ಹಾವೇರಿ | ಎಂಇಎಸ್ ಶಿವಸೇನೆ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಕರವೇ ಸ್ವಾಭಿಮಾನಿ ಬಳಗ ಒತ್ತಾಯ

Date:

ಬೆಳಗಾವಿ ಚಳಿಗಾಲದ ಅಧಿವೇಶ ಪ್ರಾರಂಭವಾದ ಹಿನ್ನಲೆಯಲ್ಲಿ ಎಂಇಎಸ್ ಪುಂಡರು ಮತ್ತು ಶಿವಸೇನೆ ಪುಂಡರು ಸೇರಿದಂತೆ ಕರ್ನಾಟಕದ ಬಸ್ಸುಗಳನ್ನು ತಡೆದು ಜೈ ಮಹಾರಾಷ್ಟ್ರ ಎಂದು ಕರ್ನಾಟಕದ ಬಸ್ಸುಗಳ ಮೇಲೆ ಸ್ಟಿಕ್ಕರ್ ಅಂಟಿಸಿ ಪುಂಡರು ಉದ್ಧಟತನ ಮೆರೆಯುತ್ತಿದ್ದಾರೆ. ಎಂಇಎಸ್ ಹಾಗೂ ಶಿವಸೇನೆ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಹಾವೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷರು ಯಲ್ಲಪ್ಪ ಮರಾಠೆ ಮಾತನಾಡಿ, “ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ. ಎಂಇಎಸ್ ಪುಂಡರು ಕನ್ನಡ ನಾಡಿನ ಅನ್ನ ತಿಂದು, ಕರ್ನಾಟಕದ ಬಸ್ಸುಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಸ್ಟಿಕ್ಕರ್ ಅಂಟಿಸಿ ತಮ್ಮ ಉದ್ಧಟತನ ಮುಂದುವರೆಸಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಇಂತಹ ನಾಡ ದ್ರೋಹಿ ಪುಂಡರಿಗೆ ರಾಜ್ಯದಿಂದ ಗಡಿಪಾರು ಮಾಡುವುದರ ಜೊತೆಗೆ ಎಂಇಎಸ್ ಮೇಲೆ ನಿಷೇಧ ಹೇರಬೇಕು” ಎಂದು ಒತ್ತಾಯಿಸಿದರು.

“ಕ್ರಮ ಕೈಗೊಲ್ಲದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ಸೇರಿದಂತೆ ಎಲ್ಲಾ ಕನ್ನಡ ಪರ ಸಂಘಟನೆಗಳು ಸೇರಿ ಎಂಇಎಸ್ ಪುಂಡರನ್ನು ಬಗ್ಗು ಬಡಿಯಲು ಮುಂದಾಗಬೇಕಾಗುತ್ತದೆ. ಹಾಗಾಗಿ ಸರ್ಕಾರ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ನಾಡ ದ್ರೋಹಿ ಎಂಇಎಸ್ ಮತ್ತು ಶಿವಸೇನೆ ಸಂಘಟನೆಯನ್ನು ನಿಷೇಧ ಮಾಡುವುದರ ಜೊತೆಗೆ ಭಾಗಿಯಾದ ಪುಂಡರನ್ನು ರಾಜ್ಯದಿಂದ ಗಡಿ ಪಾರು ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಳಗ ರಾಜ್ಯ ಉತ್ತರ ಕರ್ನಾಟಕ ಕಾರ್ಯಧ್ಯಕ್ಷರು ಯೂಸುಫ್ ಸೈಕಲಗಾರ, ತಾಲ್ಲೂಕು ಅಧ್ಯಕ್ಷರು ರಾಜಾಭಕ್ಷ ಮಾನೇಗಾರ, ಜಿಲ್ಲಾ ಮಹಿಳಾ ಅಧ್ಯಕ್ಷರು ಗೀತಾ ಲಮಾಣಿ,  ಜಿಲ್ಲಾ ಗೌರವ ಅಧ್ಯಕ್ಷರು ಪ್ರಕಾಶ ಡೊಂಬರೆ, ಜಿಲ್ಲಾ ಉಪಾಧ್ಯಕ್ಷರು ಪ್ರದೀಪ್ ಗೌಡರ, ಮುಖಂಡರು ಬಸವರಾಜ ಪಟ್ಟಣಶೆಟ್ಟಿ, ಯೂಸುಫ್ ಕಿಲ್ಲೆದಾರ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...