ಹಾವೇರಿ | ಅತ್ತಿಗೆ, ಎರಡು ಮಕ್ಕಳ ಕೊಲೆ ಮಾಡಿ ತಲೆಮರೆಸಿಕೊಂಡ ಮೈದುನ

Date:

ಅಣ್ಣ- ತಮ್ಮನ ವೈಮನಸ್ಸು ಎರಡು ಮಕ್ಕಳು ಮತ್ತು ಅಣ್ಣನ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಯಳ್ಳೂರ ಗ್ರಾಮದ ಕುಮಾರ ಚನ್ನಬಸನಗೌಡ ಮರಿಗೌಡರ (35) ತನ್ನ ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ. 32 ವರ್ಷದ ಗೀತಾ, ಹತ್ತು ವರ್ಷದ ಅಕುಲ್ ಗೌಡ, ಹಾಗೂ ಆರು ವರ್ಷದ ಅಂಕಿತಾ ಹತ್ಯೆಯಾದವರು.

ಚನ್ನಬಸವನಗೌಡ ಮರಿಗೌಡರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಅತ್ತಿಗೆ ಗೀತಾ ಮತ್ತು ಮಕ್ಕಳಾದ ಅಕುಲ್‌ ಗೌಡ, ಅಂಕಿತಾ ತಲೆಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಮನೆಯಲ್ಲೇ ಮಲಗಿದ್ದ ಹೊನ್ನೇಗೌಡನ ತಾಯಿ ಘಟನೆಯನ್ನು ಕಂಡು ಕಿರುಚಾಡಿದಾಗ ಗ್ರಾಮಸ್ಥರು ಸೇರಿಕೊಂಡಿದ್ದಾರೆ. ಅಕುಲ್‌ಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಗೀತಾ ಮತ್ತು ಅಂಕಿತಾಳನ್ನು ಹಾನಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊನ್ನೇಗೌಡ ಮರಿಗೌಡರ ಕಳೆದ 15 ವರ್ಷಗಳಿಂದ ದುಬೈನಲ್ಲಿ ಮೆಕಾನಿಕ್ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಸ್ವಂತ ಗ್ರಾಮವಾದ ಯಳ್ಳೂರಿನಲ್ಲಿ ವಾಸವಾಗಿದ್ದರು. ಇವರೊಂದಿಗೆ ಹೊನ್ನಗೌಡನ ತಮ್ಮ ಕುಮಾರ ಮತ್ತು ತಾಯಿ ಕಮಲವ್ವ ವಾಸವಿದ್ದರು. 20 ದಿನಗಳ ಹಿಂದೆ ಹೊನ್ನಗೌಡ ದುಬೈನಿಂದ ಗ್ರಾಮಕ್ಕೆ ಬಂದಿದ್ದರು. ಆ ಸಮಯದಲ್ಲಿ ಅಣ್ಣ-ತಮ್ಮನ ನಡುವೆ ಹಣಕಾಸಿನ ವಿಷಯಕ್ಕೆ ಸಂಬಂಧಿಸಿ ವೈಮನಸ್ಸು ಉಂಟಾಗಿತ್ತು. ನವೆಂಬರ್‌ ಒಂದರಂದು ಹೊನ್ನೇಗೌಡ ದುಬೈಗೆ ಮರಳಿದ್ದರು.

ಹಾನಗಲ್ಲಿನಲ್ಲಿ ಅಣ್ಣ ಹೊನ್ನೇಗೌಡರ ವ್ಯವಹಾರವನ್ನು ಸಹೋದರ ಕುಮಾರ ನೋಡಿಕೊಳ್ಳುತ್ತಿದ್ದ. ಆದರೆ, ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದ ಅಣ್ಣ ಹೊನ್ನೇಗೌಡ, ಇನ್ಮುಂದೆ ವ್ಯವಹಾರವನ್ನು ತನ್ನ ಪತ್ನಿ ಗೀತಾ ಹೆಸರಲ್ಲಿ ನಡೆಸುವಂತೆ ತಮ್ಮನಿಗೆ ತಿಳಿಸಿದ್ದ. ವಹಿವಾಟು ತಮ್ಮನ ಬದಲು ಪತ್ನಿ ಹೆಸರಲ್ಲಿ ನಡೆಸು ಎಂದು ಹೇಳಿದ್ದಕ್ಕೆ ಬೇಸತ್ತ ಕುಮಾರಗೌಡ ಅಣ್ಣನ ಪತ್ನಿ ಮತ್ತು ಮಕ್ಕಳನ್ನು ಕೊಲೆಗೈದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಶಿವಕುಮಾರ್‌ ಗುಣಾರೆ, ಹೆಚ್ಚುವರಿ ಎಸ್‌ಪಿ ಸಿ.ಗೋಪಾಲ್‌, ಡಿವೈಎಸ್‌ಪಿ ಆರ್‌.ಮಂಜುನಾಥ್‌, ಹಾನಗಲ್‌ ಠಾಣೆ ಸಿಪಿಐ ಶ್ರೀಧರ್‌ ಎಸ್‌.ಆರ್, ಸಿಎಸ್‌ಐ ಯಲ್ಲಪ್ಪ ಹಿತಗಣ್ಣನವರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...