ಹಾವೇರಿ | ಭವಿಷ್ಯನಿಧಿ ಯೋಜನೆ ಅನುಷ್ಠಾನಕ್ಕೆ ಹಮಾಲಿ ಕಾರ್ಮಿಕರ ಆಗ್ರಹ

Date:

ಹಮಾಲಿ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಹಮಾಲಿ ಕಾರ್ಮಿಕ ಸಂಘಟನೆಯ ಜಿಲ್ಲಾ ಸಮಿತಿ ಪದಾಧಿಕಾರಿ ಬಸವರಾಜ ಪೂಜಾರ ಮಾತನಾಡಿ, “ಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ಮಾಡುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರ ವಹಿಸುವ ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರಿಗೆ ಪಿಂಚಣಿ, ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕ ಅಸಂಘಟಿತ ಕಾರ್ಮಿಕರ ಭವಿಷ್ಯನಿಧಿ ಯೋಜನೆಯನ್ನು ಜಾರಿ ಮಾಡಬೇಕು ಹಾಗೂ ಸೂಕ್ತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಎಪಿಎಂಸಿ ಹಮಾಲಿ ಕಾರ್ಮಿಕರಿಗೆ ಈ ಹಿಂದೆ ಪ್ರಾರಂಭಿಸಲಾದ ಕಾಯಕನಿಧಿ ಯೋಜನೆಯಡಿ ವೈದ್ಯಕೀಯ ಮರುಪಾವತಿ ಪದ್ಧತಿ ಮುಂದುವರೆಸಬೇಕು. 60 ವರ್ಷವಾದ ಹಮಾಲಿ ಕಾರ್ಮಿಕರಿಗೆ ಒಂದು ಬಾರಿ ಕನಿಷ್ಠ ಒಂದು ಲಕ್ಷ ರೂಪಾಯಿ ನಿವೃತ್ತಿ ಪರಿಹಾರ(ಗ್ರ್ಯಾಚೂಟಿ) ನೀಡಬೇಕು. ಕನಿಷ್ಠ ಎರಡು ಲಕ್ಷ ರೂಪಾಯಿಗಳಿಗೆ ಮರಣ ಪರಿಹಾರ ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

“ಮಿಲ್-ಗೋಡೌನ್-ವೇರಹೌಸ್‌ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಭವಿಷ್ಯನಿಧಿ, ವಿಮಾ ಸೌಲಭ್ಯ, ಬೋನಸ್ ಸೇರಿದಂತೆ ಅಗತ್ಯ ಕಾರ್ಮಿಕ ಕಾಯಿದೆಗಳ ಜಾರಿಯಿಂದ ವಂಚಿತರಾಗಿದ್ದಾರೆ. ಈ ಎಲ್ಲ ಕಾರ್ಮಿಕರಿಗೆ ಕಡ್ಡಾಯವಾಗಿ ಕಾರ್ಮಿಕ ಕಾನೂನುಗಳು ಅನ್ವಯಿಸಬೇಕು. ಎಲ್ಲ ವಿಭಾಗದ ಹಮಾಲರಿಗೆ ಕನಿಷ್ಠ ವೇತನ ಜಾರಿ ಮಾಡಲು ಮುತುವರ್ಜಿ ವಹಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ ಜಿಲ್ಲೆ ಸೂಫಿ ಸಂತ ಶರಣರ ನಾಡಾಗಿದೆ: ಜಿಲ್ಲಾಧಿಕಾರಿ ಟಿ ಭೂಬಾಲನ್

“ಎಲ್ಲ ವಸತಿರಹಿತ ಹಮಾಲಿ ಕಾರ್ಮಿಕರಿಗೆ ರಾಜ್ಯ, ಕೇಂದ್ರ ಸರ್ಕಾರಗಳ ವಿವಿಧ ವಸತಿ ಯೋಜನೆಗಳನ್ನು ಬಳಸಿಕೊಂಡು ಯೋಗ್ಯವಾದ ವಸತಿ ಯೋಜನೆಯನ್ನು ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

ಮಲ್ಲೇಶಪ್ಪ ಮದ್ಲೇರ, ಹನುಮಂತಪ್ಪ ಕನಕಾಪೂರ, ಹುಸೇನಸಾಬ ಏರಿಮನಿ, ಬಸವಣ್ಣೆಪ್ಪ ಕರೆಬಸಪ್ಪನವರ, ಭೀಮಣ್ಣ ಕನವಳ್ಳಿ, ಈರಪ್ಪ ವಡ್ಡರ, ರಾಜು ಮಾಳಮ್ಮನವರ, ಮೆಹಬೂಬ್ ಅಲಿ ಬಡಿಗೇರ, ಬಸವರಾಜ ಬೂದಿಹಾಳ, ರುದ್ರಪ್ಪ ಹುಬ್ಬಳ್ಳಿ, ಬೀರಪ್ಪ ಡಿಳ್ಳೆಪ್ಪನವರ, ಶಿವಪ್ಪ ಕೋಡಿಹಳ್ಳಿ, ನಿಸಾರ್ ಅಹಮದ್ ಮುಳಗುಂದ, ನಾಗಪ್ಪ ಧಾರವಾಡ, ಕುಮಾರ ದಿಂಡಿಮನಿ, ರೇವಣೆಪ್ಪ ಬರಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...