ಹಾವೇರಿ | ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು: ಫಾದರ್ ಜೆರಾಲ್ಡ್  ಡಿಸೋಜಾ

Date:

“ದೈಹಿಕ ಹಸಿವಿಗೆ ಹಾಲು ರೊಟ್ಟಿ, ಹಣ್ಣು ಬೇಕು. ಆದರೆ ಜ್ಞಾನದ ಹಸಿವಿಗೆ ಕೌಶಲ್ಯಗಳು ಬೇಕಾಗುತ್ತದೆ. ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು. ಆಗ ಸ್ಪರ್ಧಾತ್ಮಕ ಬದುಕಿನಲ್ಲಿ ನಾಯಕತ್ವದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ” ಎಂದು ಲೋಯಲಾ ವಿಕಾಸ ಕೇಂದ್ರ ನಿರ್ದೇಶಕರು ಫಾದರ್ ಜೆರಾಲ್ಡ್  ಡಿಸೋಜಾ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ರೋಷನಿ ಟ್ರಸ್ಟ್ ಸಂಸ್ಥೆಯಲ್ಲಿ ಯುವಜನ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

“ಕಲಿತದ್ದನ್ನು ವಿವೇಚನೆಯಿಂದ ಆಲೋಚಿಸಬೇಕು. ಆಲೋಚಿಸಿದ್ದನ್ನು ಭವಿಷ್ಯತ್ತಿನಲ್ಲಿ ರೂಪಗೊಳ್ಳಲು ಅಳವಡಿಕೊಳ್ಳಬೇಕು. ಇಂತಹ ಕಾರ್ಯಾಗಾರ ನಿಮ್ಮ ವ್ಯಕ್ತಿತ್ವ, ಆಲೋಚನಾ ಕ್ರಮ ಬದಲಾವಣೆ ಉಪಯುಕ್ತವಾಗಿದೆ. ಇಂತಹ ಕಾರ್ಯಾಗಾರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಜುನಾಥ್ ಎಮ್ ಕಾರ್ಯಕ್ರಮದ ಪ್ರಸ್ತಾವಿಕ ಮಾತನಾಡಿ, “ಅಂಬೇಡ್ಕರ್ ಅವರ ಜೀವನ ಬಹು ದೊಡ್ಡದು. ಅವರ ಹೋರಾಟ ಬದುಕನ್ನು ನಾವೆಲ್ಲರೂ ಅಳವಡಿಸಿಳ್ಳಲು ಇಂತಹ ಕಾರ್ಯಗಾರಗಳು ಬಹಳ ಮುಖ್ಯ ಆಗುತ್ತವೆ. ಗುರುಗಳ, ತಂದೆತಾಯಿ ಮಾತುಗಳನ್ನು ಕೇಳಬೇಕು. ಜೀವನದಲ್ಲಿ ಶಿಸ್ಟನ್ನು ಅಳವಡಿಸಿಕೊಳ್ಳಬೇಕು. ಪ್ರೀತಿ, ವಿಶ್ವಾಸ ನಂಬಿಕೆಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ಸಮಾಜ ಏನಾಗಿದೆ, ಯಾವ ಕಡೆ ನಡೆದಿದೆ ಎಂಬುದನ್ನು ಇಂದಿನ ಯುವಕರು ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸಬೇಕು” ಎಂದರು.

ರೋಷನಿ ಸಂಸ್ಥೆಯ ಮುಖ್ಯಸ್ಥರು ಸಿಸ್ಟೆರ್ ಜಾನೆಟ್ ಪಿಂಟೋ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಸಮಾಜದಲ್ಲಿ ಆಗುವಂತ ಸಮಸ್ಯೆಗಳನ್ನು ನಾವೇ ಕಲ್ಪಿಸಿಕೊಳ್ಳಲು ಆಗದಂತಹ ಪರಿಸ್ಥಿತಿ ನಮ್ಮಿಂದಲೇ ಆಗಿದೆ. ಅದರಿಂದ ಆಚೆ ಬಂದು ನಾವು ನೀವೆಲ್ಲ ಆಲೋಚಿಸಬೇಕಿದೆ. ನಮ್ಮ ಸಂವಿಧಾನದಲ್ಲಿ ಸಮಾನತೆ, ಭ್ರಾತೃತ್ವ, ಸ್ವಾತಂತ್ರ ಒಳಗೊಂಡು ರೂಪಿತವಾಗಿದೆ. ಹಾಗಾಗಿ ಸಂವಿಧಾನದ ಮೂಲಕ ಸಮಾಜದ ಎಲ್ಲ ಜನರನ್ನು ಗೌರವಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿ‌ಪಿ‌ಐ ಪ್ರತಿಭಟನೆ

ಕಾರ್ಯಕ್ರಮದಲ್ಲಿ ರೋಷನಿ ಸಂಸ್ಥೆಯ ನಿರ್ದೇಶಕರು ಸಿಸ್ಟೆರ್ ಅನಿತಾ ಡಿಸೋಜಾ ಆಯೋಜನಕರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೈರೋಜ್ ಅಹಮ್ಮದ ಶಿರಬಡಗಿ, ನಾಗರಾಜ್ ಪೂಜಾರ್, ರಂಜಿತಾ ಗೊಲ್ಲರ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಶಿಬಿರರ್ಥಿಗಳು ಉಪಸ್ಥಿತರಿದ್ದರು. ಮಂಜುನಾಥ್ ಗೌಳಿ ನಿರೂಪಿಸಿದರು. ಎಸ್ ವಿ ಪಾಟೀಲ್ ಸ್ವಾಗತಿಸಿದರು. ಫಕಿರೇಶ್ ಗುಂಡಳ್ಳಿ ವಂದನಾರ್ಪಣೆ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...