ಹಾವೇರಿ | ಕೃಷಿ ಕ್ಷೇತ್ರದ ಸಾಧನೆಗಾಗಿ ಡಾ.ಎಸ್.ವಿ.ಹಿತ್ತಲಮನಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Date:

ತೋಟಗಾರಿಕೆ ಇಲಾಖೆಯ ನಿವೃತ್ತ ಅಪರ ನಿರ್ದೇಶಕ ಡಾ.ಎಸ್ .ವಿ.ಹಿತ್ತಲಮನಿ ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ ಪ್ರಸಕ್ತ ಸಾಲಿನ ರಾಜ್ಯೊತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹಾವೇರಿ ಜಿಲ್ಲೆಯ ಮೋಟೆಬೆನ್ನೂರ ಮೂಲದ ನಿವೃತ್ತ ಕೃಷಿ ಅಧಿಕಾರಿ ಡಾ. ಎಸ್.ವಿ.ಹಿತ್ತಲಮನಿ ಅವರು ಹಾಲಿ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.

ಕೃಷಿ ವಿಷಯದಲ್ಲಿಸ್ನಾತಕೋತ್ತರ ಪದವಿ, ತೋಟಗಾರಿಕೆ ವಿಷಯದಲ್ಲಿಪಿಎಚ್ ಡಿ ಪಡೆದಿರುವ ಡಾ. ಎಸ್ .ವಿ. ಹಿತ್ತಲಮನಿ ಅವರು 1976ರಲ್ಲಿರಾಜ್ಯ ತೋಟಗಾರಿಕೆ ಇಲಾಖೆಯಲ್ಲಿಅಧಿಕಾರಿಯಾಗಿ ಸೇರಿದರು. ವಿವಿಧ ಹುದ್ದೆಗಳಿಗೆ ಪದೋನ್ನತಿಗೊಂಡ ಅವರು ಅಪರ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿ 2013ರಲ್ಲಿನಿವೃತ್ತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 “ನಿವೃತ್ತಿ ಬಳಿಕ 12 ವರ್ಷಗಳಿಂದ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಹೇಗೆ ತೋಟಗಾರಿಕೆ ಕೃಷಿಯನ್ನು ಲಾಭದಾಯಕ ಮಾಡಬಹುದು ಎಂದು ರಾಜ್ಯದ ಹಲವು ರೈತರಿಗೆ ಸಲಹೆ ನೀಡುತ್ತಿದ್ದಾರೆ.

ಕಡಿಮೆ ಮಳೆ ಇರುವ ಪ್ರದೇಶದಲ್ಲಿಯಾವ ಬೆಳೆ ಸೂಕ್ತ ಎಂಬ ವಿಷಯಗಳ ಕುರಿತು ಸಂಶೋಧನೆ , ಅಧ್ಯಯನ ಮಾಡುತ್ತಿದ್ದಾರೆ. ಕೃಷಿ ಕ್ಷೇತ್ರದಲ್ಲಿನ ಇವರ ಸೇವೆ ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.

ತೋಟಗಾರಿಕೆ ಇಲಾಖೆಯಲ್ಲಿಸೇವೆ ಸಲ್ಲಿಸುವಾಗಿನಿಂದ ಈವರೆಗೆ ಡಾ.ಹಿತ್ತಲಮನಿ ಅವರು ರೈತರಿಗೆ ಉಚಿತವಾಗಿ ಸಲಹೆ, ಮಾರ್ಗದರ್ಶನ, ತರಬೇತಿ ನೀಡುತ್ತ ಬಂದಿದ್ದಾರೆ. ತೋಟಗಾರಿಕೆ ಬೆಳೆಗಳಲ್ಲಿಹೊಸ ಹೊಸ ತಳಿಗಳನ್ನು ಸಂಶೋಧಿಸಿ ಅದಕ್ಕೆ ಹೆಸರು ಸೂಚಿಸಿ, ರೈತರಿಗೆ ನೆರವಾಗಿದ್ದಾರೆ. ನೇರಳೆ, ಚಕೋತ, ಪಪ್ಪಾಯ, ಮಾವು, ಹಲಸು, ಇತರ ಹಣ್ಣುಗಳ ಹೊಸ ತಳಿಗಳ ಸಂಶೋಧನೆ ಮಾಡುವ ಮೂಲಕ ರೈತರಿಗೆ ಹೆಚ್ಚು ಇಳುವರಿ ನೀಡುವ, ಆರ್ಥಿಕವಾಗಿ ಸಹಕಾರಿಯಾಗುವ ಕೆಲಸಗಳನ್ನು ಮಾಡಿದ್ದಾರೆ.

ರೈತರ ತೋಟದಲ್ಲಿಹೋಗಿ ಪ್ರಾಯೋಗಿಕವಾಗಿ ತರಬೇತಿ ನೀಡುವ ಮೂಲಕ ತೋಟಗಾರಿಕೆ ಬೆಳೆಗಳ ಕುರಿತು ತಿಳಿವಳಿಕೆ ಮೂಡಿಸುತ್ತಿದ್ದಾರೆ. ಕೃಷಿಯಲ್ಲಿಸಂರಕ್ಷಣಾ ತಂತ್ರಗಳ ಅಳವಡಿಕೆ, ಸಾವಯವ ಕೃಷಿ, ತಂತ್ರಜ್ಞಾನ ಬಳಕೆ, ಇತರ ಅಂಶಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...