ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆಗಸ್ಟ್ 2ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ನೆಲ್ಲೂರ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಎಸ್ಎಫ್ಐ ಒತ್ತಾಯ
ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.





