ಹಾವೇರಿ | ಭಾರತ ನಶಾ ಮುಕ್ತ ಅಭಿಯಾನ ಕಾರ್ಯಕ್ರಮ

Date:

“ದೇಶದ ಪ್ರಗತಿಗೆ ಕೊಡುಗೆ ನೀಡಬೇಕಾಗಿದ್ದ ಯುವಕರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ ಮತ್ತು ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳತ್ತಿದ್ದಾರೆ. ಈ ಯುವ ಸಮುದಾಯ ವ್ಯಸನಕ್ಕೆ ತುತ್ತಾಗದಂತೆ ಅರಿವು ಮೂಡಿಸುವ ಜವಾಬ್ದಾರಿ ನಮ್ಮೆಲ್ಲರದಾಗಬೇಕು” ಎಂದು  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲ್ಯಾಣಾಧಿಕಾರಿ ಆಶು ನಧಾಪ್ ಕರೆ ಕೊಟ್ಟರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ನಾಲ್ಕರ್ ಕ್ರಾಸ್ ರೋಶನಿ ವ್ಯಸನಮುಕ್ತಿ ಕೇಂದ್ರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ರೋಶನಿ ಟ್ರಸ್ಟ್ (ರಿ),  ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ನಶಾ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಶನಿ ಸಂಶ್ಥೆಯ ನಿರ್ದೇಶಕಿ ಅನಿತಾ ಡಿಸೋಜಾ ಮಾತನಾಡಿ, “ವ್ಯಸನಮುಕ್ತ ಸಮಾಜದ ನಿರ್ಮಾಣವನ್ನು ಮಾಡೋಣ. ದೇಶವನ್ನು ಸದೃಡಗೊಳಿಸೋಣ. ಮಾದಕ ವಸ್ತುಗಳ ನಾವಿಣ್ಯತೆಯನ್ನು ಅರಿಯದೆ ಹೋದರೆ ಮುಂದೆ ನಾವು ದೊಡ್ಡ ದುರಂತವನ್ನು ಅನುಭವಿಸಬೇಕಾಗುತ್ತದೆ. ಮದ್ಯ ಮಾಧಕ ವಸ್ತುಗಳು ಎಲ್ಲೆಂದರಲ್ಲಿ ಸಿಗುತ್ತಿರುವಾಗ ಮಕ್ಕಳು ಮತ್ತು ಯುವಕರನ್ನು ಅವುಗಳಿಂದ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವತಿಯರು ಮತ್ತು ಮಹಿಳಿಯರಿಗೆ ಮಾಧಕ ವಸ್ತುಗಳ ಅರಿವಿನ ಕುರಿತು ರಂಗೋಲಿ ಸ್ಫರ್ಧೆಯನ್ನು ಏರ್ಪಡಿಸಲಾಯಿತು, ವಿಜೇತರಿಗೆ ಬಹುಮಾನಗಳನ್ನು ವಿರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೂಡಲ್ ಅಧಿಕಾರಿ ಪೂರ್ಣಿಮಾ ಮಠದ ಮತ್ತು ಡಾ| ಅಂಕಿತ್ ಉಪಸ್ಥಿತರಿದ್ದರು.ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ವ್ಯಸಮುಕ್ತಿ ಕೇಂದ್ರದ ಆಪ್ತ ಸಮಾಲೋಚಕ ಸುಮಂತ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.  ಶಿವಕುಮಾರ ಮಾಂಗ್ಲೇನವರ ನಿರೂಪಿಸಿದರು. ಸಿ ಶಾಂತಿರವರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...