ಹಾವೇರಿ | ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸಾವು: ಪ್ರಾಣಿ ಸಂರಕ್ಷಣಾ ಕ್ರಮ ಅಗತ್ಯ

Date:

ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ.

ಮೂರು ವರ್ಷದ ಚಿರತೆಮರಿ ರಸ್ತೆ ದಾಟುತ್ತಿದ್ದ ವೇಳೆ ವಾಹನ ಸವಾರರು ಹಿಟ್ ಆಂಡ್ ರನ್‌ ಮಾಡಿ ಹೋಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ನಿಧಾನವಾಗಿ ಚಲಿಸಬೇಕಾಗಿದ್ದ ವಾಹನ ಜೋರಾಗಿ ಹೋಗಿ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ.

ಘಟನೆಯ ಬಳಿಕ ಅಪರಿಚಿತ ವಾಹನದ ಪತ್ತೆಗಾಗಿ ಇಲಾಖೆ ಸಿಬ್ಬಂದಿ, ಪೊಲೀಸರು ಶೋಧ ಮಾಡುತ್ತಿದ್ದಾರೆ. ಸ್ಥಳಕ್ಕೆ ಶಿಗ್ಗಾಂವಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಡಾ. ಎಂ. ಎಂ. ಕಲಬುರ್ಗಿಯವರು ಕನ್ನಡ ಪಾಂಡಿತ್ಯ ಪರಂಪರೆಯ ಗಣ್ಯ ವಿದ್ವಾಂಸರು: ಡಾ. ಆರ್. ಎಂ. ಕಲ್ಲನಗೌಡರ

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ತಡಸ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿದೆಯಾದರೂ ಕರೆಗೆ ಲಭ್ಯವಾಗಿಲ್ಲ.

ಹಾವೇರಿಯ ಈ ಚಿರತೆ ಸಾವು ಕೇವಲ ಒಂದು ಘಟನೆಯಲ್ಲ. ಮಾನವ-ಪ್ರಾಣಿ ಸಂಘರ್ಷದ ಸಂಕೇತ.‌ ಹಾವೇರಿ ಮತ್ತು ಚಿಕ್ಕಮಗಳೂರು ಭಾಗಗಳಲ್ಲಿ ಒಟ್ಟರೆಯಾಗಿ ಈಗಾಗಲೇ 15ಕ್ಕೂ ಅಧಿಕ ಚಿರತೆಗಳು ಸಾವನ್ನಪ್ಪಿರುವ ವರದಿ ಇದೆ. ವಾಹನ ಸವಾರರು ಅರಣ್ಯಪ್ರದೇಶಗಳಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕು. ಸರ್ಕಾರವು ಹೆದ್ದಾರಿಗಳಲ್ಲಿ ಪ್ರಾಣಿ ಸಂರಕ್ಷಣಾ ಕ್ರಮಗಳನ್ನು(ಉದಾ: ಅಂಡರ್‌ಪಾಸ್) ತ್ವರಿತಗೊಳಿಸಬೇಕು. ಇಲ್ಲದಿದ್ದರೆ, ಕರ್ನಾಟಕದ ಚಿರತೆ ಸಂಖ್ಯೆ(ಸುಮಾರು 1,200) ಇನ್ನಷ್ಟು ಕಡಿಮೆಯಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...