ಹಾವೇರಿ | ಕಮಲ್ ಹಾಸನ್ ದುರುದ್ದೇಶ ಪೂರಿತ ಹೇಳಿಕೆ : ಕರವೇ ಖಂಡನೆ

Date:

“ಕನ್ನಡಿಗರ ಭಾವನೆಗಳ ದಕ್ಕೆ ತರುವಂತೆ ‘ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು’ ಎಂಬ ತಪ್ಪು ಮತ್ತು ದುರುದ್ದೇಶ ಪೋರಿತ ಹೇಳಿಕೆ ನಟ ರಾಜಕಾರಣಿ ಕಮಲ್ ಹಾಸನ್ ಅವರು ನೀಡಿದ್ದಾರೆ” ಎಂದು ಕರವೇ ಪ್ರವೀಣ್ ಶೆಟ್ಟಿ ಬಣ ತಾಲೂಕು ಅಧ್ಯಕ್ಷ ಭರಮಪ್ಪ ಡಮ್ಮಳ್ಳಿ ಹೇಳಿದರು.

ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಥಗ್ ಲೈಫ್ ಕಮಲ್ ಹಾಸನ್ ಅವರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯನ್ನು ತಡೆಯಲು ಆಗ್ರಹಿಸಿ. ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಈ ಸುಳ್ಳು ಮತ್ತು ಆಧಾರ ರಹಿತ ಹೇಳಿಕೆಯನ್ನು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವು ಆಘಾತವನ್ನುಂಟು ಮಾಡಿದೆ ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸದೆ ತಮ್ಮ ಹೇಳಿಕೆಗೆ ಬದ್ಧರಾಗಿರುವುದು ಕನ್ನಡಿಗರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯನಿರ್ವ ಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಕಮಲ್ ಹಾಸನ್ ಅವರು ಈ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಈ ಹಿನ್ನಲೆಯಲ್ಲಿ ಅವರ ಹೊಸ ಚಿತ್ರ ತಗ್ ಲೈಫ್ ಈ ಸಿನಿಮಾವು ಜೂನ್ 5 ತೆರೆ ಕಾಣಲು ನಿಗದಿಯಾಗಿದೆ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಅಕ್ರಮಗಳನ್ನು ಕೈಗೊಳ್ಳಬೇಕು” ಎಂದು ಎಚ್ಚರಿಕೆ ನೀಡಿದರು.

ಮನವಿ ಸಂದರ್ಭದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣ ಮುಖಂಡರು ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಅಶೋಕ್ ಬಡಿಗೇರ. ತಾಲೂಕು ಉಪಾಧ್ಯಕ್ಷ ಚಂದ್ರು ಕೂಟಿಹಾಳ  ತಾಲೂಕ ಸಂಘಟನಾ ಕಾರ್ಯದರ್ಶಿ ಈರಪ್ಪ ಬಣಕಾರ. ಹಂಸಬಾವಿ ಹೂಬಳಿ ಘಟಕದ ಅಧ್ಯಕ್ಷ ರಾಜಶೇಖರ್ ಬಳ್ಳಾರಿ, ಅಬಲೂರ ಗ್ರಾಮ ಘಟಕದ ಅಧ್ಯಕ್ಷ ರಾಜು ಸಣಬಿನ. ಚಿಕ್ಕೋಣತಿ ಗ್ರಾಮ ಘಟಕದ ಅಧ್ಯಕ್ಷ ರಮೇಶ್ ಒಬಳೇರ ಹಂಸಬಾವಿ ಗ್ರಾಮ ಘಟಕದ ಅಧ್ಯಕ್ಷರಾದ ಇಲಿಯಾಸ ದ್ಯಾಮನಕೂಪ್ಪ, ದೀಪು ಚೌಟಗೇರ, ಗುರುವಪ್ಪ ವಡ್ಡರ, ತಾಲುಕ ಮುಖಂಡರು ರಾಜು ದೂಡ್ಡ ಎಲಿವಾಳ ತಾಲೂಕು ಮುಖಂಡರು ನವೀನ್ ಸಜ್ಜನ ಶೆಟ್ಟರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...