ಹಾವೇರಿ | ಪದವೀಧರರ ನೋಂದಣಿ ಅವಧಿ ವಿಸ್ತರಿಸಲು ಡಿವೈಎಫ್ಐ ಮನವಿ

Date:

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಮತಪಟ್ಟಿಗೆ ಪದವೀಧರರನ್ನು ಸೇರ್ಪಡೆ ಮಾಡಿಕೊಳ್ಳಲು ಅವಧಿಯನ್ನು ವಿಸ್ತರಿಸುವಂತೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜದಯ ಕಾರ್ಯದರ್ಶಿ ಬಸವರಾಜ ಪೂಜಾರ ಮನವಿ ಮಾಡಿದ್ದಾರೆ.

ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಅವರ ಮೂಲಕ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಈಗಾಗಲೇ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಮತಪಟ್ಟಿಗೆ ಪದವೀಧರನ್ನು ಸೇರ್ಪಡೆ ಮಾಡಿಕೊಳ್ಳಲು ನವಂಬರ್ 2025 ರವೆಗೆ ಇದ್ದ  ಅವಧಿಯನ್ನು ಒಂದು ಬಾರಿ ಅಂದರೆ ದಿನಾಂಕ: 10.12.2025 ರವರೆಗೆ ಅವಧಿ ವಿಸ್ತರಿಸಿದ್ದೀರಿ. ಆದರೆ ಇನ್ನೂ ಹಲವಾರು ಪದವಿಧರರು ನೋಂದಣಿ ಮಾಡಿಕೊಂಡಿಲ್ಲ. ಅಲ್ಲದೇ ಈಗಾಗಲೇ ಇಲಾಖೆಯಿಂದ ಈ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ನಡೆದಿದೆಯಾದರೂ ನೋಂದಣಿಯಾಗುವವರು ಬಹಳ ಜನ ಪದವಿಧರರು ಬಾಕಿ ಇದ್ದಾರೆ” ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾಗಾಗಿ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಮತಪಟ್ಟಿಗೆ ಪದವಿಧರರನ್ನು ಸೇರ್ಪಡೆ ಮಾಡಿಕೊಳ್ಳಲು ಅಂತಿಮ ದಿನಾಂಕ: 10.12.2025ವನ್ನು ಕನಿಷ್ಠ ಒಂದು ತಿಂಗಳು ಕಾಲ ಅವಧಿ ವಿಸ್ತರಣೆ ಮಾಡಬೇಕು. ಹಾಗೂ ಈ ಅವಧಿಯಲ್ಲಿ ಪದವೀಧರರ ಮತಪಟ್ಟಿಗೆ ತಮ್ಮ ಹೆಸರನ್ನು ಪದವಿದರರು ನೋಂದಣಿ ಮಾಡಿಕೊಳ್ಳುವಂತೆ ಇಲಾಖೆಯಿಂದ ಇನ್ನಷ್ಟು ಜಾಗೃತಿ ಮೂಡಿಸುವ ಕಾರ್ಯವನ್ನು ಇಲಾಖೆಯು ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಡಿವೈಎಫ್ಐ ಮುಖಂಡರಾದ ನಾಗರಾಜ ರಿತ್ತಿಕುರಬರ, ಹಿರಿಯ ರೈತ ಮುಖಂಡರಾದ ತಿರಕಪ್ಪ ಹುಳಕೆಲ್ಲಪ್ಪನವರ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...