ಹಾವೇರಿ | ಆ.16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲೇಬೇಕು: ಉಡಚಪ್ಪ ಮಾಳಗಿ

Date:

ರಾಜ್ಯ ಸರ್ಕಾರವು ಆಗಸ್ಟ್ 16ರ ಕ್ಯಾಬಿನೆಟ್ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲೇಬೇಕು. ಈ ಬಗ್ಗೆ ಎಲ್ಲ ಶಾಸಕರು ಹಾಗೂ ಸಚಿವ ಸಂಪುಟದ ಎಲ್ಲರೂ ಸಹಕಾರ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, “ಒಳಮೀಸಲಾತಿ ಜಾರಿಯನ್ನು ಯಾವುದೇ ಕಾನೂನು ಕಗ್ಗಂಟು ಉಂಟಾಗದಂತೆ ಜಾರಿ ಆದೇಶ ಮಾಡಿಸುವ ಬಗ್ಗೆ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಿರಂತರವಾಗಿ ಹೋರಾಟ, ಕ್ರಾಂತಿಕಾರಿ ಪಾದಯಾತ್ರೆ, ಕ್ರಾಂತಿಕಾರಿ ರಥಯಾತ್ರೆ, ಕ್ರಾಂತಿಕಾರಿ ರಥಯಾತ್ರೆ ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಂಡು ಬರುತ್ತಿರುವ ಕರ್ನಾಟಕದ ಸಮಸ್ತ ಒಳಮೀಸಲಾತಿ ಹೋರಾಟಗಾರರು ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆ ನಡೆಸಿ, ನಾಗಮೋಹನ್ ದಾಸ್ ಅವರ ವರದಿ ಜಾರಿಗೆ ಸಂಬಂಧಿಸಿದಂತೆ ಹಿರಿಯ ವಕೀಲರು, ನಿವೃತ್ತ ಅಧಿಕಾರಿಗಳು ಮತ್ತು ರಾಜ್ಯದ ವಿವಿಧ ಸಂಘಟನೆಗಳ ಹೋರಾಟಗಾರರ ಮಧ್ಯ ಗಂಭೀರ ಚರ್ಚೆಗಳು ನಡೆದವು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಗಸ್ಟ್ 16ರ ಕ್ಯಾಬಿನೆಟ್ಟಿನಲ್ಲೇ ಒಳಮೀಸಲಾತಿ ಜಾರಿಯ ಘೋಷಣೆಯಾಗಬೇಕು. ಯಾವುದೇ ಉಪಸಮಿತಿ ರಚಿಸಿ, ಒಳಮೀಸಲಾತಿ ಜಾರಿಯನ್ನು ಮತ್ತಷ್ಟು ಕಾಲ ಮುಂದೂಡಿ, ಈಗಾಗಲೇ ವಯೋಮಿತಿ ಮೀರುತ್ತಿರುವ ಯುವಕರ ಭವಿಷ್ಯವನ್ನು ಹಾಳುಮಾಡಬಾರದು. ಒಳಮೀಸಲಾತಿ ಜಾರಿಗೆ ಎಲ್ಲ ಸಚಿವರು ಒಕ್ಕೊರಲಿನಿಂದ ಒಪ್ಪಿಗೆ ಸೂಚಿಸಬೇಕು” ಎಂದು ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...