ಹಾವೇರಿ | ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ನಮ್ಮ ಕಾಲೇಜಿನ ಹೆಮ್ಮೆ: ಪ್ರಾಂಶುಪಾಲ ಎ ಆರ್ ಹಂಡೆ

Date:

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ನಮ್ಮ ಕಾಲೇಜಿನ ಹೆಮ್ಮೆ ಕಬ್ಬೂರು ಪಿಯು ಕಾಲೇಜು ಪ್ರಾಂಶುಪಾಲ ಎ ಆರ್ ಹಂಡೆ ಹೇಳಿದರು.

ಹಾವೇರಿ ತಾಲೂಕಿನ ಕಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ಕಾಲೇಜು ಸಂಸತ್ತು, ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಹಾವೇರಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಬುನಾದಿ ಹಾಕಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಉಪನ್ಯಾಸಕರು ಸತತ ಪ್ರಯತ್ನ ಮಾಡಿರುವುದರ ಫಲವಾಗಿ ನಮ್ಮ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ ಎಂದರು. ಸರ್ಕಾರಿ ಕಾಲೇಜುಗಳಲ್ಲಿಯೂ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ಎಲ್ಲರ ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜು ಸಂಸತ್ ಉದ್ಘಾಟನೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ(ಸಿಡಿಸಿ) ಉಪಾಧ್ಯಕ್ಷ‌ ನವೀನ್ ಬೆಳ್ಳಕ್ಕಿ ನೆರವೇರಿಸಿದರು. ಹಾಗೆಯೇ ಕಾಲೇಜು ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇತಿಹಾಸ ಉಪನ್ಯಾಸಕ ಜಿ ಎಚ್‌ ವಾಲ್ಮೀಕಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸುವ ಮೂಲಕ ಅದರ ಕರ್ತವ್ಯಗಳ ಬಗ್ಗೆ ಮನವರಿಕೆ ಮಾಡಿದರು.

ಮುಖ್ಯ ಅತಿಥಿ ಶ್ರೀ ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರವಿಕುಮಾ‌ರ್ ಎಚ್ ಇ ಮಾತನಾಡಿ, “ವಿದ್ಯಾರ್ಥಿಗಳು ನಿರಂತರವಾಗಿ ಅಧ್ಯಯನ ನಡೆಸಿದಾಗ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಹಾಗೆಯೇ ಗುರು-ಶಿಷ್ಯರ ನಡುವಿನ ಸಂಬಂಧ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇರಬೇಕು. ಇಂದಿನ ಮಕ್ಕಳೇ ಮುಂದಿನ ನಾಯಕರು. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ನಾಯಕತ್ವ ಜವಾಬ್ದಾರಿ, ನಿರ್ವಹಣಾ ಸಾಮರ್ಥ್ಯ ಅಭಿವೃದ್ಧಿಪಡಿಸುವ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಕಾಲೇಜು ಸಂಸತ್ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ತಿಳಿಸಿದರು.

ಉಪನ್ಯಾಸಕ ಎಚ್ ಡಿ ಗಂಟೇರ ಮಾತನಾಡಿ, “ವಿದ್ಯಾರ್ಥಿಗಳ ನಿರಂತರ ಪರಿಶ್ರಮವೇ ವಿದ್ಯಾರ್ಥಿಗೆ ದಾರಿದೀಪವಾಗಬೇಕು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಬಸಣ್ಣ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ವಿದ್ಯಾರ್ಥಿಯು ಉನ್ನತವಾದ ಹುದ್ದೆಯನ್ನು ಅಲಂಕರಿಸಬೇಕು. ಅದನ್ನು ನಾವು ನಮ್ಮ ಊರಿನಲ್ಲಿ ನೋಡುವಂತಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಸನ್ಮಾನ: 2023-24ನೇ ಸಾಲಿನಲ್ಲಿ ಅತಿಹೆಚ್ಚು ಅಂಕಪಡೆದ ಕಾಲೇಜಿನ ವಿದ್ಯಾರ್ಥಿಗಳಾದ ನಿವೇದಿತ ಬಡಿಗೇ‌ರ್, ಸಿಂಧೂ ಬೆನಕನಹಳ್ಳಿ, ಭಾಗ್ಯಲಕ್ಷ್ಮಿ ಮಾತಾಣಗಿ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕೆ ಆರ್ ಪೇಟೆಯಲ್ಲಿ ಕಳಪೆ ಕಾಮಗಾರಿ; ಎಇಯನ್ನು ತರಾಟೆಗೆ ತೆಗೆದುಕೊಂಡ ಮುಖಂಡರು

ಪ್ರಾಸ್ತಾವಿಕ ವಾಣಿಜ್ಯಶಾಸ್ತ್ರ ಉಪನ್ಯಾಸಕ ಎಫ್ ಎಮ್ ಅನ್ಸಾರಿ ಮಾತನಾಡಿ, 2024-25ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ವರದಿ ಮಂಡಿಸಿದರು.

ರವಿ ಚಿನ್ನಿಕಟ್ಟಿ, ಹಜರತ್ ಅಲಿ, ಶಿವಕುಮಾರ, ಚಿನ್ನಪ್ಪ ಮಂಜಪ್ಪ, ಕಾಲೇಜಿನ ಉಪನ್ಯಾಸಕರುಗಳಾದ ಅಶೋಕ ಕಹಾರ, ಬೀರಪ್ಪ ಕುರುಬರ, ಆರ್ ಲಮಾಣಿ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...