್ತಿದ್ದಾರೆ. ಆದರೂ ಕ್ಯಾರೆ ಎನ್ನದ ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಹಾವೇರಿ ಪಟ್ಟಣದಿಂದ ಕರ್ಜಗಿ, ಅಗಸಮಟ್ಟಿ, ರಾಮಾಪುರ ತಲುಪುವ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಗ್ರಾಮೀಣ ಪ್ರದೇಶದ ಜನರು ಪ್ರತಿನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಸುಮಾರು ವರ್ಷಗಳು ಕಳೆದರೂ ಕೂಡ ದುರಸ್ಥಿಯಾಗದಿರುವುದು ದುರಂತವೇ ಸರಿ.

ಹಾವೇರಿಯಿಂದ ಕರ್ಜಗಿಗೆ ಹೋಗುವ ರಸ್ತೆಯುದ್ಧಕ್ಕೂ ತಗ್ಗು ಗುಂಡಿಗಳು ಕಂಡುಬರುತ್ತವೆ. ಈ ರಸ್ತೆಯ ದುಃಸ್ಥಿತಿಯಲ್ಲಿ ಸಂಚರಿಸುವ ಸವಾರರು ಹಿಡಿಶಾಪ ಹಾಕುತ್ತಿದ್ದಾರೆ. ಕನಿಷ್ಠ ಪಕ್ಷ ತಗ್ಗು ಗುಂಡಿಗಳಿಗೆ ಕಡಿ ಮಣ್ಣು ಹಾಕಿದರೆ ತಕ್ಕಮಟ್ಟಿಗಾದರೂ ಸುಮಗವಾಗಿ ಸಂಚಾರ ಮಾಡಬಹುದು. ಆದರೆ ತಗ್ಗು ಗುಂಡಿಗಳಿಗೆ ಕಲ್ಲು ಮಣ್ಣು ಹಾಕದೆ ವಾಹನ ಸವಾರರು ಸರ್ಕಸ್ ಮಾಡುತ್ತ ಸಂಚರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ದ್ವಿಚಕ್ರ ಸವಾರರು ಬಿದ್ದು ಆಸ್ಪತ್ರೆ ಕಡೆ ಮುಖ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕರ್ಜಗಿ ರಸ್ತೆ ಗುಂಡಿ

ಕರ್ಜಗಿ ರಸ್ತೆಯಲ್ಲಿ ಪ್ರಯಾಣಿಸುವ ದ್ವಿಚಕ್ರ ವಾಹನ ಸವಾರ ಪ್ರಕಾಶ ಎನ್ ಈ ದಿನ.ಕಾಮ್ ಜೊತೆಗೆ ಮಾತನಾಡಿ, “ಕರ್ಜಗಿ ರಸ್ತೆಯಲ್ಲಿ ಬಹಳ ವರ್ಷಗಳಿಂದ ಓಡಾಡುತ್ತ ಬಂದಿದ್ದೇವೆ. ರಸ್ತೆಯ ಡಾಂಬರ್ ಕಿತ್ತುಹೋಗಿದೆ. ಅಲ್ಲಲ್ಲಿ ತಗ್ಗು ಗುಂಡಿಗಳು ತುಂಬಿಕೊಂಡಿವೆ. ಎಷ್ಟೋ ಜನರು ಇದೇ ರಸ್ತೆಯಲ್ಲಿ ಬಿದ್ದು ಎದ್ದು ಹೋಗಿದ್ದಾರೆ. ಅಪಘಾತಗಳು ಆಗುತ್ತಿವೆ. ಹಲವರು ಆಸ್ಪತ್ರೆ ಸೇರಿದ್ದಾರೆ. ಆದರೂ ಕೂಡ ಈ ಕುರಿತು ಯಾವುದೇ ಅಧಿಕಾರಿಗಳಾಗಲಿ, ಶಾಸಕರಾಗಲಿ ಈವರೆಗೆ ರಸ್ತೆ ದುರಸ್ತಿ ಕ್ರಮ ಕೈಗೊಂಡಿಲ್ಲ” ಎಂದು ಹೇಳಿದರು.

ಕರ್ಜಗಿ ರಸ್ತೆ ಗುಂಡಿ 3

“ಕರ್ಜಗಿ ಗ್ರಾಮದಿಂದ ರಾಮಾಪುರ, ಅಗಸನಮಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಯು ಡಾಂಬರ್ ಕಾಣದೆ ಬಹಳ ವರ್ಷಗಳೇ ಕಳೆದಿವೆ. ರಸ್ತೆಯಲ್ಲಿ ದೊಡ್ಡ ದೊಡ್ಡ ತಗ್ಗು, ಗುಂಡಿಗಳಿದ್ದು, ಈಗ ಮಳೆ ಬಂದಿರುವ ಕಾರಣ ರಸ್ತೆ ಗುಂಡಿಗಳ ತುಂಬಾ ನೀರು ಸಂಗ್ರಹವಾಗಿದೆ. ಇದರಿಂದ ರಸ್ತೆ ಕೆರೆಯಾಗಿ ಮಾರ್ಪಟ್ಟಿದೆ. ಈ ರಸ್ತೆಯ ಮೂಲಕ ಸಂಚರಿಸುವ ದ್ವಿಚಕ್ರ ಸವಾರರಂತು ಜೀವ ಕೈಯಲ್ಲಿ ಹಿಡಿದುಕೊಂಡೇ ಸಾಗುವಂತಾಗಿದೆ. ಬಸ್ಸು, ಹಾಗೂ ಬೃಹತ್ ವಾಹನಗಳಲ್ಲಿ ಪ್ರಯಾಣಿಸುವವರು ಸರ್ಕಸ್ ಮಾಡುತ್ತ ಸಾ‌ಗುವಂತಾಗಿದ್ದು, ಇಲ್ಲಿಯ ಜನರ ಗೋಳನ್ನು ಕೇಳುವವರಿಲ್ಲದಂತಾಗಿದೆ” ಎಂದರು.

ಕರ್ಜಗಿ ರಸ್ತೆ ಗುಂಡಿ 1

“ಗರ್ಭಿಣಿಯರು ತುರ್ತು ಪರಿಸ್ಥಿತಿಯಲ್ಲಿ ಹಾವೇರಿ ಪಟ್ಟಣಕ್ಕೆ ಹೋಗಲು ತಗ್ಗು ಗುಂಡಿಗಳ ರಸ್ತೆಯಲ್ಲಿ ಸಂಚರಿಸುವುದೇ ಸವಾಲಿನದ್ದಾಗಿದೆ. ಈ ರಸ್ತೆಯಲ್ಲಿ ನಿತ್ಯ ಜನರು, ವಿದ್ಯಾರ್ಥಿಗಳು ಸಂಚರಿಸದಂತಾಗಿದ್ದು, ರೈತರು ತಮ್ಮ ಹೊಲಗಳಿಗೆ ತಿರುಗಾಡಲು ಹೈರಾಣಾಗುತ್ತಿದ್ದಾರೆ. ಹಾವೇರಿ ಪಟ್ಟಣಕ್ಕೆ ಹೋಗುವಾಗ ಈ ದಾರಿಯಲ್ಲಿ ಹೇಗೆ ಹೋಗಬೇಕು ಎಂಬ ಚಿಂತೆ ಜನರ ಮನಸಲ್ಲಿ ಕಾಡುತ್ತದೆ. ಈ ರಸ್ತೆಯ ಸಮಸ್ಯೆಯನ್ನು ಯಾವಾಗ ಬಗೆಹರಿಯುತ್ತದೆಯೋ ತಿಳಿಯದಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಕರ್ಜಗಿ ರಸ್ತೆ ಗುಂಡಿ 2

ಗ್ರಾಮೀಣ ಪ್ರದೇಶದ ಮೂಲಸೌಕರ್ಯ, ಕಾಮಗಾರಿಗಳಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ‘ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲ್ಲ’ ಅಂದಗೆ ಇಲ್ಲಿಯ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳ ನಿರ್ಲಕ್ಷ್ಯ ದೋರಣೆಯಿಂದ ಗ್ರಾಮೀಣ ರಸ್ತೆಗಳು ತಗ್ಗು, ಗುಂಡಿಗಳು ದೊಡ್ಡ ದೊಡ್ಡ ಹೊಂಡಗಳಾಗಿ ಮಾರ್ಪಟ್ಟಿವೆ. ಗ್ರಾಮೀಣ ಜನರ ಗೋಳು ಕೇಳುವವರಿಲ್ಲದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ ಸರಕಾರ ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ: ಜೆಡಿಎಸ್ ಆರೋಪ

ರಾಮಾಪುರ ಗ್ರಾಮದ ವಿದ್ಯಾರ್ಥಿ ಬಾಬುಷಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಮ್ಮೂರಿನ ರಸ್ತೆ ಸುಮಾರು ವರ್ಷಗಳಿಂದ ಹೀಗೆಯೇ ಇದ್ದು, ತಗ್ಗು ಗುಂಡಿಗಳಿಂದ ಕೂಡಿದೆ. ಇದೇ ನೀರು ನಿಂತ ತಗ್ಗು ಗುಂಡಿಗಳಲ್ಲಿ ನಿತ್ಯ ಕಾಲೇಜಿಗೆ ಹೋಗುತ್ತೇವೆ. ಈ ರಸ್ತೆ ಮೂಲಕ ಹೋಗುವ ಬಸ್ಸುಗಳು ಒಲಾಡಿ ಒಲಾಡಿ ಹೋಗುತ್ತ ಹೋಗುತ್ತಲೇ ಸಮಯ ಮೀರಿರುತ್ತದೆ. ಇದರಿಂದ ಸಾಕಷ್ಟು ಜನರಿಗೆ, ಮಹಿಳೆಯರಿಗೆ ಸಮಸ್ಯೆ ಆಗುತ್ತದೆ. ಇಲ್ಲಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಕಡೆ ಬಂದರೆ ಸಮಸ್ಯೆ ಗೊತ್ತಾಗುತ್ತದೆ. ಆದರೆ ಅವರು ಈ ಕಡೆಗೆ ಬರುವುದೇ ಇಲ್ಲ” ಎಂದು ಹೇಳಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...