ಹಾವೇರಿ | ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆಗಳು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿ: ಶಾಸಕ ಶ್ರೀನಿವಾಸ ಮಾನೆ

Date:

ಆಧುನಿಕತೆಯ ಅಬ್ಬರದ ಮಧ್ಯೆಯೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆ‌ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಾಂವಸಗಿ ಗ್ರಾಮದಲ್ಲಿ ಗ್ರಾಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಚಿಂತನಾಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

“ಪ್ರತಿಯೊಬ್ಬರೂ ಮಾನವ ಧರ್ಮದ ನೆಲೆಗಟ್ಟಿನ ಮೇಲೆ ಬದುಕು ಸಾಗಿಸುತ್ತಿದ್ದಾರೆ. ವಿವಿಧ ಧರ್ಮಗಳು ನಾಡಿನಲ್ಲಿದ್ದರೂ ಕೊನೆಗೆ ಐಕ್ಯಸ್ಥಾನ ಮಾತ್ರ ಒಂದೇ ಆಗಿದೆ. ನೊಂದ ಜೀವಗಳನ್ನು ಹಸನು ಮಾಡುವ ಶಕ್ತಿಯುಳ್ಳ ನಮ್ಮ ಸಂಸ್ಕೃತಿ ಅರ್ಥೈಸಿಕೊಳ್ಳಲು ವಿದೇಶಿಗರು ಒಲವು ತೋರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಜತೆಗೆ ಧರ್ಮದ ಜಾಗೃತಿ, ಮೌಲ್ಯ ಉಳಿಸಿ ಬೆಳೆಸಿಕೊಂಡು, ಬದುಕಿಗೆ ಅರ್ಥ ತಂದುಕೊಡುವಲ್ಲಿ ಪ್ರತಿಯೊಬ್ಬರೂ ಗಮನ ಹರಿಸಬೇಕಿದೆ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾನ್ನಿಧ್ಯ ವಹಿಸಿದ್ದ ಅಕ್ಕಿಆಲೂರಿನ ಮುತ್ತಿನಕಂತಿಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, “ಪ್ರಸ್ತುತ ಅಪಾರ ಸಂಖ್ಯೆಯ ಯುವಕರು ದುಶ್ಚಟಗಳಿಗೆ ಮಾರು ಹೋಗಿ ಅಮೂಲ್ಯ ಜೀವನ ನಾಶಪಡಿಸಿಕೊಳ್ಳುತ್ತಿದ್ದು, ಯುವಕರಿಗೆ ಬುದ್ದಿ ಹೇಳುವ ಮೂಲಕ ಅವರನ್ನು ಮತ್ತೆ ಸರಿದಾರಿಗೆ ಕರೆತರುವ ಅಗತ್ಯವಿದೆ. ಒಳ್ಳೆಯ ಮಾರ್ಗದಲ್ಲಿ ಮುನ್ನಡೆದರೆ ಜೀವನ ಅರ್ಥಪೂರ್ಣ ಎನಿಸಲಿದೆ. ಗಳಿಸಿದ್ದನ್ನು ಹಿತಮಿತವಾಗಿ ಬಳಸಿಕೊಂಡು ಪರೋಪಕಾರಿಯಾಗಿ ಸಂತೋಷ, ನೆಮ್ಮದಿಯ ಜೀವನ ನಡೆಸಲು ಸಂಕಲ್ಪಿಸಬೇಕಿದೆ. ಪ್ರತಿಯೊಬ್ಬರೂ ಕೂಡ ಧರ್ಮ ಮಾರ್ಗದಲ್ಲಿ ಮುನ್ನಡೆಯುವ ಮೂಲಕ ಸಚ್ಚಾರಿತ್ರ್ಯದ ಜೀವನ ಸಾಗಿಸುವಲ್ಲಿ ಮುಂದಾಗಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬೇಸಿಗೆಯಲ್ಲಿ ಮನರೇಗಾ ಕಾರ್ಮಿಕರಿಗೆ ನಿರಂತರ ಕೆಲಸ, ಕೂಲಿ ಹೆಚ್ಚಳ: ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್

ಪ್ರಮುಖರಾದ ಜಿ ಕೆ ಪಾಟೀಲ, ಬಸವರಾಜ ಅಗಸನಹಳ್ಳಿ, ಎಂ ಎಸ್ ಬಡಿಗೇರ, ಎಫ್ ಬಿ ಈಳಿಗೇರ, ಹನುಮಂತಪ್ಪ ಈಳಿಗೇರ, ಮಹ್ಮದ್‌ ಹನೀಫ್ ಕಾಲೇಬಾಗ ಸೇರಿದಂತೆ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...