ಹಾವೇರಿ | ಕೀರ್ತನೆಗಳು ಜನರ ಬದುಕನ್ನು ತಿದ್ದಿತ್ತವೆ: ಶಾಸಕ ಪ್ರಕಾಶ ಕೋಳಿವಾಡ

Date:

“ಸಾಂಸ್ಕೃತಿಕ ಕಾರ್ಯಕ್ರಮಗಳು ಭಜನೆ ಪುರಾಣ ಕೀರ್ತನೆಗಳು ಜನರ ಬದುಕನ್ನು ತಿದ್ದಿ ಸಂಸ್ಕಾರವಂತರನ್ನಾಗಿಸುವ ಹಾಗೂ ಸಮಾಜವನ್ನು ನಿಯಂತ್ರಿಸುವ ಶಕ್ತಿಯಾಗಿವೆ” ಶಾಸಕ ಪ್ರಕಾಶ ಕೋಳಿವಾಡ ಅವರು ಹೇಳಿದರು.

ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲ್ಲೂಕಿನ ಕುಪ್ಪೇಲೂರು ಗ್ರಾಮದಲ್ಲಿ ಮಾತೋಶ್ರೀಮಹದೇವಕ್ಕ ಮಂಗಳವಾದ್ಯ ಮತ್ತು ಸಂಗೀತ ತರಬೇತಿ ಸಂಸ್ಥೆ ಯವರು ನಾಗರ ಪಂಚಮಿ ಹಬ್ಬದ ಅಂಗವಾಗಿ ಹಾಗೂ ಆಂಜನೇಯ ಸ್ವಾಮಿ ಭಜನಾ ಸಂಘದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.

“ಗ್ರಾಮೀಣ ಪರಿಸರದಲ್ಲಿ ಸಾಂಸ್ಕೃತಿಕ ವಾತಾವರಣ ಸೃಷ್ಟಿಯಾದರೆ ಮಾನಸಿಕ ಶಾಂತಿಯು ಸಾಮಾಜಿಕ ಕ್ಷೇಮವೂ ಸುಭದ್ರವಾಗಿರುತ್ತದೆ” ಎಂದು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿವ್ಯ ಸಾನಿಧ್ಯ ವಹಿಸಿದ್ದ ಕುಪ್ಪೇಲೂರಿನ ಸಿದ್ದಾರೂಡ ಮಠದ ಪೂಜ್ಯ ಶ್ರೀ ಪ್ರಿಯಾನಂದ ಮಹಾಸ್ವಾಮಿಗಳು ಮಾತನಾಡಿ, “ಸಜ್ಜನರ ಸಂಗದಿಂದ ಸಂಸ್ಕಾರ ಸಂಸ್ಕೃತಿ ಬೆಳೆಯುತ್ತದೆ. ಸತ್ ಚಿಂತನೆ ಸದ್ವಿಚಾರವಂತ ಸುಸಂಸ್ಕೃತ ವ್ಯಕ್ತಿತ್ವದಿಂದ ಆರೋಗ್ಯಪೂರ್ಣ ಯೋಗ್ಯ ಸಮಾಜ ನಿರ್ಮಾಣ ಸಾಧ್ಯ ಎಂದು” ನುಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕುಪ್ಪೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಖಾ ದಾಸಪ್ಪ ಮಾದೇನಹಳ್ಳಿ ವಹಿಸಿದ್ದರು. ಮುಖ್ಯ ಅತಿಥಿಗಳ ಛಲವಾದಿ ಮಹಾಸಭಾ ಜಿಲ್ಲಾ ಅಧ್ಯಕ್ಷ ಮಲ್ಲೇಶ್ವಪ್ಪ ಮದ್ಲೇರ, ಗ್ರಾ ಪಂ ಉಪಾಧ್ಯಕ್ಷ ರಾಮಪ್ಪ ಸಿರಿಗೆರೆ, ಗದಿಗೆಪ್ಪ ಬಿರಣ್ಣನವರ, ಸುರೇಶ ಬಾನುವಳ್ಳಿ, ಬಸಪ್ಪ ಆಡಿನವರ, ಮಾಲತೇಶ ಮಣಕೂರ, ಮಾಲತೇಶ ನ್ಯಾಮತಿ, ದೇವೇಂದ್ರಪ್ಪ ಕೊಲೇರ, ರಾಮನಗೌಡ ಸಂಕನಗೌಡ್ರ,ಪಾಲಾಕ್ಷಪ್ಪ ಕಡೆಮನಿ, ಹನುಮಂತಪ್ಪ ಬತ್ತೆರ, ಹನುಮಂತಪ್ಪ ಸಂಕಣ್ಣನವರ, ಮೃತುಂಜಯ ಮರಡೂರ, ವೆಂಕಟೇಶ ಮಾಳನಾಯಕನ, ಹಳ್ಳಿ ಮಾತೋಶ್ರೀಮಹದೇವಕ್ಕ ಮಂಗಳವಾದ್ಯ ಮತ್ತು ಸಂಗೀತ ತರಬೇತಿ ಸಂಸ್ಥೆ ಅಧ್ಯಕ್ಷ ಬಸವರಾಜ ಸಾವಕ್ಕನವರ, ಕಾರ್ಯದರ್ಶಿ ಗೌತಮ್ ಸಾವಕ್ಕನವರ, ಹಾಗೂ ಆಂಜನೇಯಸ್ವಾಮಿ ಭಜನಾ ಸಂಘದ ಪದಾಧಿಕಾರಿಗಳು, ಕುಮದ್ವತಿ ಸಾಂಸ್ಕೃತಿಕ ಕಲಾ ಸಂಘ ಕುಪ್ಪೇಲೂರು ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹದಿನೈದು ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...