ಹಾವೇರಿ | ಕಟ್ಟಡ ಕಾರ್ಮಿಕರ ಸೌಲಭ್ಯ ಸಿಗುವಲ್ಲಿ  ಮದ್ಯವರ್ತಿಗಳ ಹಾವಳಿ ತಡೆಗಟ್ಟಲು ಕರವೇ ಸ್ವಾಭಿಮಾನಿ ಬಣ ಒತ್ತಾಯ

Date:

“ಹಾವೇರಿ ಜಿಲ್ಲಾದ್ಯಂತ ಸರ್ಕಾರದಿಂದ ಪರವಾನಿಗೆ ಪಡೆದ ಕಲವೊಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಲಾಖೆಯಿಂದ ಸಂಘ ಸಂಸ್ಥೆಗಳು ಅಧಿಕಾರಿಗಳ ಜೊತೆ ಶಾಮಿಲಾಗಿ ನಿಜವಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾರ್ಡಗಳನ್ನು ಮಾಡಲು ಹಣ ವಸೂಲಿ ಮಾಡುತ್ತಿದ್ದು, ಮದ್ಯವರ್ತಿಗಳ ಹಾವಳಿ ತಡೆಗಟ್ಟಬೇಕು” ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕಕ್ಷ ಯಲ್ಲಪ್ಪ ಮರಾಠೆ ಒತ್ತಾಯಿಸಿದರು.

ಹಾವೇರಿ ಪಟ್ಟಣದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಜಿಲ್ಲಾದ್ಯಂತ ನಿಜವಾದ ಕಟ್ಟಡ ಕಾರ್ಮಿಕರಿಗೆ ಸರರ್ಕಾರದ ಸೌಲಭ್ಯಗಳು ಸಿಗಲಿ, ಮದ್ಯವರ್ತಿಗಳ ಹಾವಳಿ ಕಡಿವಾಣ ಹಾಕುವಂತೆ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಲಾಖೆ ಅಧಿಕಾರಿ ಶ್ರೀಮತಿ ತರುಂ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಕಾರ್ಮಿಕರ ಕಾರ್ಡುಗಳನ್ನು ಪಡೆಯಲು ಬೇಡಿಕೆ ಇಟ್ಟಿದ್ದು, ಒಂದು ಸಾವಿರದಿಂದ ಹದಿನೈದು ನೂರು ಪಡೆದು ಕಾರ್ಡಗಳನ್ನು ನೀಡುತ್ತಿದ್ದಾರೆ. ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಕ್ಕಳ ಮದುವೆಗೆ ಹಾಗೂ ಹೆರಿಗೆ ಭತ್ತೆ ಮಂಜೂರಮಾಡಿಸಿಕೊಳ್ಳಲು ಹತ್ತುಸಾವಿರದಿಂದ ಹದಿನೈದು ಸಾವಿರವರೆಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ.  ಈ ಅಕ್ರಮದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಮದ್ಯವರ್ತಿಗಳ ಸಂಘ ಸಂಸ್ಥೆಗಳ ಪರವಾನಿಗೆಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಮಿಕರಿಗೆ ವಿತರಿಸುವ ಕೀಟ್ ಗಳನ್ನು ಯಾವುದೇ ಮದ್ಯವರ್ತಿಗಳ ಕೈಗೆ ಸಿಗದೆ ನೇರವಾಗಿ ಕಾರ್ಮಿಕರಿಗೆ ತಲುಪುವಂತೆ ಕ್ರಮ ಕೈಗೊಳಬೇಕು. ನಿಜವಾದ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ನ್ಯಾಯವನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.

“ಸರ್ಕಾರದ ಸೌಲಭ್ಯಗಳು ನೇರವಾಗಿ ಕಾರ್ಮಿಕರಿಗೆ ಸಿಗವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರವೇ ಸ್ವಾಭಿಮಾನಿ ಬಣ ವತಿಯಿಂದ ಅಕ್ರಮ ಎಸಗುವವರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಅಧ್ಯಕ್ಷೆ ಗೀತಾಬಾಯಿ ಲಮಾಣಿ, ಜಿಲ್ಲಾಪ್ರಧಾನ ಕಾರ್ಯದರ್ಶಿ ಯೊಸುವ ಸೈಕಲಗಾರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಖಲಂದರ ಎಲೆದಹಳ್ಳಿ, ಹಾವೇರಿ ತಾಲೂಕ ಮಹಿಳಾ ಅಧ್ಯಕ್ಷ ನಾಗಮ್ಮ ಕಾಳೇರ, ಹಾನಗಲ ತಾಲೂಕ ಮಹಿಳಾ ಅಧ್ಯಕ್ಷ ನೇತ್ರಾ ಕಟ್ಟಿಮನಿ, ಬ್ಯಾಡಗಿ ತಾಲೂಕ ಅಧ್ಯಕ್ಷ ಬಸವರಾಜ ಪಟ್ಟಿನಶೆಟ್ಟಿ, ದಾದಾಪೀಠ ಮಲ್ಲಾಡದ, ರಾಜಾಭಕ್ಷ ಮಾನೆಗಾರ, ಮೈಮುದ್ದಿನ ಸಾಬ ಮುಲ್ಲಾ, ಹಬೀಬ ದಾರುಗಾರ, ಚಂದ್ರಕಲಾ ಕಟ್ಟಿಮನಿ, ನೇತ್ರಾವತಿ ಕನವಳ್ಳಿ, ಮಮತಾ ಹೊನ್ನಜ್ಜಿಯವರ, ಸನ್ನಾವುಲ್ಲಾ ಪುರದಗೇರಿ, ದ್ಯಾಮಕ್ಕ ನಾಯಕರ, ಕಮಲ್ಲಮ್ಮ ಲಕಮಾಪುರ, ಹೊನ್ನುರಸಾಬ ಕೊಪ್ಪಳ, ಶರಣಪ್ಪ ಲಕಮಾಪುರ, ರವಿ ಮಾಮುನಿ, ಯಲ್ಲಮ್ಮ ಹಂಚಿನಮನಿ, ನಿಂಗಮ್ಮ ಕಟ್ಟಿಮನಿ, ಶಾಂತಮ್ಮ ವಾಲ್ಮೀಕಿ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...