ಹಾವೇರಿ | ಗಾಂಧಿ ಜೀವನವೇ ಅತ್ಯಮೂಲ್ಯ ಸಂದೇಶ: ಸಾಹಿತಿ ಕಾಂತೇಶ ಅಂಬಿಗೇರ

Date:

“ಗಾಂಧೀಜಿ ಕೇವಲ ಉಪದೇಶ ಮಾಡದೇ ಸತ್ಯ, ಅಹಿಂಸೆಯ ದಾರಿಯಲ್ಲಿ ಮೌಲ್ಯಯುತ ಜೀವನವನ್ನು ಸಾಧಿಸಿದರು. ಗಾಂಧಿ ಜೀವನವೇ ಅತ್ಯಮೂಲ್ಯ ಸಂದೇಶವಾಗಿದೆ. ಮನುಕುಲದ ದಾರ್ಶನಿಕರಾದ ಗಾಂಧೀಜಿಯವರು ಸದಾ ವಿಸ್ಮಯವಾಗಿಯೇ ಕಾಣುತ್ತಾರೆ” ಎಂದು ಸಾಹಿತಿ ಕಾಂತೇಶ ಅಂಬಿಗೇರ ಅಭಿಪ್ರಾಯಪಟ್ಟರು.

ಹಾವೇರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಗುರುವಾರ ಸೌಹಾರ್ದ ಕರ್ನಾಟಕ ಆಯೋಜಿಸಿದ್ದ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದ ಸ್ಮರಣಾರ್ಥವಾಗಿ ಬೀದಿ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕವಿತೆ ವಾಚಿಸಿ ಮಾತನಾಡಿದರು.

“ಇತರರ ಖುಷಿಯಲ್ಲಿ ನಮ್ಮ ಖುಷಿ ಕಾಣಬೇಕು, ಯಾವುದೇ ವೃತ್ತಿಯಾಗಲಿ ಕನಿಷ್ಠ ಎಂಬುದಿಲ್ಲ ಎಲ್ಲವೂ ಶ್ರೇಷ್ಠ ಹಾಗೂ ಕರಕುಶಲತೆಯು ಎಲ್ಲ ಕಾರ್ಯಕ್ಕಿಂತ ಪರಮಶ್ರೇಷ್ಠವಾದುದು ಎಂಬ ಗಾಂಧೀಜಿಯವರ ತತ್ವಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಅವರು ಬೀದಿ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿ, “ಗಾಂಧೀಜಿಯವರ ಸಂದೇಶದಂತೆ ಪ್ರಸ್ತುತ ವಿದ್ಯಾರ್ಥಿ, ಯುವಜನರು ತಮ್ಮ ಬದುಕಿನಲ್ಲಿ ಶಾಂತಿ ಸೌಹಾರ್ದತೆ ಸಹಬಾಳ್ವೆ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಿದೆ” ಎಂದು ಹೇಳಿದರು.

“ಧಾರ್ಮಿಕ ಮೂಲಭೂತವಾದಕ್ಕೆ ಬಲಿಯಾಗಿ ಹುತಾತ್ಮರಾದ ಗಾಂಧೀಜಿಯವರ ಸ್ಮರಣೆಯ ಈ ದಿನದಂದು ಎಲ್ಲ ರೀತಿಯ ಹಿಂಸೆ ಮತ್ತು ದ್ವೇಷಾತ್ಮಕ ಕೃತ್ಯಗಳನ್ನು ಖಂಡಿಸುವ ಜೊತೆಯಲ್ಲಿ ಸಹಿಷ್ಣತೆ ಹಾಗೂ ಸಮಾನತೆಗಳನ್ನು ಒಂದಾಗಿಸಿಕೊಂಡ ಸಮಾಜ ನಿರ್ಮಾಣಕ್ಕೆ ಶ್ರಮಿಸುವ ಪಣತೊಡಬೇಕು” ಎಂದು ಕರೆ ನೀಡಿದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹುತಾತ್ಮ ದಿನದ ಸಂಕಲ್ಪ ಬೋಧಿಸಿ ಮಾತನಾಡಿ, “ಮಾನವಕುಲಕ್ಕೆ ಕಂಟಕವಾಗಿರುವ ಎಲ್ಲ ತರಹದ ಧಾರ್ಮಿಕ ಮೂಲಭೂತವಾದವನ್ನು ಕೊನೆಗಾಣಿಸಬೇಕು. ಭಾರತದ ಅಂತಃಸತ್ವವಾದ ಬಹುತ್ವ ಪರಂಪರೆಯನ್ನು ಉಳಿಸಿ ಬೆಳೆಸುವ ಸಂಕಲ್ಪವನ್ನು ಮಾಡಬೇಕಿದೆ” ಎಂದು ಹೇಳಿದರು.

“ಸಾಮರಸ್ಯ, ಸೌಹಾರ್ದತೆ, ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವ ಗಟ್ಟಿಗೊಳಿಸಲು ಪ್ರಜಾಸತ್ತಾತ್ಮಕ ಹೋರಾಟಗಳನ್ನು ನಡೆಸುವ ಜೊತೆಯಲ್ಲಿ ಸಂವಿಧಾನಾತ್ಮಕ ಆಶಯಗಳ ಅನುಷ್ಠಾನಕ್ಕೆ ಬದ್ದತೆಯಿಂದ ಪ್ರತಿಯೋರ್ವರೂ ಶ್ರಮಿಸಬೇಕು” ಎಂದರು.

ಬೀದಿ ಕವಿಗೋಷ್ಠಿಯಲ್ಲಿ ನೇತ್ರಾ ಅಂಗಡಿ, ಜುಬೇದಾ ನಾಯಕ, ನಾರಾಯಣ ಕಾಳೆ, ಎ.ಎಂ ಪಟವೇಗಾರ, ಗಂಗಯ್ಯ ಕುಲಕರ್ಣಿ, ರುದ್ರೇಶ ಮೊಟೆಬೆನ್ನೂರು, ಬಿ.ಡಿ ನಾಯಕ್, ಧನುಷ್ ದೊಡ್ಮನಿ ಗಾಂಧೀಜಿಯವರ ಕುರಿತು ಚನ್ನವೀರ ಕಣವಿ, ಡಿಎಸ್ ಕಣವಿ ಸೇರಿದಂತೆ ಹಿರಿಯ ಕವಿಗಳು ಬರೆದ ಕವಿತೆಗಳನ್ನು ವಾಚಿಸಿದರು.

ಕಲಾವಿದ ಶಂಕರ ತುಮ್ಮಣ್ಣನವರ ‘ದಾರಿ ಯಾವುದಯ್ಯ’ ನಾಟಕವನ್ನು ಏಕಪಾತ್ರಾಭಿನಯದ ಮೂಲಕ ಮನೋಜ್ಞವಾಗಿ ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರ ಬಂಧನ

ಕಾರ್ಯಕ್ರಮದಲ್ಲಿ ರೈತ ಮುಖಂಡ ತಿಪ್ಪಣ್ಣ ಕೂಲಿ, ನಿವೃತ್ತ ಸೈನಿಕ ಸಂಘಟನೆಯ ಜಿಲ್ಲಾ ಮುಖಂಡರಾದ ಶ್ರೀನಿವಾಸ ಯರೇಶಿಮಿ, ಕೆಎಸ್.ಡಿಸಿಎಫ್ ಮುಖಂಡ ಖಲಂದರ್ ಅಲ್ಲಿಗೌಡ್ರ, ಮಲ್ಲೇಶ ಗೌರಕ್ಕನವರ ಸೇರಿದಂತೆ ಎಸ್ಎಫ್ಐ, ಡಿವೈಎಫ್ಐ, ಸಾಹಿತಿ ಕಲಾವಿದರ ಬಳಗ, ಬಿಜಿವಿಎಸ್ ಹಾಗೂ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...