ಹಾವೇರಿ | ಷೇರು ಮಾರುಕಟ್ಟೆಯ ಲಾಭದಾಸೆ ತೋರಿಸಿ ವಂಚನೆ; ಆರೋಪಿಯ ಬಂಧನ

Date:

ಷೇರು ಮಾರುಕಟ್ಟೆಯಲ್ಲಿ ಹಣ ಹಾಕಿದರೆ ಹೆಚ್ಚಿನ ಲಾಭ ಬರುತ್ತದೆಂದು ನಂಬಿಸಿ ವಂಚಿಸುತ್ತಿದ್ದ ಆರೋಪದ ಮೇಲೆ ಓರ್ವನನ್ನು ಬಂಧಿಸುವಲ್ಲಿ ಹಾವೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಂದ್ರಪ್ಪ ಶಿವಪ್ಪ ತೋಟದ ಬಂಧಿತ ಆರೋಪಿ. ಈತ ಹೆಚ್ಚು ಲಾಭ ಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಹಾಕಿಸಿಕೊಂಡು ಮೋಸ ಮಾಡುತ್ತಿದ್ದ ಎಂದು ಆರೋಪಿಸಿ ಹಾನಗಲ್ ತಾಲೂಕಿನ ಶೀಗಿಹಳ್ಳಿ ಗ್ರಾಮದ ಮನೋಜ ಹಾದಿಮನಿ ಎಂಬವರು ಹಾವೇರಿ ನಗರದ ಸಿಇಎನ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.

“ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಪ್ರತಿದಿನ ಶೇ.2ಕ್ಕಿಂತ ಹೆಚ್ಚಿನ ಲಾಭ ಕೊಡುತ್ತೇನೆಂದು ನಂಬಿಸಿದ್ದ. ನಂತರ ತನ್ನ ವಿವಿಧ ಬ್ಯಾಂಕ್ ಖಾತೆಗಳಿಗೆ ₹5.85 ಲಕ್ಷ(₹5,83,500) ಹಣ ಹಾಕಿಸಿಕೊಂಡು ನಾಪತ್ತೆಯಾಗಿದ್ದ. ಹೂಡಿಕೆ ಮಾಡಿದ ಹಣ ಮತ್ತು ಲಾಭದ ಹಣವನ್ನೂ ಕೊಡದೆ ಮೋಸ ಮಾಡಿದ್ದಾನೆ” ಎಂದು ಮನೋಜ ಹಾದಿಮನಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಚಕ್ರ​​ ಸ್ಫೋಟ; ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರ ಮೆಚ್ಚೆಗೆ

ದೂರಿನ ಆಧಾರದ ಮೇರೆಗೆ ಡಿವೈಎಸ್‌ಪಿ ಪ್ರಗ್ಯಾ ಆನಂದ್ ಮಾರ್ಗದರ್ಶನದಲ್ಲಿ ಸಿಪಿಐ ಶಿವಶಂಕರ ಗಣಾಚಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಇಎನ್ ಕ್ರೈಂ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ವಿಶೇಷ ಸೂಚನೆ: ಜನರ ಮೊಬೈಲ್​ಗೆ ಕರೆ ಮಾಡಿ ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ‌ ಆನ್‌ಲೈನ್‌ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಇಲಾಖೆ ಈ ಬಗ್ಗೆ ಜಾಗೃತಿ ಮೂಡಿಸಿದರೂ ಜನರು ಮೋಸ ಹೋಗುತ್ತಲೇ ಇದ್ದಾರೆ. ಅಪರಿಚಿತ ಕರೆಗಳಿಗೆ ಯಾರೂ ಕೂಡ ಪ್ರತಿಕ್ರಿಯೆ ನೀಡದಂತೆ ಪೊಲೀಸ್‌ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...