ಹಾವೇರಿ | ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದೆ: ಜಿಲ್ಲಾಧಿಕಾರಿ ವಿಜಯ ಮಹಾಂತೇಶ್

Date:

ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದ್ದು, ಜ್ಞಾನದ ಜೊತೆಗೆ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಿದ ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯವಾಗಿದೆ. ಇಂತಹ ಸಂಸ್ಥೆಯಲ್ಲಿ ಕಲಿತು ಉನ್ನತ ಹಂತಕ್ಕೆ ಬೆಳೆದಿರುವ ಹಳೆಯ ವಿದ್ಯಾರ್ಥಿಗಳೇ ಈ ಸಂಸ್ಥೆಗೆ ಶಕ್ತಿಯಾಗಿದ್ದಾರೆ ಎಂದು ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಹಾವೇರಿ ಪಟ್ಟಣದ ಹುಕ್ಕೇರಿಮಠ ಶಿವಾನುಭವ ಮಂಟಪದಲ್ಲಿ  ಹುಕ್ಕೇರಿಮಠ ಶಿವಬಸವೇಶ್ವರ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಹುಕ್ಕೇರಿಮಠದಲ್ಲಿ ನಾನು ಕೇವಲ ಒಂದು ವರ್ಷ ಅಧ್ಯಯನ ಮಾಡಿದ್ದರೂ ಸಹ ಇಲ್ಲಿನ ಶಿಸ್ತು, ಪ್ರೀತಿ, ಸಹಕಾರ ಮನೋಭಾವ ಎಲ್ಲ ವಿದ್ಯಾರ್ಥಿಗಳನ್ನು ಒಂದೇ ಕುಟುಂಬದ ಸದಸ್ಯರನ್ನಾಗಿ ಮಾಡಿದ್ದವು. ಒಂದು ಶಿಕ್ಷಣ ಸಂಸ್ಥೆಯನ್ನು 50 ವರ್ಷಗಳ ಕಾಲ ನಡೆಸಿಕೊಂಡು ಬರುವುದು ಸುಲಭವಲ್ಲ. ಯಾವುದೇ ಅಪೇಕ್ಷೆ ಇಲ್ಲದೆ ಇಂತಹ ಕಾರ್ಯವನ್ನು ಹುಕ್ಕೇರಿಮಠ ಶಿಕ್ಷಣ ಸಂಸ್ಥೆ ಮಾಡುವ ಮೂಲಕ ಸುವರ್ಣಾಕ್ಷರದಲ್ಲಿ ಬರೆದಿಡುವಂತೆ ಮಾಡಿದೆ. ಇಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಸಂಸ್ಥೆಯ ಬೆನ್ನಲುಬಾಗಿ ನಿಂತುಕೊಂಡು ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯೋಜನೆಗಳನ್ನು ಸರಿಯಾಗಿ ಮಾಡಿಕೊಂಡರೆ ಕಾರ್ಯಕ್ರಮ ಯಶಸ್ವಿಯಾಗಿ ಮಾಡಲು ಸಾಧ್ಯವಾಗುತ್ತದೆ. ಹಾಗೆ ಕಾರ್ಯಕ್ರಮದ ಸವಿನೆನಪಿಗಾಗಿ ಮಠದಲ್ಲಿ ಹಾಸ್ಟೆಲ್ ನಿರ್ಮಿಸಿದರೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ” ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ಅವರು ಸಲಹೆ ನೀಡಿದರು.

ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, “ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುತ್ತಿರುವ ಹುಕ್ಕೇರಿಮಠದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಸುವರ್ಣ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದ್ದು, ಹಳೆಯ ವಿದ್ಯಾರ್ಥಿಗಳ ಸಹಕಾರದ ಅಗತ್ಯವಿದೆ. ಈ ನಿಟ್ಟಿನಲ್ಲಿ  ಮೊದಲು ದಿನಾಂಕ ನಿಗದಿ ಮಾಡುವುದು ಅಗತ್ಯವಿದೆ. ಮುಂಬರುವ ಜನವರಿ ತಿಂಗಳಲ್ಲಿ ಹುಕ್ಕೇರಿಮಠದ ಜಾತ್ರೆ ನಡೆಯಲಿದ್ದು, ಜಾತ್ರೆಯ ಸಂದರ್ಭದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜಿಸಿದರೆ ಉತ್ತಮವಾಗಿರುತ್ತದೆ ಎಂದು ಸಲಹೆ ನೀಡಿದರು.

ನಗರದ ಹುಕ್ಕೇರಿಮಠದ ಶಿವಬಸವೇಶ್ವರ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು 2025 ಜನೆವರಿ 5ರಂದು ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಇದಕ್ಕೆ ಪೂರಕವಾಗಿ ಸಭೆಯಲ್ಲಿ ಸುವರ್ಣ ಮಹೋತ್ಸವ ಆಚರಣಾ ಸಮಿತಿ ರಚಿಸಲಾಯಿತು. ಸಮಿತಿಯ ಮಹಾಪೋಷಕರಾಗಿ ಸದಾಶಿವ ಸ್ವಾಮೀಜಿ, ಗೌರವಾಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಕಾರ್ಯಾಧ್ಯಕ್ಷರಾಗಿ ಮಹೇಶ ಚಿನ್ನಿಕಟ್ಟಿ, ಅಧ್ಯಕ್ಷರಾಗಿ ಅಶೋಕ ಹಾವನೂರ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಶಿವಲಿಂಗೇಶ್ವರ ಸಂಸ್ಥೆಯ ಚೇರ್ಮನ್ ಎಸ್.ಎಸ್.ಮುಷ್ಠಿ,  ಬಿಜಿಗಲ್ ವಿರಕ್ತಮಠದ ಶಿವಲಿಂಗ ಸ್ವಾಮೀಜಿ, ಪ್ರಮುಖರಾದ ಪಿ.ಡಿ.ಶಿರೂರ, ಆರ್.ಎಸ್.ಮಾಗನೂರ, ವೀರಣ್ಣ ವಳಸಂಗದ, ಮಲ್ಲಿಕಾರ್ಜುನ ಸಾತೇನಹಳ್ಳಿ ಸೇರಿದಂತೆ ಹಳೆಯ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...