ಹಾವೇರಿ | ಯಂತ್ರಗಳಿಗೆ ಚೆಸ್ಸಿ ನಂಬರ್, ಮೆಕ್ಕೆಜೋಳಕ್ಕೆ 2450 ಬೆಲೆ ಘೋಷಣೆ ಮಾಡುವಂತೆ ರೈತರು ಪ್ರತಿಭಟನೆ

Date:

“ಸಾವಿರಾರು ಸಂಖ್ಯೆಯಲ್ಲಿ ಮೆಕ್ಕೆಜೋಳ, ಶೇಂಗಾ, ಸೋಯಾಬೀನ್ ಇತರೆ ಕಾಳು ಮಾಡುವ ಯಂತ್ರಗಳು ಇವೆ. ಈ ಯಂತ್ರದ ಮೂಲಕ ಬದುಕು ಕಟ್ಟಿಕೊಂಡವರು ಸಹಸ್ರ ಸಂಖ್ಯೆಯಲ್ಲಿ ಇದ್ದಾರೆ. ಕಾಳು ಮಾಡುವ ಯಂತ್ರದಲ್ಲಿ ರೈತ ಕಾರ್ಮಿಕರು ಹಲವು ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಟ್ರ್ಯಾಕ್ಟರ್ ಟ್ರ್ಯಾಲಿಗೆ ಚೆಸ್ಸಿ ನಂಬರ್ ಕೊಡುವಂತೆ, ಕಾಳು ಮಾಡುವ ಯಂತ್ರಗಳಿಗೆ ಚೆಸ್ಸಿ ನಂಬರ್ ಕೊಡಬೇಕು. ಮೆಕ್ಕೆಜೋಳದ ಬೆಲೆ ಈಗ ರೂ.1500 ಮಾರಾಟವಾಗುತ್ತಿದ್ದು, ಎಂ.ಎಸ್.ಪಿ. ಬೆಂಬಲ ಬೆಲೆ ರೂ.2450/- ಗಳಿಗೆ ಖರೀದಿಸುವ ಖರೀದಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯುವಂತೆ” ರೈತ ಸಂಘದ ರಾಜ್ಯಾಧ್ಯಕ್ಷರು ಚಂದ್ರಶೇಖರ ಕೋಡಿಹಳ್ಳಿ ಆಗ್ರಹಿಸಿದರು.

ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಮೆಕ್ಕೆಜೋಳ ದರ ನಿಗದಿ ಮಾಡುವಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರು ಕೋಡಿಹಳ್ಳಿ ಚಂದ್ರಶೇಖರ ಅವರ ನೇತೃತ್ವದಲ್ಲಿ ಟ್ರ್ಯಾಕ್ಟರ್ ಹಾಗೂ ಮೆಕ್ಕೆಜೋಳ ಯಂತ್ರ ಸೇರಿದಂತೆ ಕಾಳು ಮಾಡುವ ಎಲ್ಲ ಯಂತ್ರದ ಸಮೇತ ಮುರುಘರಾಜೇಂದ್ರ ಮಠದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್  ರ್ಯಾಲಿ ನಡೆಸಿ  ಪ್ರತಿಭಟನೆ ನಡೆಸಿದರು.

“ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ಎಲ್ಲ ಬೆಳೆಗಳು ಹಾಳಾಗಿದ್ದು ಅತಿ ಶೀಘ್ರ ಬೆಳೆ ಪರಿಹಾರ ಮತ್ತು ಬೆಳೆ ವಿಮೆ ರೈತರ ಖಾತೆಗೆ ಜಮೆಗೊಳಿಸಬೇಕು ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕರ್ನಾಟಕ ಬ್ಯಾಂಕಿನವರು ಕೃಷಿ ಸಾಲ ಕೊಡುವಾಗ ಜಾಮೀನುದಾರರನ್ನು ತೆಗೆದುಕೊಳ್ಳುತ್ತಿದ್ದಾರೆ. ಇತರೆ ಬ್ಯಾಂಕಿನವರಂತೆ ಜಾಮೀನುದಾರರನ್ನು ತೆಗೆದುಕೊಳ್ಳದೆ ರೈತರಿಗೆ ಕೃಷಿ ಸಾಲ ಒದಗಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ಜಿಲ್ಲಾಧ್ಯಕ್ಷ ಹಣಮಂತಪ್ಪ ಟಿ ಎಚ್ ಮಾತನಾಡಿ, “ರೈತ ಕೃಷಿಗೆ ಬಳಸುವ ಎಲ್ಲಾ ವಾಹನಗಳಿಗೆ ಆರ್.ಟಿ.ಓ. ಕಛೇರಿಯಲ್ಲಿ ಸರ್ಕಾರದ ನಿಗದಿತ ಫೀ ತೆಗೆದುಕೊಂಡು ಶೀಘ್ರ ಲೈಸೆನ್ಸ್ ಮಾಡಿಕೊಡಬೇಕೆಂದು ಆದೇಶಿಸಬೇಕು. ರೈತನ ಪೂರ್ವಿಕರ ಕಾಲದ ಜಮೀನಿಗೆ ವಕ್ಸ್ ಜಮೀನು ಎಂದು ಆರ್.ಟಿ.ಸಿ. ಯಲ್ಲಿ ಸೇರಿಸಿ ಅನಧಿಕೃತ ಮೊಕಾಶಿ ಟ್ರಸ್ಟ್‌ಗೆ ಆ ಜಮೀನುಗಳನ್ನು ವರ್ಗಾಯಿಸಿರುವ ಕ್ರಮವನ್ನು ರೈತ ಸಂಘ ಗಂಭೀರವಾಗಿ ವಿರೋಧಿಸುತ್ತದೆ. ಅಂತಹ ಜಮೀನನ್ನು ಮೂಲ ರೈತರಿಗೆ ಕಬ್ಬಾ ಮತ್ತು ಮಾಲೀಕತ್ವವನ್ನು ಮರಳಿ ಕೊಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು. ವಿವಿಧ ಗ್ರಾಮದ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...