ಹಾವೇರಿ | ಜನಸ್ಪಂದನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ: ಶಾಸಕ ಶ್ರೀನಿವಾಸ ಮಾನೆ

Date:

“ಹಾನಗಲ್ಲ ಜನರ ಬಳಿಗೆ ಆಡಳಿತ ತರುವ ಜನಸ್ಪಂದನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ತಾಲೂಕಿನಲ್ಲಿ ಈ ವರೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ 600ಕ್ಕೂ ಅಧಿಕ ಅರ್ಜಿಗಳ ವಿಲೇವಾರಿ ಮಾಡಲಾಗಿದೆ” ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಆಡೂರ ಗ್ರಾಮದಲ್ಲಿ  ಜಿಲ್ಲಾಡಳಿತ, ಜಿಪಂ, ತಾಲೂಕು ಆಡಳಿತ ಹಾಗೂ ತಾಪಂ ಸಹಯೋಗದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಕಂದಾಯ ಹಾಗೂ ಕೃಷಿ ಇಲಾಖೆ ಜನರ ಜೀವನಾಡಿ, ಹಾಗಾಗಿ ಈ ಇಲಾಖೆಗಳಿಗೆ ಚುರುಕು ಮುಟ್ಟಿಸುವ ಹಾಗೂ ಬದಲಾವಣೆ ಕೆಲಸ ಮಾಡಲಾಗುತ್ತಿದೆ. ಬಿ ಖಾತೆ ಸೇರಿದಂತೆ ಎಲ್ಲ ದಾಖಲೆಗಳನ್ನು ಕಂಪ್ಯೂಟರೀಕರಣಗೊಳಿಸಲಾಗುತ್ತಿದೆ. 30ರಿಂದ 40 ವರ್ಷಗಳಿಂದ ವಾಸಿಸುವವರಿಗೆ ಪಟ್ಟಾ ನೀಡುವ ಕೆಲಸ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿಗಳು ಡಾ. ವಿಜಯ ಮಹಾಂತೇಶ್   ದಾನಮ್ಮನವರ ಮಾತನಾಡಿ, “ಹಾನಗಲ್ಲ ತಾಲೂಕಿನಲ್ಲಿ ಈಗಾಗಲೇ ಆರರಿಂದ ಏಳು ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿ ಸ್ವೀಕರಿಸುವ ಅಹವಾಲುಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡಲಾಗುವುದು” ಎಂದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಮನೆಹಾನಿ ಪರಿಹಾರ, ಹೊಲಕ್ಕೆ ದಾರಿ, ಭೂಸ್ವಾಧೀನ ಪರಿಹಾರ, ಪಹಣಿಯಲ್ಲಿನ ಸರ್ಕಾರ ಕಡಿಮೆ ಮಾಡಲು ಹಾಗೂ ಕಣ್ಣಿನ ಶಸ್ತ್ರಚಿಕಿತ್ಸೆ ಹಣದ ಬೇಡಿಕೆ, ಬಿ ಖಾತಾ ಪಹಣಿ, ಬಸ್ ಸೌಲಭ್ಯ ಮುಂತಾದವುಗಳು ಅರ್ಜಿಗಳು ಬಂದಿವೆ.

819 ಮನೆಗಳ ವರದಿ ಸಲ್ಲಿಕೆ: “ಮಳೆಯಿಂದ ಹಾನಿಯಾದ 2,300 ಮನೆಗಳ ಪಟ್ಟ ಬ್ಲಾಕ್ ಆಗಿತ್ತು. ನಿಗದಿತ ಸಮಯದಲ್ಲಿ ತಳಪಾಯ ಹಾಕದ ಹಿನ್ನಲೆಯಲ್ಲಿ ಅಂತಹ ಮನೆಗಳ ಪಟ್ಟಿ ಬ್ಲಾಕ್ ಆಗಿತ್ತು. ಈ ಪೈಕಿ 819 ಮನೆಗಳ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ಎನ್ ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಅನುದಾನ ಮಂಜೂರಾಗಲಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹಾನಗಲ್ಲ ತಾಲೂಕಿನ ಆಡೂರ ಗ್ರಾಮದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿ ಸಾರ್ವಜನಿಕರ ವಿವಿಧ ಸಮಸ್ಯೆಗಳ ಅಹವಾಲು ಆಲಿಸಿದ ನಂತರ ಸುಕನ್ಯಾ ಸಮೃದ್ಧಿ ಯೋಜನೆ ಪಾಸ್ ಪುಸ್ತಕವನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ನೀಡಿ ಬಲಪಡಿಸಬೇಕು: ಎಸ್ ಎಫ್ ಐ ಒತ್ತಾಯ

ಜನಸ್ಪಂದನ ಕಾರ್ಯಕ್ರಮದಲ್ಲಿ ಆಡೂರ ಗ್ರಾಪಂ ಅಧ್ಯಕ್ಷ ಮಾರ್ತಾಂಡಪ್ಪ ಬಾರ್ಕಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಅಕ್ರಮ-ಸಕ್ರಮ ಮತ್ತು ಬಗರಹುಕುಂ ಸಮಿತಿ ಸದಸ್ಯ ಪುಟ್ಟಪ್ಪ ನರೇಗಲ್ಲ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ತಿರಕೋಳ, ಜಿಪಂ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ತಹಸೀಲ್ದಾರ್ ರೇಣುಕಮ್ಮ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಪೂಜಾರ, ತಾಪಂ ಮಾಜಿ ಸದಸ್ಯ ಎನ್.ಪಿ. ಪೂಜಾರ, ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...