ಹಾವೇರಿ | ಶಾಸಕ ಬಸನಗೌಡ ಯತ್ನಾಳ ಮೀಸಲಾತಿ ವಿರೋಧಿ ಹೇಳಿಕೆ ಖಂಡನೀಯ: ಉಡಚಪ್ಪ ಮಾಳಗಿ

Date:

“ಒಳಮೀಸಲಾತಿ ಜಾರಿಯಾಗುವುದರಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಕೇವಲ ವೋಟ್ ಬ್ಯಾಂಕ್ ತೆವಲಿಗಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಒಳಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದು ಖಂಡನೀಯ” ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜ(ರಿ)ದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಕಿಡಿಕಾರಿದರು.

ಹಾವೇರಿ ಪಟ್ಟಣದ ಪತ್ರಿಕಾ ಗೋಷ್ಠಿಯಲ್ಲಿ ಉಡಚಪ್ಪ ಮಾಳಗಿ ಅವರು “ಶಾಸಕ ಬಸವನಗೌಡ ಯತ್ನಾಳ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನಷ್ಟವಾಯಿತು. ನಾನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒಳಮೀಸಲಾತಿ ಕುರಿತು ಕ್ರಮ ತೆಗೆದುಕೊಳ್ಳಬಾರದು” ಎಂದು ಹೇಳಿರುವುದನ್ನು ವಿರೋಧಿಸಿ ಮಾತನಾಡಿದರು.

“ಒಳಮೀಸಲಾತಿ ಜಾರಿಗ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದರೂ, ಸಮುದಾಯಗಳ ಮಧ್ಯ ಒಡಕು ಹುಟ್ಟಿಸುವ ಮೂಲಕ ಒಡೆದು ಆಳುವ ನೀತಿಯನ್ನು ತೋರಿರುವ ಬಸನಗೌಡ ಪಾಟೀಲ್ ಯತ್ನಾಳರ ನಡೆಯನ್ನು ಉಗ್ರವಾಗಿ ಖಂಡಿಸುತ್ತೇವೆ. ಗೋಸುಂಬೆಯಂತೆ ಬಣ್ಣ ಬದಲಿಸಿ ಒಳಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದು ಅವರ ನೈತಿಕ ಅಧೋಗತಿಯನ್ನು ಎತ್ತಿ ತೋರಿಸುತ್ತಿದೆ” ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಿರುವ ಮಾದಿಗ ಸಮುದಾಯದ ವೋಟಗಳನ್ನು ಪಡೆಯದೇ ತಾವು ಇಷ್ಟು ವರ್ಷಗಳಿಂದ ಗೆದ್ದಿರುವಂತೆ ಬಣ್ಣಸಿ ಮಾತನಾಡಿದ ಅವರ ಹೇಳಿಕೆಯಿಂದ ಸಮುದಾಯಕ್ಕೆ ಅತೀವ ನೋವುಂಟು ಮಾಡಿದೆ. ಯತ್ನಾಳ್ ಅವರ ಹಿಂದೆ ಮುಂದೆ ಸುತ್ತುತ್ತಿರುವ ಮಾದಿಗ ಮುಖಂಡರು ಅವರ ಮಾದಿಗ ವಿರೋಧಿ ನೀತಿಯನ್ನು ಅರಿತು ಅವರನ್ನು ಬಹಿಷ್ಕಾರ ಮಾಡಬೇಕಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕರ್ನಾಟಕದಲ್ಲಿ ಒಳಮಿಸಲಾತಿ ಜಾರಿಗೆ ಆಗುವವರಿಗೂ ಬ್ಯಾಕ್ ಲಾಕ್ ಹುದ್ದೆಗಳನ್ನು ನೇಮಕ ಮಾಡಬಾರದು ಎಂದು ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ ಅವರಿಗೆ ಉಡಚಪ್ಪ ಮಾಳಗಿ ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...