ಹಾವೇರಿ | ‘ಪರಿಸರ ಪತ್ರಿಕೋದ್ಯಮ’ ಪ್ರಶಸ್ತಿ ಭಾಜನರಾದ ಪತ್ರಕರ್ತ ಮಾಲತೇಶ ಅಂಗೂರ ಅವರಿಗೆ ಸನ್ಮಾನ

Date:

ರಾಜ್ಯ ಸರಕಾರದ  ವಾರ್ತಾ ಮತ್ತು ಪ್ರಚಾರ ಇಲಾಖೆ ಕೊಡುವ 2020ನೇ ಸಾಲಿನ ‘ಪರಿಸರ ಪತ್ರಿಕೋದ್ಯಮ’ ಪ್ರಶಸ್ತಿ ಭಾಜನರಾಗಿರುವ, ಹಾವೇರಿಯ ಹಿರಿಯ ಪತ್ರಕರ್ತರು ಹಾಗೂ ವನ್ಯಜೀವಿ ವಿಶಿಷ್ಟ ಛಾಯಾಗ್ರಾಹಕ ಮಾಲತೇಶ ಅಂಗೂರ ಅವರಿಗೆ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಹಾವೇರಿ ಪಟ್ಟಣದ ಸ್ವಗೃಹದಲ್ಲಿ ಅಭಿನಂದಿಸಲಾಯಿತು.

ಅಭಿನಂದಿಸಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಮಾಲತೇಶ ಅಂಗೂರ ಅವರು ಪತ್ರಿಕಾ ರಂಗದಲ್ಲಿ ಎರಡು ದಶಕಗಳಿಗೂ ಹೆಚ್ಚು ಕೆಲಸ ಮಾಡುತ್ತಿರುವ ಮಾಲತೇಶ ಅಂಗೂರ ಅವರು ಅತ್ಯಂತ ಅನುಭವಿ ಹಾಗೂ ಸಂವೇದನಾ ಶೀಲ ಪತ್ರಕರ್ತರಾಗಿರುವ ಜೊತೆಯಲ್ಲಿ ಲೇಖಕರೂ ಹೌದು. ಅವರು ಹಲವಾರು ಪುಸ್ತಕಗಳನ್ನು ಕೂಡ ಬರೆದಿದ್ದಾರೆ” ಎಂದರು.

“ವನ್ಯಜೀವಿಗಳ ಛಾಯಾಚಿತ್ರ ಸೆರೆಹಿಡಿಯುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಅಂಗೂರ ಅವರು ನಿರಂತರವಾಗಿ ಕಾಡು, ಕೆರೆಗಳಲ್ಲಿ ಸಂಚರಿಸಿ ಪ್ರಾಣಿ -ಪಕ್ಷಿಗಳು ಹಾಗೂ ಜಲಚರಗಳ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಚಿತ್ರಗಳು ರಾಜ್ಯಾದ್ಯಂತ ಜನಮನ ಸೂರೆಗೊಂಡಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶ ವಿದೇಶದಿಂದ ಆಗಮಿಸುವ  ಪ್ರಾಣಿ-ಪಕ್ಷಿಗಳ ಛಾಯಾಚಿತ್ರಗಳನ್ನು ತೆಗೆದು ಅವುಗಳ ಬಗ್ಗೆ ಮಾಹಿತಿ ಕಲೆಹಾಕಿ ಸಾರ್ವಜನಿಕರಿಗೆ ತಿಳಿಸುವರು. ಅದರಲ್ಲೂ ವಿಶೇಷವಾಗಿ ಮುಂದಿನ ಪೀಳಿಗೆಗಾಗಿ ದಾಖಲಿಸುವ ಮಹದುದ್ದೇಶದ್ದಿಂದ ವನ್ಯಜೀವಿ ಛಾಯಾಚಿತ್ರ ತೆಗೆಯುತ್ತಿರುವ ಅಪಾರ ಮಾನವೀಯ ಕಾಳಜೀಯ ಅಂಗೂರ ಅವರು ಹಲವಾರು ಸಲ ಹುಲಿ, ಕರಡಿ ಸೇರಿದಂತೆ ಕಾಡು ಪ್ರಾಣಿಗಳಿಂದ ಆಗುವ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ” ಎಂದು ಬಸವರಾಜ್ ಪೂಜಾರ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಹೊರಗುತ್ತಿಗೆ ನೌಕರರ ಪ್ರತಿಭಟನೆ; ಜಿಲ್ಲಾಧಿಕಾರಿಗೆ ಮನವಿ

ಈ ಸಂದರ್ಭದಲ್ಲಿ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಗಂಗಯ್ಯ ಕುಲಕರ್ಣಿ, ಅಮ್ಮ ಸಂಸ್ಥೆಯ ಸಂಸ್ಥಾಪಕ ನಿಂಗಪ್ಪ ಆರೇರ, ಅರೆ ಅಲೆಮಾರಿ ಸಮುದಾಯ ಸಂಘಟನೆಯ ಜಿಲ್ಲಾಧ್ಯಕ್ಷ ಶೆಟ್ಟಿ ವಿಭೂತಿ ನಾಯಕ, ಯುವ ನ್ಯಾಯವಾದಿ ನಾರಾಯಣ ಕಾಳೆ, ಬಿಎಸ್ಪಿ ಜಿಲ್ಲಾಧ್ಯಕ್ಷ ಎಂ.ಕೆ ಮಕಬುಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...