ಹಾವೇರಿ | ಅಸಮಾನತೆ ವಿರುದ್ಧ  ಧ್ವನಿ ಎತ್ತಲು ಶಿಕ್ಷಣ ಬೇಕು: ಭವ್ಯ ನರಸಿಂಹಮೂರ್ತಿ

Date:

“ನಮ್ಮ ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಇವತ್ತಿಗೂ ದೇಶದಲ್ಲಿ ವರದಕ್ಷಿಣೆ, ಕೊಲೆ, ಅತ್ಯಾಚಾರಗಳು ನಡೆಯುತ್ತಲೇ ಇವೆ. ಇವುಗಳನ್ನು ಧೈರ್ಯವಾಗಿ ಪ್ರಶ್ನಿಸಬೇಕು. ಪ್ರಶ್ನೆಸಲು ಶಿಕ್ಷಣ ಬಹಳ ಮುಖ್ಯ. ಹಾಗಾಗಿ ಮಕ್ಕಳಿಗೆ ಮೊದಲು ಶಿಕ್ಷಣ ಶಿಕ್ಷಣ ಕೊಡಿಸಬೇಕು. ಅನ್ಯಾಯ, ಅಸಮಾನತೆ ವಿರುದ್ಧ  ಧ್ವನಿ ಎತ್ತಲು ಶಿಕ್ಷಣ ಬೇಕು” ಸಂಪನ್ಮೂಲ ವ್ಯಕ್ತಿ ಭವ್ಯ ನರಸಿಂಹಮೂರ್ತಿ ಹೇಳುದರು.

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ನಾಲಕಾರ ಸರ್ಕಲ್ ಹತ್ತಿರ ಇರುವ ವ್ಯಸನ ಮುಕ್ತಿ ಕೇಂದ್ರದಲ್ಲಿ ರೋಷಣೆ ಸಂಸ್ಥೆ, ಆದರ್ಶ ತಾಲೂಕು ಮಹಿಳಾ ಒಕ್ಕೂಟ ಸಹಯೋಗದಲ್ಲಿ “ಅಂಬೇಡ್ಕರ್ ಉತ್ಸವ” ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

“ಸಂವಿಧಾನದ ಅಡಿಯಲ್ಲಿ ಇರುವ ಜನರ ಮೇಲೆ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರು ಹೋರಾಟ ಮಾಡಿದರು. ಇಂದಿಗೂ ಜನರ ಮೇಲೆ ದೌರ್ಜನ್ಯಗಳು ನಿಂತಿಲ್ಲ. ಯಾಕಂದ್ರೆ ಈ ಸಮಾಜದಲ್ಲಿ ಜಾತಿ, ಧರ್ಮ, ವರ್ಗಗಳ ಆಧಾರದ ಮೇಲೆ ನಿಂತಿದೆ.  ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರ ಸಮಸ್ಯೆಗಳ ಕುರಿತು ಮಾತನಾಡಿದ ಅವರು, “ಮಹಿಳೆ ಮೊದಲು ಸುಚಿತ್ವ ಕಾಪಾಡಿಕೊಳ್ಳಬೇಕು. ಹೆಣ್ಣುಮಕ್ಕಳು ಆರೋಗ್ಯವಾಗಿ ಇರಲು ಪೌಷ್ಟಿಕ ಆಹಾರವನ್ನು ಕೊಡಬೇಕು. ಮಹಿಳೆಯರು ಆರೋಗ್ಯವಾಗಿ ಇದ್ದಾಗ ಅವರಿಗೆ ಹುಟ್ಟುವ ಮಕ್ಕಳು ಆರೋಗ್ಯವಾಗಿ ಬೆಳೆಯುತ್ತಾರೆ. ಹೆಣ್ಣುಮಕ್ಕಳು ಮನೆಯಲ್ಲಿ ಎಷ್ಟು ಖುಷಿಯಾಗಿ ಇರುತ್ತಾರೂ, ಅಷ್ಟೇ ಇಡೀ ಕುಟುಂಬವೇ ಖುಷಿಯಾಗಿ ಇರುತ್ತದೆ” ಎಂದು ಮಹಿಳೆಯರಿಗೆ ಸಲಹೆ ನೀಡಿದರು.

“ಸಾವಿತ್ರಿ ಬಾಯಿ ಪುಲೆ ಅವರು ಮೊಟ್ಟ ಮೊದಲ ಶಾಲೆಯನ್ನು ಆರಂಭಿದರು. ಯಾವುದೇ ಜಾತಿಯ ಮಹಿಳೆಯರಿಗೆ, ಪುರುಷರಿಗೆ ಶಾಲೆಯಲ್ಲಿ ಶಿಕ್ಷಣ ನೀಡುತ್ತಿದ್ದರು. ಶಿಕ್ಷಣ ಕಲಿಸುವಾಗ ಸಾವಿತ್ರಿ ಬಾಯಿ ಪುಲೆ ಅವರಿಗೆ ಸಮಾಜದಲ್ಲಿ ಸಾಕಷ್ಟು ಅವಮಾನಗಳ ನಡುವೆ ಶಿಕ್ಷಣ ನೀಡುತ್ತಿದ್ದರು. ಆದರೆ ಇವತ್ತಿಗೂ ಸಹಿತ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡುತ್ತಿಲ್ಲ” ಎಂದು ಹೇಳುದರು.

ರೋಷನಿ ಸಂಸ್ಥೆಯ ನಿರ್ದೇಶಕರು ಅನಿತಾ ಡಿಸೋಜ ಅವರು ಪ್ರಸ್ತಾವಿಕ ಮಾತನಾಡಿ, “ಕಾನೂನನ್ನು ಯಾರು ಕೈಗೆ ಎತ್ತಿಕೊಳ್ಳುವ ಅಧಿಕಾರ ಇಲ್ಲ. ಹೋರಾಟ, ಸಂಘಟನೆ ಮೂಲಕ ನ್ಯಾಯದ ಮೂಲಕ ನಮ್ಮ ಹಕ್ಕನ್ನು ಪಡೆದುಕೊಳ್ಳಬೇಕು” ಎಂದು ಹೇಳಿದರು.

“ಭಾರತ ಸಂವಿಧಾನಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಒಂದು ವೇಳೆ ಸಂವಿಧಾನಕ್ಕೆ ಚ್ಯುತಿ ಬಂದರೆ ನಾವೆಲ್ಲ ಹೋರಾಟ ಮಾಡಿ ರಕ್ಷಿಸಿಕೊಳ್ಳುವ ಜವಾಬ್ದಾರಿಯೂ ನಮ್ಮ ಮೇಲೆ ಇದೆ.  ಅಂಬೇಡ್ಕರ್ ಅವರು ಅನ್ಯಾಯದ ವಿರುದ್ದ ನಿರಂತರ ಪ್ರತಿರೋಧವಿತ್ತು. ಹಾಗೆ ಸಮಾಜದಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ನಾವೆಲ್ಲರೂ ಧ್ವನಿಯಾಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ l ವೃದ್ಧನ ಮೇಲೆ ಕಾಡಾನೆ ದಾಳಿ 

ಅಂಬೇಡ್ಕರ್ ಉತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಷನಿ ಸಂಸ್ಥೆಯ ಮುಖ್ಯಸ್ಥರು ಸಿ ಜಾನೆಟ್ ಪಿಂಟೋ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಸಾಮಾಜಿಕ ಹೋರಾಟಗಾರ ಸುಧೀರಕುಮಾರ ಮಾರೊಳ್ಳಿ, ವಿವಿಧ ಸಂಘಟನೆ ಮುಖಂಡರು ಬಿ. ಆರ್. ಶೆಟ್ಟರ, ರಘುನಾಥ ಗಾಯಕ್ವಾಡ, ಚಂದ್ರಪ್ಪ ಹೊಸಳ್ಳಿ, ಶಿವಾಜಿ ಕಲ್ಲಾಪೂರ, ಕಾಂತೇಶ ಬಾಳೂರ, ಗೀತಾ ತಳವಾರ, ಈರಮ್ಮ ಬಿದರಣ್ಣನವರ, ಸರ್ಪುನ್ನಿಸಾ ಕನವಳ್ಳಿ ಅನೇಕರು ವೇದಿಕೆ ಮೇಲೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...