ಹಾವೇರಿ | ಮಿನಿಬಸ್ ಅಪಘಾತ; ಶಬರಿಮಲೆಗೆ ತೆರಳುತ್ತಿದ್ದ ಹಲವರಿಗೆ ಗಾಯ, ಓರ್ವ ಸಾವು

Date:

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಶಬರಿಮಲೆಗೆ ತೆರಳುತ್ತಿದ್ದ ಮಿನಿಬಸ್‌ ಅಪಘಾತಕ್ಕೊಳಗಾಗಿದ್ದು, ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮಲೈ ಬಳಿ ನಡೆದಿದೆ.

ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ, ಸ್ಥಳೀಯ ಶಿವಮಣಿ ಅಯ್ಯಪ್ಪಸ್ವಾಮಿ ಆಶ್ರಮದ ಗುರುಸ್ವಾಮಿ ಮಾರುತಿ ಹರಿಹರ(50) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ.

ಹಾನಗಲ್ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳ 30ಕ್ಕೂ ಹೆಚ್ಚು ಮಾಲಾಧಾರಿಗಳು ಏಪ್ರಿಲ್‌ 14ರ ಬೆಳಿಗ್ಗೆ ಮಿನಿಬಸ್‌ನಲ್ಲಿ ಶಬರಿಮಲೆಗೆ ಪ್ರಯಾಣ ಬೆಳೆಸಿದ್ದರು. ಮಾರ್ಗಮಧ್ಯೆ ನಾನಾ ತೀರ್ಥಕ್ಷೇತ್ರಗಳ ದರ್ಶನ ಮಾಡಿ ಎರುಮಲೈಯಲ್ಲಿ ಸೇವೆ ಸಲ್ಲಿಸಿ ಶಬರಿಮಲೆಯತ್ತ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತೋಷ ಜಾಧವ ಮತ್ತು ಗಿರಿರಾಜ ಕಲಾಲ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಕೇರಳದ ಪಾಲಾವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮೆಗಾ ಡೇರಿ ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಆಗ್ರಹ

ಘಟನೆ ನಡೆದ ಕೂಡಲೇ ಶಾಸಕ ಶ್ರೀನಿವಾಸ ಮಾನೆ ಅವರು ಮುಖಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮೂಲಕ ಕೇರಳ ಸರ್ಕಾರದ ಅಧಿಕಾರಿಗಳನ್ನು ಸಂಪರ್ಕಿಸಿ, ಗಾಯಾಳುಗಳಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ‌

ಮೃತಪಟ್ಟ ಓರ್ವ ಮಾಲಾಧಾರಿಯ ಪಾರ್ಥಿವ ಶರೀರ ತರಲು ಹಾಗೂ ಗಾಯಾಳುಗಳ ನೆರವಿಗೆ ಧಾವಿಸಲು ಐವರು ಮುಖಂಡರು ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಏಳು ಜನರ ತಂಡವನ್ನು ವಿಮಾನದ ಮೂಲಕ ಕೊಚ್ಚಿನ್‌ಗೆ ಕಳುಹಿಸಿದ್ದಾರೆ. ಸಂಜೆ ಹೊತ್ತಿಗೆ ಘಟನಾ ಸ್ಥಳ ತಲುಪಿದ ತಂಡ ಶರೀರ ತರಲು ವ್ಯವಸ್ಥೆ ಮಾಡುತ್ತಿದ್ದು, ಗಾಯಾಳುಗಳಿಗೆ ನೆರವಾಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...