ಹಾವೇರಿ | ಕಸಾಪ ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯಬೇಕು: ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ

Date:

ಕನ್ನಡ ಸಾಹಿತ್ಯ ಪರಿಷತ್ತು ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯುವಂತೆ ಮಾಡಲು ನವೀನ ವಿಷಯಗಳನ್ನು ಚರ್ಚೆಗೆ ಒಳಪಡಿಸಬೇಕು. ಯುವ ಜನರ ಪಾಲ್ಗೊಳ್ಳುವಿಕೆಯಿಂದ ಪರಿಷತ್ತು ಇನ್ನೂ ಹೆಚ್ಚು ಜನಮಾನಸವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.

ಹಾವೇರಿ ಪಟ್ಟಣದ ಗೆಳೆಯರ ಬಳಗ ಆವರಣದಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವಿರೂಪಾಕ್ಷಪ್ಪ ದ್ಯಾಮಣ್ಣನವರ, ದಿ. ಗದಿಗೆಪ್ಪ ಸಿದ್ದಮ್ಮನವರ, ಸಿ.ಸಿ.ಪ್ರಭುಗೌಡರ, ದಿ. ರುದ್ರಪ್ಪ ಕದರಮಂಡಲಗಿ, ಮತ್ತು ದಿ. ಚನ್ನಪ್ಪ ಚೌಶೆಟ್ಟಿ ಇವರ ದತ್ತಿನಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಕನ್ನಡ ಸಾಹಿತ್ಯವು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವುದು ಸರ್ವವಿಧಿತ. ಆದರೆ ಪ್ರಸ್ತುತ ದಿನಗಳಲ್ಲಿ ಕನ್ನಡ ಭಾಷೆ, ನೆಲ, ಜಲ ವಿಷಯಗಳಲ್ಲಿ ಅನ್ಯಾಯವಾಗುತ್ತಿರುವದು ಸಹ ಖಂಡನೀಯ. ಈ ಹಿನ್ನೆಲೆಯಲ್ಲಿ ಕಸಾಪವು ಹೊಸ ಸ್ಥಿತ್ಯಂತರಗಳನ್ನು ಎದುರಿಬೇಕಾಗಿದೆ. ನಾಡಿನ ಯುವ ಜನತೆ, ಹೊಸ ಪ್ರತಿಭೆಗಳು ಈ ಅನ್ಯಾಯದ ವಿರುದ್ಧ ಎದ್ದು ನಿಲ್ಲಬೇಕಾಗಿದೆ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದತ್ತಿ ಉಪನ್ಯಾಸ ನೀಡಿದ ಸಾಹಿತಿ ಸಿ.ಎಸ್. ಮರಳಿಹಳ್ಳಿ ಮಾತನಾಡಿ, “ಕನ್ನಡ ಸಾಹಿತ್ಯವು ಪಂಪನ ಕಾಲದಿಂದಲೂ ರಾಜಾಶ್ರಯದಲ್ಲಿ ಬೆಳೆಯಿತು. ಆದರೆ 12ನೇ ಶತಮಾನದ ವಚನ ಸಾಹಿತ್ಯವು ಯಾವದೇ ಆಶ್ರಯವಿಲ್ಲದೇ ಬೆಳೆದು, ಸರ್ವಜನಾಂಗದ ಪ್ರೀತಿಗೆ ಪಾತ್ರವಾಯಿತು. ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯವು ಅತೀ ಶ್ರೇಷ್ಠ ಕೊಡುಗೆ ನೀಡಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ದತ್ತಿದಾನಿಗಳಾದ ವಿರೂಪಾಕ್ಷಪ್ಪ ದ್ಯಾಮಣ್ಣನವರ ಮತ್ತು  ಸಿ.ಸಿ. ಪ್ರಭುಗೌಡರ ಮಾತನಾಡಿದರು. ತಾಲೂಕ ಕಸಾಪ ಅಧ್ಯಕ್ಷ ವಾಯ್.ಬಿ. ಆಲದಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಎಂ. ಓಕಾರಣ್ಣನವರ ದತ್ತಿದಾನಿಗಳ ಪರಿಚಯ ಮಾಡಿದರು.  ಕೆ.ಆರ್. ಹಿರೇಮಠ ವಚನಗಳನ್ನು ಪ್ರಸ್ತುತ ಪಡಿಸಿದರು.

ಸಮಾರಂಭದಲ್ಲಿ ಎಸ್.ಜಿ. ಸಿದ್ದಮ್ಮನವರ, ಈರಣ್ಣ ಬೆಳವಡಿ, ಹನುಮಂತಗೌಡ ಗೊಲ್ಲರ, ರೇಣುಕಾ ಗುಡಿಮನಿ  ಹಾಗೂ ಸಾಹಿತ್ಯಸಕ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...