ಹಾವೇರಿ | ಹಣ ಕಟ್ಟಿಸಿಕೊಂಡು, ಬಡವರಿಗೆ ನಿವೇಶನ ನೀಡಿಲ್ಲ: ಕರವೇ ಗಜಪಡೆ ಆರೋಪ

Date:

ಬಡವರು ತಮ್ಮದೇ ನಿವೇಶನ ಇರಬೇಕೆಂಬ ಬಹಳ ಆಸೆ, ಕನಸುಗಳನ್ನು ಇಟ್ಟುಕೊಂಡು ಸರ್ಕಾರಕ್ಕೆ ಹಣ ತುಂಬಿದ್ದಾರೆ. ಬಡವರಿಗೆ ನಿವೇಶನ ನೀಡದೆ ಎರಡ್ಮೂರು ವರ್ಷ ಕಳೆದರೂ ಫಲಾನುಭವಿಗಳಿಗೆ ನಿವೇಶನ ನೀಡುತ್ತಿಲ್ಲ ಎಂದು ಕರವೇ ಗಜಪಡೆ ಹಾವೇರಿ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಆರೋಪಿಸಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಸಂಘಟನೆಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಹಾಗೂ ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“500 ಬಡ ಕುಟುಂಬಗಳಿಂದ ಸರಿಸುಮಾರು ತಲಾ ₹30,000 ಹಣ ಕಟ್ಟಿಸಿಕೊಂಡು ರಶೀದಿ ನೀಡಿ, 2 ವರ್ಷ ಕಳೆದರೂ ಯಾರೊಬ್ಬರಿಗೂ ನಿವೇಶನ ನೀಡಿಲ್ಲ. ಫಲಾನುಭವಿಗಳು ಪುರಸಭೆ ಅಧಿಕಾರಿಗಳನ್ನು ಕೇಳಿದಾಗ, ಸುಳ್ಳು ಭರವಸೆಗಳನ್ನು ಕೊಟ್ಟು ಕಳುಹಿಸುತ್ತಿದ್ದು, ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ.‌ ಹಾಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಬಡವರಿಗೆ ನಿವೇಶನ ನೀಡಲು ಒಂದು ಕಮಿಟಿ ರಚನೆ ಮಾಡಿ, ನಿಜವಾದ ಬಡವರಿಗೆ ನಿವೇಶನ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ದಲಿತ ಮಹಿಳೆಗೆ ಅವಮಾನ; ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಕ್ಷಮೆಯಾಚನೆಗೆ ಆಗ್ರಹ

“ಒಂದು ವೇಳೆ ಬಡವರಿಗೆ ನಿವೇಶನ ನೀಡದೆ ಹೋದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗುವುದು” ಎಂದು ಯಲ್ಲಪ್ಪ ಮರಾಠೆ ಎಚ್ಚರಿಕೆ ನೀಡಿದರು.

ಕರವೇ ಗಜಪಡೆ ತಾಲೂಕ ಅಧ್ಯಕ್ಷ ಬಸವರಾಜ ಪಟ್ಟಣಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಯೊಸುಫ್ ಸೈಕಲಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪರಪ್ಪಗೌಡ್ರ, ಜಿಲ್ಲಾ ಗೌರವಾಧ್ಯಕ್ಷ ಗಂಗಾಧರಯ್ಯ ಪಾಟೀಲ್, ರವಿ ಮಾಮನಿ, ಶಂಕ್ರಯ್ಯಾ ವಸ್ತ್ರದ, ಹನುಮಂತಪ್ಪ ತಳವಾರ, ಹೂನ್ನೂರಸಾಬ ಕೊಪ್ಪಳ, ಶಿವನಗೌಡ್ರ ಗಂಟಿಗೌಡ್ರ, ಈರಪ್ಪ ಅಂಗಡಿ, ಮಾಲತೇಶ ಈರಣ್ಣ ಮುದಿಯಪ್ಪನವರ್, ವಾಗೀಶ ಎಮ್ಮಿ, ಶಾಂತಾ ಪಟ್ಟಣಶೆಟ್ಟಿ, ಭೂಮಿಕಾ ಪಟ್ಟಣಶೆಟ್ಟಿ, ಮಂಜಣ್ಣ ಯಬಸೂರ, ಸಲ್ಮಿಂಸಾಬ ಆಡೂರು, ಶರಣಯ್ಯ ಹಿರೇಮಠ್ ಸೇರಿದಂತೆ ಬಹುತೇಕ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...