ಹಾವೇರಿ | ಮದ್ಯ ಮಾರಾಟ ನಿಯಂತ್ರಣ ಮಾಡಬೇಕು: ಮದ್ಯ ನಿಷೇಧ ಆಂದೋಲನ

Date:

“ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು. ಹಾಗೂ ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47 ರಂತೆ ದೇಶ ಮಧ್ಯ ನಿಷೇಧದತ್ತ ಸಾಗಬೇಕು” ಎಂದು ಮದ್ಯ ನಿಷೇಧ ಆಂದೋಲನ-ಕರ್ನಾಟಕ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಮದ್ಯ ನಿಷೇಧ ಆಂದೋಲನ ಮುಖಂಡರು ನಿಂಗಮ್ಮ ಮಾತನಾಡಿ, “ಮದ್ಯ ನಿಷೇಧ ಆಂದೋಲನವನ್ನು ಕಳೆದ ಹತ್ತು ವರ್ಷಗಳಿಂದ ಹಲವಾರು ಪ್ರಗತಿಪರ ಸಂಘಟನೆಗಳು ರೈತ, ದಲಿತ, ಕಾರ್ಮಿಕ ಸಂಘಟನೆಗಳು ಬೆಂಬಲಿಸುತ್ತ ಬಂದಿವೆ” ಎಂದರು.

“ಹರಿಯಾಣ, ಮಹಾರಾಷ್ಟ್ರ ಹಾಗೂ ಇತರ ಹಲವಾರು ರಾಜ್ಯಗಳಲ್ಲಿ ಮಹಿಳಾ ಗ್ರಾಮ ಸಭೆಗಳಿಗೆ ಪರಮಾಧಿಕಾರ ಕೊಡಲಾಗಿದೆ. ಇಲ್ಲಿಯ ಪಂಚಾಯತ್ ಕಾನೂನಿನಂತೆ ರಾಜ್ಯ ಸರ್ಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಪರವಾನಿಗೆ ಕೊಡಲು ಅಥವಾ ರದ್ದು ಮಾಡಲು ಮಹಿಳಾ ಗ್ರಾಮ ಸಭೆಯಲ್ಲಿ ಒಪ್ಪಿಗೆ ದೊರೆಯಬೇಕು. ಮಹಿಳಾ ಗ್ರಾಮಸಭೆಯ ಠರಾವಿಗೆ ಮಾನ್ಯತೆ ನೀಡಲೇಬೇಕು. ಕರ್ನಾಟಕದ ಪಂಚಾಯತ್ ರಾಜ್ ಕಾನೂನಿನಲ್ಲಿ ಈ ತರದ ಒಂದು ಅಂಶ 2016ರ ತನಕ ಇತ್ತು. ಆದರೆ ಆ ಸಮಯದಲ್ಲಿ ಇದ್ದ ಸರಕಾರ ಇದನ್ನು ತೆಗೆದು ಹಾಕಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಕಡೆ ಪರವಾನಗಿ ಪಡೆದ ಅಂಗಡಿಗಳ ಸಮಸ್ಯೆಯಾದರೆ, ಅದಕ್ಕಿಂತ ಹೆಚ್ಚು, ಮನೆ ಮನೆಗಳಲ್ಲಿ, ಪಾನ್ ಶಾಪ್, ಕಿರಾಣ ಅಂಗಡಿ, ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದ್ದು, ಸಮಾಜವನ್ನು ಕೆಟ್ಟ ದಾರಿಗೆ ಒಯ್ಯುತ್ತಿದೆ. ಹಳ್ಳಿಗಳಲ್ಲಿ ಸಣ್ಣ ಸಣ್ಣ ಮಕ್ಕಳು ಮದ್ಯ ಸೇವನೆ ಆರಂಭಿಸಿದ್ದಾರೆ. ಇದೇ ಪದ್ಧತಿ ಮುಂದುವರೆದರೆ ಕರ್ನಾಟಕ ರಾಜ್ಯವೂ ಪಂಜಾಬ್ ರೀತಿಯಲ್ಲಿ ಒಂದು ಹಂತದ ಯುವ ಪೀಳಿಗೆಯನ್ನು ಕಳೆದುಕೊಳ್ಳುವುದು ನಿಶ್ಚಿತ” ಎಂದರು.

“ಹಾಗಾಗಿ ನಮ್ಮ ಬೇಡಿಕೆ ಇಷ್ಟೇ. ಪ್ರತಿ ಹಳ್ಳಿಯಲ್ಲಿ ಮಹಿಳೆಯರ ಜಾಗೃತ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಅರೆ ನ್ಯಾಯಿಕ ಅಧಿಕಾರ (quasi judiciary power) ಕೊಡಬೇಕು. ಯಾಕಂದರೆ ಕಳೆದ ಹತ್ತು ವರ್ಷಗಳಲ್ಲಿ ವೇದಿಕೆ ಹಲವಾರು ಹಳ್ಳಿಗಳಿಂದ ಹೆಸರು ಸಮೇತ ಆಕ್ರಮ ಮದ್ಯ ಮಾರಾಟಗಾರರ ಪಟ್ಟಿಯನ್ನು ಪೊಲೀಸ್ ಹಾಗೂ ಅಬಕಾರಿ ಇಲಾಖೆಗೆ ಕೊಟ್ಟು ಬಂದಿದ್ದಾರೆ. ಆದರೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬದಲಿಗೆ ವರ್ಷದಿಂದ ವರ್ಷಕ್ಕೆ ಆಕ್ರಮ ಮಾರಾಟ ಹೆಚ್ಚುತ್ತಿದೆ” ಎಂದು ಕಿಡಿಕಾರಿದರು.

“ಈ ಎರಡು ಬೇಡಿಕೆಗಳನ್ನು ಸರ್ಕಾರ ತಕ್ಷಣ ಚರ್ಚಿಸಿ ಕ್ರಮ ಕೈಗೊಲ್ಲಬೇಕು. ಇಲ್ಲವಾದಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು 25 ನವಂಬರ್ 2025 ರಂದು ಬೆಂಗಳೂರಲ್ಲಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಮಾಡುವ ಪರಿಸ್ಥಿತಿ ಬರುತ್ತದೆ. ತಾವು ತಕ್ಷಣ ಈ ಬೇಡಿಕೆಗಳನ್ನು ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.

ಮನವಿ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...