ಹಾವೇರಿ | ಮರ್ಯಾದೆಗೇಡು ಹತ್ಯೆ: ಆರೋಪಿಗಳಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು: ಬಸವರಾಜ ಪೂಜಾರ

Date:

“ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ಪರಿಶಿಷ್ಟಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದಕ್ಕೆ ಏಳು ತಿಂಗಳು ಗರ್ಭಿಣಿಯಾಗಿದ್ದ ಮಾನ್ಯಾ ಪಾಟೀಲ ಮೇಲೆ ಸ್ವತಃ ತಂದೆ ಹಾಗೂ ಕುಟುಂಬಸ್ಥರು ನಡೆಸಿದ್ದ ಮರ್ಯಾದೆಗೇಡು ಭೀಕರ ಹತ್ಯೆಯು ನಾಗರೀಕ ಸಮಾಜಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಮಗಳು ಗರ್ಭಿಣಿ ಎನ್ನುವುದನ್ನು ಪರಿಗಣಿಸದೇ ಕೊಲೆಗೈದವರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು” ಎಂದು ಡಿವೈಎಫ್ಐ) ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಸರಕಾರವನ್ನು ಆಗ್ರಹಿಸಿದರು.

ಹಾವೇರಿ ಪಟ್ಟಣದ ತಹಶಿಲ್ದಾರವರ ಕಛೇರಿ ಎದುರು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ), ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ), ದಲಿತ ಹಕ್ಕುಗಳ ಸಮಿತಿ (ಡಿಎಚ್ಎಸ್), ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್), ಅಲೆಮಾರಿ ಸಮುದಾಯ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆಗಳು ಹಾಗೂ ಸಾಹಿತಿ ಕಲಾವಿದರ ಬಳಗದ ವತಿಯಿಂದ ಇಂದು ಮಾನ್ಯಾ ಪಾಟೀಲ್ ಅಮಾನವೀಯವಾಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ಹಾಗೂ ಹಂತಕರಿಗೆ ಕಠಿಣ ಶಿಕ್ಷೆಗೊಳಪಡಿಸುವಂತೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ದಲಿತ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಮಾನ್ಯಾ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಮದುವೆಯಾಗಿ ಊರಿಗೆ ಬಂದಿದ್ದ ಮಾನ್ಯಾಳನ್ನು ಆಕೆಯ ಹೆತ್ತ ತಂದೆ ಮತ್ತು ಕುಟುಂಬಸ್ಥರು ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದಿರುವ ಕ್ರೂರ ಘಟನೆಯನ್ನು ಮಾನವೀಯ ನಾಗರೀಕ ಸಮಾಜ ಸಹಿಸುವುದಿಲ್ಲ” ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಟು ಶತಮಾನಗಳ ಹಿಂದೆಯೇ ಬಸವಣ್ಣನವರು ಅಂತರಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದ್ದರು. ಸಮಾಜದಲ್ಲಿ ಇಂದಿಗೂ ಮೇಲ್ಜಾತಿಯವರ ಅಟ್ಟಹಾಸ, ಜಾತಿ ತಾರತಮ್ಯ, ಜಾತಿ ಧ್ವೇಷ, ಅಸ್ಪೃಷ್ಯತೆ, ದಲಿತರನ್ನು ಒಪ್ಪಿಕೊಳ್ಳಲಾಗದಂತ ಮನೋಸ್ಥಿತಿ ಆಳವಾಗಿದೆ ಎಂಬುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಗರ್ಭೀಣಿಯಾದ ತನ್ನ ಮಗಳನ್ನೆ ಅಮಾನುಷವಾಗಿ ತಂದೆಯೇ ಕೊಲ್ಲುವ ಜಾತಿ ಪ್ರತಿಷ್ಠೆಯು ಘನ ಘೋರವಾಗಿದೆ. ಈ ಜಾತಿ ತಾರತಮ್ಯ, ಜಾತಿ ಧ್ವೇಷ, ಅಸ್ಪೃಷ್ಯತೆ ನಿರ್ಭೀಜಗೊಳಿಸದೇ ಸಮಾಜದ ಬೆಳವಣಿಗೆ, ಸಾಮರಸ್ಯ ತರಲು ಸಾಧ್ಯವಿಲ್ಲ” ಎಂದು ಹೇಳಿದರು.

“ಮಾರ್ಯದೆ ಹತ್ಯೆ ನಡೆಸುವ ಎಲ್ಲರ ಮೇಲೂ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕುಟುಂಬಕ್ಕಿರುವ ಆತಂಕದಂತೆ ಮಾನ್ಯಾಳ ಪತಿ ವೀವೇಕಾನಂದ ದೊಡ್ಡಮನಿ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಬೇಕು” ಎಂದು ಆಗ್ರಹಿಸಿದರು.

“ಸರ್ಕಾರ ಅಂತರಜಾತಿ ವಿವಾಹವಾಗುವ ಎಲ್ಲ ಯುವಕ ಯುವತಿಯರಿಗೆ ಸೂಕ್ತ ಕಾನೂನು ರಕ್ಷಣೆ ನೀಡಬೇಕು.  ಅವರಿಗೆ ಸಾಮಾಜಿಕವಾಗಿ ಆರ್ಥಿಕ ಬಲ ತುಂಬಲು ಪ್ರೋತ್ಸಾಹ ಧನ ಹೆಚ್ಚಳಗೊಳಿಸಬೇಕು. ಮೀಸಲಾತಿ ಸೌಲಭ್ಯ ಒದಗಿಸುವುದು ಸೇರಿದಂತೆ ವಿಶೇಷ ಸೌಲಭ್ಯಗಳನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

“ಈ ರೀತಿ ಘಟನೆಗಳು ನಡೆಯದಂತೆ ಈಗಾಗಲೇ ಮರ್ಯಾದಾ ಹತ್ಯೆಗೆ ಸಂಬಂಧಿಸಿದಂತೆ ಸುಪ್ರೀಂ ‌ಕೋರ್ಟ್ ಹಲವು ಮಹತ್ವದ ಆದೇಶಗಳನ್ನು ನೀಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ದೇಶದ ಸರ್ವೊಚ್ಛ ನ್ಯಾಯಾಲಯದ ಆದೇಶಗಳನ್ನು ಬದ್ದತೆಯಿಂದ ಪಾಲಿಸುವ ಮೂಲಕ ಸಮಾಜದಲ್ಲಿ ಮರ್ಯಾದೆಗೇಡು ಹತ್ಯೆಯ ವಿರುದ್ದ ಕಠಿಣ ಕಾನೂನು ಜಾರಿಗೆ ತರಬೇಕು” ಎಂದು ಒತ್ತಾಯಿಸಿದರು. 

“ಮರ್ಯಾದೆ ಹತ್ಯೆಗಳ ವಿರುದ್ಧ ಜನಸಮುದಾಯಗಳನ್ನ ಸಂವೇದನಶೀಲಗೊಳಿಸಲು ಸರ್ಕಾರ ಮುಂದಾಗಬೇಕು. ಮರ್ಯಾದಾ ಹತ್ಯೆಗಳನ್ನ ಪ್ರೊತ್ಸಾಹಿಸುವ, ಸಹಕರಿಸುವ, ಸಹಾಯ ಮಾಡುವವರ ವಿರುದ್ಧವು ಕ್ರಮ ಕೈಗೊಳ್ಳಬೇಕು. ಯಾವ ಜಿಲ್ಲೆಯಲ್ಲಿ ಹೆಚ್ಚು ಮರ್ಯಾದೆ ಹತ್ಯೆಗಳು ಮತ್ತೆ ಮತ್ತೆ ಮರಕಳಿಸುತ್ತಿದೆಯೊ ಆ ಜಿಲ್ಲೆಯ ಜಿಲ್ಲಾಡಳಿತ ವಿಶೇಷ ಮುತುವರ್ಜಿ ವಹಿಸಿ ಜನಜಾಗೃತಿ ಕಾರ್ಯಕ್ರಮಗಳನ್ನ ಸಂಘಟಿಸಬೇಕು. ಮಹಿಳೆಯರ ಮೇಲಾಗುವ ಎಲ್ಲ ತರಹದ ದೌರ್ಜನ್ಯಗಳನ್ನು ತಡೆಗಟ್ಟಲು ನ್ಯಾ. ಜಿ.ಎಸ್ ವರ್ಮಾ ಸಮಿತಿಯ ಹಾಗೂ ಉಗ್ರಪ್ಪ ಸಮಿತಿಯ ಮಹಿಳಾ ಪರ ಕಾನೂನು ಶಿಫಾರಸ್ಸುಗಳನ್ನು ತ್ವರಿತವಾಗಿ ಹಾಗೂ ಸಮರ್ಪಕವಾಗಿ ಜಾರಿಗೊಳಿಸಬೇಕು” ಎಂದು ಸರಕಾರಕ್ಕೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ರಾಜ್ಯ ಕಾರ್ಯದರ್ಶಿ ಉಡಚಪ್ಪ ಮಾಳಗಿ, ದಲಿತ ಹಕ್ಕುಗಳ ಸಮಿತಿ (ಡಿಎಚ್ಎಸ್) ಹಾವೇರಿ ಜಿಲ್ಲಾ ಸಂಚಾಲಕರಾದ ವೀರಣ್ಣ ಎನ್ ಗಡ್ಡಿಯವರ, ಅಖಿಲ ಭಾರತ ವಕೀಲರ ಒಕ್ಕೂಟ (ಎಐಎಲ್.ಯು) ಜಿಲ್ಲಾ ಮುಖಂಡರಾದ ನಾರಾಯಣ ಕಾಳೆ, ಡಿವೈಎಫ್ಐ ಜಿಲ್ಲಾ ಮುಖಂಡರಾದ ಖಲಂದರ್ ಅಲ್ಲಿಗೌಡ್ರ, ಹರೀಶ ಘೋರ್ಪಡೆ, ಹಬೀಬ್ ಮುಲ್ಲಾ, ಅಲೆಮಾರಿ ಸಮುದಾಯ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶೆಟ್ಟಿ ವಿಭೂತಿ ನಾಯಕ್, ಕರ್ನಾಟಕ ರಾಜ್ಯ ರೈತ ಸಂಘಟನೆ ಶಹರ ಘಟಕದ ಅಧ್ಯಕ್ಷರಾದ ಸುರೇಶ ಛಲವಾದಿ, ರೈತ ಸಂಘಟನೆಯ ಜಿಲ್ಲಾ ಮುಖಂಡರಾದ ನಾಗರಾಜ ರಿತ್ತಿಕುರಬರ, ತಿರಕಪ್ಪ ಹುಳಕೆಲ್ಲಪ್ಪನವರ, ಬಹುಜನ ಸಮಾಜ ಚಳುವಳಿ ಜಿಲ್ಲಾ ಮುಖಂಡರಾದ ಎಂ.ಕೆ ಮಕಬುಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...