ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ: ಜಾಮೀನು ಪಡೆದು ವಿಜಯೋತ್ಸವ ಮೆರವಣಿಗೆ ನಡೆಸಿದ ಆರೋಪಿಗಳು

Date:

ಹಾವೇರಿಯಲ್ಲಿ ಅಂತಧರ್ಮೀಯ ದಂಪತಿಗಳಿಗೆ ಥಳಿಸಿ, ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳಿಗೆ ಜಾಮೀನು ದೊರೆತಿದೆ. ಜಾಮೀನು ದೊರೆತು ಹೊರ ಬಂದ ಕಾಮುಕ ಆರೋಪಿಗಳು ಹಾವೇರಿ ಅಕ್ಕಿಹಾಲೂರು ಪಟ್ಟಣದಲ್ಲಿ ಕಾರು, ಬೈಕ್‌ಗಳಲ್ಲಿ ಹಾಡು ಹಾಕಿಕೊಂಡು ವಿಜಯೋತ್ಸವ ಮೆರವಣಿಗೆ ನಡೆಸಿದ್ದಾರೆ.

ಈ ಕೃತ್ಯಕ್ಕೆ ಸಹಾಯ ಮಾಡಿದ್ದ 10 ಮಂದಿಗೆ ಈ ಹಿಂದೆಯೇ ಜಾಮೀನು ನೀಡಲಾಗಿತ್ತು. ಇದೀಗ, ಪ್ರಮುಖ ಆರೋಪಿಗಳಾದ ಆಫ್ತಾಬ್ ಚಂದನಕಟ್ಟಿ, ಮದಾರ್ ಸಾಬ್ ಮಂಡಕ್ಕಿ, ಸಮಿವುಲ್ಲಾ ಲಾಲನವರ್, ಮೊಹಮ್ಮದ್ ಸಾದಿಕ್ ಅಗಸಿಮನಿ, ಶೋಯಿಬ್ ಮುಲ್ಲಾ, ತೌಸೀಫ್ ಚೋಟಿ ಹಾಗೂ ರಿಯಾಜ್ ಸವಿಕೇರಿ ಎಂಬವರಿಗೆ ಹಾವೇರಿ ಸೆಷನ್ಸ್‌ ನ್ಯಾಯಾಲಯವು ಇತ್ತೀಚೆಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದು ಹೊರಬಂದಿರುವ ಆರೋಪಿಗಳು ತಮ್ಮ ಬೈಕ್ ಮತ್ತು ಕಾರುಗಳಲ್ಲಿ ಜೋರಾಗಿ ಹಾಡನ್ನು ಹಾಕಿಕೊಂಡು ಅಕ್ಕಿ ಆಲೂರು ಪಟ್ಟಣದಲ್ಲಿ ಮೆರವಣಿಗೆ ನಡೆಸಿದ್ದಾರೆ. ಸಂಭ್ರಮಾಚರಣೆ ನಡೆಸಿದ್ದಾರೆ.

2025ರ ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್‌ನ ನಾಲ್ಕರ್‌ ಕ್ರಾಸ್‌ ಬಳಿಕ ಹೋಟೆಲ್‌ನಲ್ಲಿ ಅಂತರ್ಧಮೀಯ ಜೋಡಿಯೊಂದು ತಂಗಿತ್ತು. ಅವರಿದ್ದ ಕೊಠಡಿಗೆ ನುಗ್ಗಿದ ಕಾಮುಕರ ಗುಂಪು ಯುವಕನಿಗೆ ಥಳಿಸಿ, ಮಹಿಳೆಯನ್ನು ಸಮೀಪದ ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಪ್ರಕರಣದಲ್ಲಿ 19 ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ, ಏಳು ಮಂದಿ ಪ್ರಮುಖ ಆರೋಪಿಗಳು, ಉಳಿದವರು ಕೃತ್ಯಕ್ಕೆ ಸಹಾಯ ಮಾಡಿದ್ದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣವು ಆರಂಭದಲ್ಲಿ ಅನೈತಿಕ ಪೊಲೀಸ್‌ಗಿರಿಯ ನಿದರ್ಶನವಾಗಿ ಬೆಳಕಿಗೆ ಬಂದಿತ್ತು. ಆ ಬಳಿಕ, ಜನವರಿ 11ರಂದು ಸಂತ್ರಸ್ತೆಯು ನ್ಯಾಯಾಲಯದ ಮುಂದೆ ಹಾಜರಾಗಿ, ತನ್ನ ಮೇಲೆ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಬಳಿಕ, ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಅತ್ಯಾಚಾರ ಎಸಗಿರುವುದು ದೃಢಪಟ್ಟಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...