ಹಾವೇರಿ | ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮ

Date:

“ಪ್ರತಿಯೊಂದು ಜೀವಿ ಜೀವಿಸಲು ಪರಿಸರ ಪ್ರಮುಖ ಪಾತ್ರವಹಿಸುತ್ತದೆ. ‘ಪರಿಸರ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಪರಿಸರಕ್ಕೆ ನಾವೇನು ಕೊಟ್ಟಿದ್ದೇವೆ’ ಎಂಬ ಪ್ರಶ್ನೆ ನಮ್ಮೆಲ್ಲರಲ್ಲಿ ಮೂಡಬೇಕಿದೆ” ಎಂದು ಪರಿಸರ ಸಂರಕ್ಷಣಾ ಜಾಗೃತಿ ಜಾಥಾ, ಸ್ವಚ್ಛತಾ ಕಾರ್ಯಕ್ರಮದಲ್ಲಿ ಲೊಯೋಲ ವಿಕಾಸ ಕೇಂದ್ರ ಸಂಸ್ಥೆಯ ಸಹನಿರ್ದೇಶಕರು ಫಾದರ್ ಜೇಸನ್ ಪಾಯ್ಸ್  ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಹಾನಗಲ್ಲ, ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಮಂಗಳೂರು, ಗ್ರಾಮಪಂಚಾಯತ್ ಪ್ರಾಥಮಿಕ ಆರೋಗ್ಯ ಕೇಂದ್ರ, ಯುನಾನಿ ಚಿಕಿತ್ಸಾಲಯ ಹಾಗೂ ಕೊಪ್ಪರಸಿಕೊಪ್ಪ ಗ್ರಾಮದ ಸಂಯುಕ್ತ ಆಶ್ರಯದಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ  ಪ್ರಾಸ್ತಾವಿಕವಾಗಿ ಮಾತನಾಡಿದರು.

“ನಾವು ಜೀವಿಸುತ್ತಿರುವ ಈ ಭೂಮಿಯು ಪ್ರಕೃತಿಯ ಅಮೂಲ್ಯ ಕೊಡುಗೆ. ವನಗಳು ನದಿಗಳು, ಪಶುಪಕ್ಷಿಗಳು, ಗಾಳಿ, ನೀರು, ಮಣ್ಣು ಇವೆಲ್ಲವೂ ನಮ್ಮ ಬದುಕಿಗೆ ಅವಿಭಾಜ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಮಾನವ ತನ್ನ ಸುಖಕ್ಕಾಗಿ ಪ್ರಕೃತಿಯನ್ನು ದುರಪಯೋಗ ಮಾಡಿಕೊಳ್ಳುತ್ತಿರುವುದು ದುರಂತದ ಸಂಗತಿಯಾಗಿದೆ. ಮರ ಕಡಿಯುವುದು, ನದಿಗಳನ್ನು ಮಲೀನಗೊಳಿಸುವುದು, ಪ್ಲಾಸ್ಟಿಕ್ ಉಪಯೋಗ ಹೆಚ್ಚಿಸುವುದು ಇವೆಲ್ಲವೂ ಪರಿಸರವನ್ನು ನಾಶಗೊಳಿಸುತ್ತವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಪ್ಪರಸಿಕೊಪ್ಪ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ರಮೇಶ ತಾಂಬ್ಡೆಕರ್ ಮಾತನಾಡಿ, “ಜಲ ಮಣ್ಣು  ವನ್ಯ ಜೀವಿ ಇವುಗಳನ್ನು ಕಾಪಾಡುವದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂದಿನ ತಲೆಮಾರಿಗೆ ಪರಿಸರದ ಸಂರಕ್ಷಣೆ ನಾವು ಕೊಡುವ ಕೊಡುಗೆ ಆಗಿದೆ. ಪರಿಸರ ಸ್ವಚ್ಛವಾಗಿಟ್ಟಲ್ಲಿ ಉತ್ತಮ ಆರೋಗ್ಯ ಮತ್ತು ಉತ್ತಮ ಭವಿಷ್ಯ ಹೊಂದಲು ಸಾಧ್ಯ” ಎಂದು  ತಿಳಿಸಿದರು.  

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಊರಿನ ಪ್ರಮುಖ ಬಿದಿಗಳಲ್ಲಿ, ಪರಿಸರ ಜಾಗೃತಿ ಹಾಗೂ ಸ್ವಚ್ಛತೆಯನ್ನು ಕುರಿತು ಘೊಷಣಾ ಫಲಕಗಳೊಂದಿಗೆ ಜಾಥಾ ಹೊರಟು, ಶಿವಾಜಿ ಸರ್ಕಲ್‌ನಲ್ಲಿ ಪರಿಸರದ ಜಾಗೃತಿ ಬೀದಿ ನಾಟಕ ಪ್ರದರ್ಶನ ಮಾಡಿದರು.

ನಂತರ  ಬೀದಿಗಳಲ್ಲಿ ಪ್ಲಾಸ್ಟಿಕ್ ಆರಿಸಿ ಕಸದ ಗಾಡಿಗೆ ಹಾಕುವ ಮೂಲಕ ಹಾಗೂ ಅಂಗಡಿಗಳ ಮುಂಭಾಗದಲ್ಲಿ ಕಸದ ತೊಟ್ಟಿ ಇಡಲು ಜನರನ್ನು ಜಾಗೃತಗೊಳಿಸಿದರು. 

ಕಾರ್ಯಕ್ರಮದಲ್ಲಿ ವೈಧ್ಯಾಧಿಕಾರಿ ಯುನಾನಿ ಚಿಕಿತ್ಸಾಲಯ ಮೈನುದ್ದೀನ ಲೋಹಾರ, ಕೊಪ್ಪರಸಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಕಿರ್ತಿ ಹುನಗುಂದ, ಆಶಾಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ಸಿಬ್ಬಂದಿವರ್ಗ, ಮಹಿಳಾ ಸ್ವ-ಸಹಾಯ ಸಂಘದವರು, ಜನವೇದಿಕೆ ನಾಯಕರು ಪಂಚಾಯತ್ ಸಿಬ್ಬಂದಿವರ್ಗ, ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಪೀರಪ್ಪ ಶಿರ್ಶಿ ಸ್ವಾಗತಿಸಿದರು. ಹೊನ್ನಮ್ಮ ವೈ. ಎಸ್. ನಿರೂಪಿಸಿದರು. ಮೈಲಾರಿ ಸಂವಿಧಾನದ ಪ್ರಸ್ತಾವನೆೆಯನ್ನು ಮಾಡಿದರು. ಲೊಯೋಲ ವಿಕಾಸ ಕೇಂದ್ರದ ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...