ಹಾವೇರಿ | ಜನವರಿ 24. 25ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Date:

ಸವಣೂರು ಪಟ್ಟಣದ ದೊಡ್ಡ ಹುಣಸೆ ಕಲ್ಮಠದ ಆವರಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಜ. 24 ಮತ್ತು 25ರಂದು ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದರು.

ಹಾವೇರಿ ಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸವಣೂರು ತಾಲ್ಲೂಕು ಘಟಕಗಳ ಸಹಯೋಗದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ.

“ಸಮ್ಮೇಳನಾಧ್ಯಕ್ಷರಾಗಿ ಎಚ್.ಐ. ತಿಮ್ಮಾಪೂರ ಅವರನ್ನು ಆಯ್ಕೆ ಮಾಡಲಾಗಿದೆ. ಜ. 24ರಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ನಂತರ, ಪರಿಷತ್ ಧ್ವಜಾರೋಹಣವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಗೌಡ ಪಾಟೀಲ ಅವರು ಆರೋಹಣ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ‘ಬೆಳಿಗ್ಗೆ 8.30ಕ್ಕೆ ನಾಡದೇವಿಗೆ ಅಡವಿಸ್ವಾಮಿಮಠದ ಕುಮಾರ ಸ್ವಾಮೀಜಿಯವರು ಪೂಜೆ ಸಲ್ಲಿಸಲಿದ್ದಾರೆ. ಬಳಿಕ, ಭರಮಲಿಂಗೇಶ್ವರ ವೃತ್ತದಲ್ಲಿ ಸಮ್ಮೇಳನಾಧ್ಯಕ್ಷ ಎಚ್.ಐ. ತಿಮ್ಮಾಪೂರ ಅವರ ಮೆರವಣಿಗೆ ಆರಂಭವಾಗಲಿದೆ. ಜಿಲ್ಲಾ ಎಸ್‌.‍ಪಿ. ಯಶೋಧಾ ವಂಟಗೋಡಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ’ ಎಂದರು.

‘ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭವಿದೆ. ದೊಡ್ಡಹುಣಸೆ ಕಲ್ಮಠದ ಚನ್ನಬಸವ ಮಹಾಸ್ವಾಮೀಜಿ ಹಾಗೂ ಕಲ್ಮಠದ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶಾಸಕ ಯಾಸೀರ್‌ ಅಹ್ಮದ್ ಖಾನ್ ಪಠಾಣ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.

ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಗೌಡ ಪಾಟೀಲ, ನಿಕಟಪೂರ್ವ ಅಧ್ಯಕ್ಷ ಪ್ರಭು ಅರಗೋಳ, ಹೋಬಳಿ ಅಧ್ಯಕ್ಷ ಬಸನಗೌಡ ಪಾಟೀಲ ಪತ್ರಿಕಾಗೋಷ್ಠಿಯಲ್ಲಿದ್ದರು.

ಎಂಟು ಗೋಷ್ಠಿ

‘ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ ಸ್ತ್ರೀ ಪರ ಚಿಂತನೆಗಳು ವೈವಿದ್ಯತೆ ಗೋಷ್ಠಿ ಕವಿಗೋಷ್ಠಿ ನೇಗಿಲಯೋಗಿ ಸಂಕೀರ್ಣ ಗೋಷ್ಠಿ ದಮನಿತರ ಧ್ವನಿ ನಮ್ಮ ಜಿಲ್ಲೆ ನಮ್ಮ ಹೆಮ್ಮೆ ಎಂಬ ವಿವಿಧ ವಿಷಯಗಳು ಸೇರಿ 8 ಗೋಷ್ಠಿಗಳು ನಡೆಯಲಿವೆ. ಜ. 25ರಂದು ಸಂಜೆ 5.45ಕ್ಕೆ ಬಹಿರಂಗ ಅಧಿವೇಶನ ಜರುಗಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನವಿದೆ’ ಎಂದು ಲಿಂಗಯ್ಯ ಹಿರೇಮಠ ತಿಳಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...