ಹಾವೇರಿ | ಸ್ವಂತ ಖರ್ಚಿನಿಂದ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಯುವಕರು

Date:

ರಾಜ್ಯಾದ್ಯಂತ ಬರ ಆವರಿಸಿದೆ. ಇದನ್ನೇ ಲಾಭ ಮಾಡಿಕೊಂಡು ಕೆಲವರು ದುಡ್ಡು ಮಾಡುತ್ತಿದ್ದಾರೆ. ಆದರೆ, ಅಲ್ಲೊಂದು ಯುವಕರ ಗುಂಪು ಇಡೀ ಗ್ರಾಮಕ್ಕೆ ತನ್ನ ಸ್ವಂತ ಖರ್ಚಿನಲ್ಲೇ ನೀರನ್ನು ಪೂರೈಕೆ ಮಾಡುತ್ತಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ಯುವಕರು ಸ್ವಂತ ಖರ್ಚಿನಲ್ಲಿ ನೀರು ಪೂರೈಕೆ ಮಾಡುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಟ್ರ್ಯಾಕ್ಟರ್ ಮೇಲೆ ಎರಡು ಸಿಂಟೆಕ್ಸ್‌ನಲ್ಲಿ ಯುವಕರು ನೀರು ತರಿಸಿದ್ದು, ನೆತ್ತಿ ಸುಡುವ ಬಿರಿ ಬಿಸಿಲಿನಲ್ಲಿಯೇ ಸ್ಥಳೀಯರು ಸರದಿ ಸಾಲಿನಲ್ಲಿ ನೀರು ತುಂಬಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ.  ರಾಜ್ಯದಲ್ಲಿ ಮೊದಲೇ ಭೀಕರ ಬರಗಾಲ ಅವರಸಿದೆ. ಹನಿ ನೀರಿಗಾಗಿ ಜನರು ಪರದಾಡುತ್ತಾ ಇದ್ದಾರೆ. ಬಂಗಾರದಂತೆ ನೀರನ್ನು ಜೋಪಾನ ಮಾಡುತ್ತಿದ್ದಾರೆ. ಇಂಥ ಸಂಕಷ್ಟದ ಸಮಯದಲ್ಲಿ ಹಾವೇರಿಯ ಬಾಳೆಂಬೀಡ ಗ್ರಾಮದ ಯುವಕರು ಸ್ವಂತ ಖರ್ಚಿನಲ್ಲಿ ಗ್ರಾಮಕ್ಕೆ ನೀರು ಪೂರೈಕೆ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕರ ಸ್ವಂತ ಖರ್ಚಿನಲ್ಲಿ ನೀರು ಸರಬರಾಜು

ಬಾಳಂಬೀಡ ಗ್ರಾಮದ ಜನರ ದಾಹ ಇಂಗಿಸಲು ದುಂಡಣ್ಣನವರ ಕುಟುಂಬ ಮುಂದಾಗಿದೆ. ಯುವಕರು ಎರಡು ಟ್ರ್ಯಾಕ್ಟರ್‌ನಲ್ಲಿ ನೀರು ತುಂಬಿಸಿ ಜನರಿಗೆ ಟ್ಯಾಂಕರ್ ಮೂಲಕ ನೀರನ್ನು ಪೂರೈಸುತ್ತಿದ್ದಾರೆ. ತಮ್ಮದೇ ಬೋರ್‌ವೆಲ್‌ ನೀರನ್ನು ಗ್ರಾಮಕ್ಕೆ ಹಂಚಿ ಸೈ ಎನಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ 

ಇನ್ನು ಕೊಳವೆ ಬಾವಿ, ಕೆರೆ ಕಟ್ಟಿಗಳು ಬತ್ತಿ ಹೋಗುತ್ತಿದ್ದು, ನೀರಿಲ್ಲದ ಪರಿಣಾಮ ಗ್ರಾಮದ ಜನರು ಹೈರಾಣಾಗುತ್ತಿದ್ದಾರೆ.

ವರದಿ: ಜಗದೀಶ ಹರಿಜನ, ಸಿಟಿಜನ್ ಜರ್ನಲಿಸ್ಟ್ ಹಾನಗಲ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...