10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಆದ ಘಟನೆ ಹಾವೇರಿ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಹಾವೇರಿ ಪಟ್ಟಣದ ಹೃದಯ ಭಾಗದಲ್ಲಿರುವ ದೇಸಾಯಿ ಗಲ್ಲಿಯ ಬಳಿ ಇರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಳ್ಳತನವಾಗಿದ್ದು, ಎರಡು ಕೊಣೆಯ ಬಾಗಿಲದ ಬೀಗ ಮುರಿದು ಕೊಣೆಯಲ್ಲಿ ಇಟ್ಟಿದ್ದ ಒಟ್ಟು ಹತ್ತು ಲಕ್ಷ ರೂ ಮೌಲ್ಯದ ಬಂಗಾರ ಬೆಳ್ಳಿಯ ಆಭರಣಗಳು ಹಾಗೂ ತಾಮ್ರ ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.
ಇದನ್ನು ಓದಿದ್ದೀರಾ? ಬೀದರ್ ಜಿಲ್ಲೆಗೆ 14 ಕೆಪಿಎಸ್ ಶಾಲೆ ಮಂಜೂರು
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿದೆ





