ಹಾವೇರಿ | ಅಖಿಲ ಭಾರತ ಮುಷ್ಕರ ಬೆಂಬಲಿಸಿ ಬೀದಿಗಿಳಿದು ಕಾರ್ಮಿಕರ ಬೃಹತ್ ಪ್ರತಿಭಟನೆ

Date:

ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ರಾಜ್ಯದಲ್ಲಿ ಸಂಯುಕ್ತ ಹೋರಾಟ, ಕರ್ನಾಟಕ ನೇತೃತ್ವದಲ್ಲಿ ಕರೆ ನೀಡಲಾದ ದೇಶವ್ಯಾಪಿ ಮಷ್ಕರದ ಭಾಗವಾಗಿ ವಿವಿಧ ಕಾರ್ಮಿಕ ಸಂಘಗಳು ನಗರದ ಮುರುಘರಾಜೇಂದ್ರ ಮಠದಿಂದ ಮೆರವಣಿಗೆ ಪ್ರಾರಂಭಿಸಿ ತಹಶಿಲ್ದಾರವರ ಕಛೇರಿ ಆವರಣದಲ್ಲಿ ಸಮಾವೇಶಗೊಂಡು ಉಪ ತಹಶಿಲ್ದಾರರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.

ನಗರದ ಮುರುಘರಾಜೇಂದ್ರ ಮಠದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು ಸ್ವಾತಂತ್ರ್ಯ ಹೋರಾಟಗಾರ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಹಾಯ್ದು ಎಂ.ಜಿ ರಸ್ತೆಯ  ಮಾರುಕಟ್ಟೆಯಲ್ಲಿ ಸಾಗಿ ತಹಶಿಲ್ದಾರವರ ಕಛೇರಿ ಆವರಣದಲ್ಲಿ ಸಮಾವೇಶಗೊಂಡಿತು. ಕಾರ್ಮಿಕ ವಿರೋಧಿ ನೀತಿಗಳನ್ನು ಕೇಂದ್ರ ಸರಕಾರ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ವ್ಯಾಪಾರದ ಸುಲಭೀಕರಿಸಲು, ಯೂನಿಯನ್ ಮುಕ್ತ ವಾತಾವರಣ ನಿರ್ಮಿಸಲಿಕ್ಕಾಗಿ, 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿರುವುದು ಕೇವಲ ಆರ್ಥಿಕದಾಳಿ ಮಾತ್ರವಲ್ಲದೆ ರಾಜಕೀಯ ದಾಳಿಯೂ ಆಗಿದೆ. ಜೀವನೋಪಾಯ ವೇತನದ ಜಾರಿಯ ಪ್ರಸ್ತಾಪವಿಲ್ಲ ಕನಿಷ್ಠ ವೇತನ ಅಥವಾ ರಾಷ್ಟೀಯ ಸರಾಸರಿ ವೇತನದ ಖಾತ್ರಿಯ ಬದಲಿಗೆ ತಳಹಂತದ 178 ರೂ. ಕೂಲಿಯನ್ನು ಹೊಸದಾಗಿ ಪರಿಷ್ಕರಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಡವಾಳಗಾರರ ಹಿತಕಾಯಲು ಮತ್ತು ಬಂಡವಾಳಗಾರರ ಸಂಪತ್ತುನ್ನು ರಕ್ಷಿಸಲು ಪ್ರಭುತ್ವಗಳು ಟೊಂಕ ಕಟ್ಟಿ ಅನುವುಮಾಡಿ ಕೊಟ್ಟಿದ್ದಾರೆ. ನರೇಗಾ ಕಾಯ್ದೆಯಡಿಯಲ್ಲಿ ಖಾತರಿ ಪಡಿಸಲಾದ ಕೆಲಸ, ಕೆಲಸದ ಹಕ್ಕನ್ನು ಕಸಿದುಕೊಳ್ಳುವುದರ ಜೊತೆಗೆ ಗ್ರಾಮೀಣ ಶ್ರಮ ಜೀವಿಗಳ ಕೊಂಡುಕೊಳ್ಳುವ ಸಾಮಾರ್ಥ್ಯ ಕಡಿಮೆ ಮಾಡುವುದು ಮತ್ತು ಕೃಷಿ ಕಾರ್ಮಿಕರ ಮತ್ತು ಇತರೆ ಗ್ರಾಮೀಣ ಕಾರ್ಮಿಕರ ವೇತನವನ್ನು ನಿಗ್ರಹಿಸುತ್ತಿದೆ.

ರೈತರು ಬೆಳೆಯುವ ಬೆಳೆಗಳಿಗೆ ಬೆಂಬಲ ಬೆಲೆ ನೀಡದೇ, ಕಂಪನಿ ಕೃಷಿಯನ್ನು ಉತ್ತೇಜಿಸಿ ಬಲವಂತದ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದು ರೈತರ ಭೂಮಿಯನ್ನು ವಶಪಡಿಕೊಳ್ಳುತ್ತಿದೆ. ಇದರಿಂದ ರೈತರು ಕೂಲಿಕಾರರಾಗಿ ಮತ್ತು ನಿರುದ್ಯೋಗಸ್ಥರಾಗಿ ಮಾರ್ಪಾಡಾಗುತ್ತಿದ್ದಾರೆ. ಕೇಂದ್ರ ಸರ್ಕಾರ ಮಂಡಿಸಿದ ಪ್ರಸ್ತುತ ಬಜೆಟ್‌ನಲ್ಲಿ. ಜನಸಾಮಾನ್ಯರು ಅನುಭವಿಸುವ ಸಂಕಷ್ಟಗಳಿಗೆ ಪರಿಹಾರವಿಲ್ಲ ಬದಲಿಗೆ ಬಂಡವಾಳಗಾರರಿಗೆ ಹಸೆಮಣೆ ಹಾಕಲಾಗಿದೆ. ಇನ್ನು ನುಡಿದಂತೆ ನಡೆಯುತ್ತೀವೆ ಎಂದು ಹೇಳುವ ರಾಜ್ಯ ಸರ್ಕಾಕೇಂದ್ರ ಸರಕಾರ ಜಾರಿಮಾಡಿರುವ ಕಾರ್ಮಿಕರನ್ನು ನವಗುಲಾಮಗಿರಿಗೆ ತಳ್ಳಲಿರುವರ ರೈತ ವಿರೋಧಿ ಧೋರಣೆಗಳನ್ನು ಮುಂದುವರೆಸುತ್ತಿದೆ. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ರಾಜ್ಯ ಸರಕಾರಗಳು ಮುಂದಾಗಬೇಕೆಂದು ಆಗ್ರಹಿಸಿದರು.

ಬೇಡಿಕೆಗಳು:
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಶ್ರಮಶಕ್ತಿ ನೀತಿ ವಾಪಸ್ಸಾಗಬೇಕು. ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಬಿ. ಜಿ ರಾಮ್ ಜಿ ಕಾಯ್ದೆ ರದ್ದುಗೊಳಿಸಬೇಕು. ಭೂಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ವಿದ್ಯುಚ್ಛಕ್ತಿ ಶಕ್ತಿ ಮಸೂದೆ, ಬೀಜ ಮಸೂದೆಗಳನ್ನು ಹಿಂಪಡೆಯಬೇಕು. ವಿಮಾ ತಿದ್ದುಪಡಿ ಕಾಯ್ದೆ ಹಾಗೂ ಶಾಂತಿ ಕಾಯ್ದೆ ರದ್ದುಗೊಳಿಸಬೇಕು.

ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಅಂಗನವಾಡಿ ನೌಕರರ ಸಂಘಟನೆಯ ತಾಲೂಕಾಧ್ಯಕ್ಷರಾದ ರಾಜೇಶ್ವರಿ ಹಿರೇಮಠ,  ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಗ್ರಾಮ ಪಂಚಾಯತಿ ನೌಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೋಟಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಮೇತರರ ನೌಕರರ ಸಂಘಟನೆಯ ಜಿಲ್ಲಾ ಮುಖಂಡರಾದ ಚೈತ್ರಾ ಎಸ್.ಕೆ, ಹಾಸ್ಟೇಲ್ ಹಾಗೂ ವಸತಿ ಶಾಲಾ-ಕಾಲೇಜು ಹೊರಗುತ್ತಿಗೆ ನೌಕರ ಸಂಘಟನೆ ಜಿಲ್ಲಾಧ್ಯಕ್ಷರಾದ ಶಾಂತಾ ಗಡ್ಡಿಯವರ, ಅಂಗನವಾಡಿ ನೌಕರರ ಸಂಘಟನೆಯ ತಾಲೂಕಾ ಕಾರ್ಯದರ್ಶಿ ಸಿದ್ದಮ್ಮ ಎಸ್ ಚೌಟಿ, ಕಟ್ಟಡ ಕಾರ್ಮಿಕರ ಸಂಘಟನೆ ಜಿಲ್ಲಾ ಮುಖಂಡ ರಿಯಾಜ್ಅಹಮದ್ ಮರಫಾಜೆ, ಡಿವೈಎಫ್ಐ ಮುಖಂಡ ಹಬೀಬ್ ಮುಲ್ಲಾ, ಮನರೇಗಾ ಕೂಲಿ ಕಾರ್ಮಿಕ ಸಂಘಟನೆ ಮುಖಂಡ ದಾದಾಪೀರ್ ತಿಳವಳ್ಳಿ ಮಾತನಾಡಿದರು.

ಇದನ್ನೂ ಓದಿ ಬಾಗಲಕೋಟೆ | ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಪ್ರತಿಭಟನೆ

ಪ್ರತಿಭಟನೆಯ ನೇತೃತ್ವವನ್ನು ದೀಪಾ ಬಿ. ಛಲವಾದಿ, ಯಶೋದಾ ಹಂಜಗಿ, ಯಲ್ಲಮ್ಮ ಗೊರವರ, ಅರುಣ ನಾಗಾವತ್, ರಿಯಾಜ್ಅಹಮದ್ ಕೋಟೆನವರ, ಸಾಬೀರ್ ಕಡಕೋಳ, ಫಕ್ಕಿರೇಶ ಹಕ್ಕಿಮರೆಣ್ಣನವರ, ಸಚಿನ್ ಬೂದಿಹಾಳ, ಕರಿಯಪ್ಪ ಗಡಾರಿ ವಹಿಸಿದ್ದರು. ಅಂಗನವಾಡಿ ನೌಕರರು, ಕಟ್ಟಡ ಕಾರ್ಮಿಕರು, ಮಕ್ಕಳ ರಕ್ಷಣಾ ಇಲಾಖೆಯ ಖಾಯಮೇತರ ನೌಕರರು, ಗ್ರಾಮ ಪಂಚಾಯತಿ ನೌಕರರು, ಸ್ವಚ್ಛವಾಹಿನಿ ಮಹಿಳೆಯರು, ಹಾಸ್ಟೇಲ್ ಹೊರಗುತ್ತಿಗೆ ನೌಕರರು, ಹಮಾಲಿ ಕಾರ್ಮಿಕರು ಹಾಗೂ ಮನರೇಗಾ ಕೂಲಿಕಾರರು ಸೇರಿದಂತೆ ಸಾವಿರಾರು ಜನ ಕಾರ್ಮಿಕರು ಪಾಲ್ಗೊಂಡಿದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...