ಹಾವೇರಿ | ಬ್ಯಾಡಗಿ ಪಟ್ಟಣದ ಮುಖ್ಯರಸ್ತೆ ಅಗಲೀಕರಣಕ್ಕೆ ಕರವೇ ಸ್ವಾಭಿಮಾನಿ ಬಳಗ ಮನವಿ

Date:

“ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣದ ಬಗ್ಗೆ ಈ ಹಿಂದೆ ಹತ್ತು-ಹಲವಾರು ಸಂಘಟನೆಗಳು ಸೇರಿ ಸುಮಾರು ವರ್ಷಗಳಿಂದ ಈ ಬಗ್ಗೆ ಹೋರಾಟ ಮಾಡುತ್ತ ಬಂದಿವೆ. ಸರಕಾರ ಸ್ಪಂದನೆ ಮಾಡದಿರುವುದು ದುರಂತ” ಎಂದು ಕರವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಬೇಸರ ವ್ಯಕ್ತಪಡಿಸಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗವತಿಯಿಂದ ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಮಾಡಬೇಕೆಂದು ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಮುಖ್ಯ ರಸ್ತೆ ಅಗಲೀಕರಣಕ್ಕೆ ಸರಕಾರ ಸ್ಪಂದಿಸದೆ ಹೋದಾಗ ಬ್ಯಾಡಗಿ ಪಟ್ಟಣದಲ್ಲಿ ಸ್ಥಳೀಯರು ಸೇರಿದಂತೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಹಾಗೂ ಇನ್ನಿತರೆ ಹತ್ತು ಹಲವಾರು ಸಂಘಟನೆಗಳು ಸೇರಿಕೊಂಡು ಬ್ಯಾಡಗಿ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡುವ ಮುಖಾಂತರ ಸರಿ ಸುಮಾರು ಹದಿನೈದು ದಿನಗಳ ಕಾಲ ಪ್ರತಿಭಟನೆಗೆ ಇಳಿದಿದ್ದವು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹೋರಾಟಕ್ಕೆ ಮಣಿದ ಸರ್ಕಾರ ಹೋರಾಟಗಾರರನ್ನು ಮನವೊಲಿಸಿ ಕೂಡಲೇ ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡುವುದರ ಜೊತೆ ಅಕ್ಕ-ಪಕ್ಕದಲ್ಲಿರುವ ಮನೆ ಮಳಿಗೆಗಳಿಗೆ ಸೂಕ್ತ ಪರಿಹಾರವನ್ನು ನೀಡಿ ಮುಖ್ಯ ರಸ್ತೆ ಅಗಲೀಕರಣ ಮಾಡುವುದಾಗಿ ಭರವಸೆಯನ್ನು ನೀಡಿ ಹೋರಾಟವನ್ನು ಹಿಂಪಡೆಯುವಂತೆ ಮಾಡಿದ್ದರು. ಆದರೆ ಇದುವರೆಗೆ ರಸ್ತೆ ಅಗಲೀಕರಣ ಆಗದೇ ಇರುವುದು ಖಂಡನೀಯ” ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠ ನುಡಿದರು.

ಕರವೇ ಸ್ವಾಭಿಮಾನಿ ಬಳಗ ತಾಲ್ಲೂಕ ಅಧ್ಯಕ್ಷ ಬಸವರಾಜ ಪಟ್ಟಣಶೆಟ್ಟಿ ಮಾತನಾಡಿ, “ಈ ಕುರಿತು ಈಗಾಗಲೇ ಅನೇಕ ಹೋರಾಟಗಳು ಆಗಿವೆ. ಕೂಡಲೇ ರಸ್ತೆ ಅಗಲೀಕರಣವನ್ನು ಹದಿನೈದು ದಿನಗಳ ಒಳಗಾಗಿ ಪ್ರಾರಂಭಗೊಳ್ಳಬೇಕು. ಆರಂಭಗೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ಸೇರಿದಂತೆ ಅನೇಕ ಸಂಘ, ಸಂಸ್ಥೆಗಳ ಜೊತೆಗೂಡಿ ಬ್ಯಾಡಗಿ ಪಟ್ಟಣವನ್ನು ಬಂದ್ ಮಾಡುವ ಮುಖಾಂತರ ಮತ್ತೆ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ದೌರ್ಜನ್ಯ ತಡೆಗೆ ಕ್ರಮ ವಹಿಸಿ ಬದಲಾವಣೆ ತನ್ನಿ: ಜಿಲ್ಲಾಧಿಕಾರಿ ಸೂಚನೆ

ಮನವಿ ಸಂದರ್ಭದಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಯೂಸೂಫ ಸೈಕಲಗಾರ, ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾಬಾಯಿ ಲಮಾಣಿ, ಬ್ಯಾಡಗಿ ತಾಲ್ಲೂಕ ಮಹಿಳಾ ಘಟಕದ ಅಧ್ಯಕ್ಷೆ ಮಹಬೂಬಿ ಕೊಪ್ಪಳ, ತಾಲ್ಲೂಕ ಯುವ ಘಟಕದ ಅಧ್ಯಕ್ಷ ಶಿವನಗೌಡ ಗಂಟೆಗೌಡ್ರ, ಹಾವೇರಿ ತಾಲ್ಲೂಕ ಅಧ್ಯಕ್ಷ ರಾಜಾಭಕ್ಷ ಮಾನೇಗಾರ, ರವಿ ಮಾಮನಿ, ಹೊನ್ನೂರಸಾಬ ಕೊಪ್ಪಳ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...