ಹಾವೇರಿ | ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಮೋದಿ ಸರ್ಕಾರ ರದ್ದುಪಡಿಸಬೇಕು: ಬಸವರಾಜ ಪೂಜಾರ

Date:

“ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ, ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಹಾಗೂ ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಮಾಸಿಕ ಮೂವತ್ತಾರು ಸಾವಿರ ರೂಪಾಯಿ ಕನಿಷ್ಠ ವೇತನ ಜಾರಿಗೊಳಿಸಬೇಕು” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.

ಹಾವೇರಿ ಪಟ್ಟಣದಲ್ಲಿ ದೇಶವ್ಯಾಪಿ ಕಾರ್ಮಿಕರ ಮುಷ್ಕರದ ಭಾಗವಾಗಿ ಇಂದು ಸಿದ್ದಪ್ಪ ಹೊಸಮನಿ ವೃತ್ತದ ಬಳಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

“ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಈ ಹಿಂದೆ ಕಾರ್ಮಿಕರ ಬದುಕಿಗೆ ಒಂದಷ್ಟು ಅನುಕೂಲಕರವಾಗಿದ್ದ 29 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನಾಗಿ ಅಂಗೀಕರಿಸುವ ಮೂಲಕ ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ನಾಲ್ಕು ಕಾರ್ಮಿಕ ಸಂಹಿತೆಗಳು ದೇಶದ ಕಾರ್ಮಿಕರ ರಕ್ಷಣಾತ್ಮಕ ಅಂಶಗಳು, ಜೀವಿಸುವ ಹಕ್ಕು, ಮೂಲಭೂತ ಹಕ್ಕುಗಳು, ವೇತನ ಕುರಿತ ವ್ಯಾಖ್ಯಾನ, ಪ್ರತಿಭಟನೆ ಹಕ್ಕು, ಸಾಮಾಜಿಕ ಭದ್ರತೆ, ಮಾಲೀಕ-ಕಾರ್ಮಿಕ ಸಂಬಂಧ, ವೇತನ ಚೌಕಾಶಿ, ಆರೋಗ್ಯ ಮತ್ತು ಸುರಕ್ಷತೆ ನಿಯಮಗಳನ್ನು ಮೊಟಕುಗೊಳಿಸಲಿವೆ. ಕಲ್ಯಾಣ ರಾಜ್ಯದ ಪರಿಕಲ್ಪನೆಗಳನ್ನು ದುರ್ಬಲಗೊಳಿಸಲಿವೆ. ಕಾರ್ಪೋರೇಟ್ ಗಳಿಗೆ ಕಡಿವಾಣವಿಲ್ಲದ ಲಾಭವನ್ನು ಗಳಿಸಲು ರಹದಾರಿ ನಿರ್ಮಿಸಿ, ಕಾರ್ಮಿಕರ ಪಾಲಿಗೆ ಮರಣಶಾಸನಗಳಾಗುತ್ತವೆ” ಎಂದರು.

“ಕೇಂದ್ರ ಸರಕಾರ ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತ್ರಿಪಡಿಸುವ ಶಾಸನ ರೂಪಿಸಬೇಕು. ರಾಜ್ಯದಲ್ಲಿ  ಬಜೆಪಿ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆಯುವುದಾಗಿ ಭರವಸೆ ನೀಡಿ, ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೇಸ್ ಸರಕಾರ ಈವರೆಗೂ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆಯದೇ ಅನ್ಯಾಯವೆಸಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ಈ ಕೃಷಿ ಕಾಯಿದೆಗಳನ್ನು ವಾಪಾಸ್ಸು ಪಡೆಯಬೇಕು” ಎಂದು ಒತ್ತಾಯಿಸಿದರು.

WhatsApp Image 2025 07 09 at 5.35.28 PM

“ಸಿಐಟಿಯು ಜಿಲ್ಲಾ ಸಂಚಾಲಕ ಅಂದಾನೆಪ್ಪ ಹೆಬಸೂರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಹಾಸ್ಟೇಲ್, ವಸತಿ ಶಾಲೆ, ಪಂಚಾಯಿತಿ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬ್ಯಾಂಕ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ ಮುಂತಾದ ಖಾಯಂತೇತರ ನೌಕರರು, ಸ್ವಚ್ಛವಾಹಿನಿ ನೌಕರರು, ಸ್ಕೀಂ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರನ್ನು ಖಾಯಂಗೊಳಿಸಲು ಶಾಸನ ರೂಪಿಸಬೇಕು. ಹಮಾಲಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀದಿ ಬದಿ ವ್ಯಾಪಾರಸ್ಥರು ಸೇರಿದಂತೆ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ವಿಮೆ, ಪಿಂಚಣಿ, ಮನೆ/ನಿವೇಶನ ಸೌಲಭ್ಯ ಖಾತ್ರಿ ಪಡಿಸಬೇಕು” ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯತಿ ನೌಕರರ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಜಗದೀಶ ಕೋಟಿ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಂಯೇತರರ ನೌಕರರ ಒಕ್ಕೂಟ ಜಿಲ್ಲಾ ಅಧ್ಯಕ್ಷೆ ಚೈತ್ರಾ ಎಸ್.ಕೆ, ಅಖಿಲ ಭಾರತ ಬ್ಯಾಂಕ್ ನೌಕರರ ಅಸೋಶಿಯೇಶನ್ ಜಿಲ್ಲಾ ಮುಖಂಡ ಪ್ರಕಾಶ ದೇವರಗುಡ್ಡ, ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘಟನೆ ಜಿಲ್ಲಾಧ್ಯಕ್ಷೆ ಶಾಂತಾ ವೀ ಗಡ್ಡಿ, ಹಿರಿಯ ಹೋರಾಟಗಾರ ರುದ್ರಪ್ಪ ಜಾಬೀನ, ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆ ಮುಖಂಡ ಹಬೀಬ್ ಮುಲ್ಲಾ ಮಾತನಾಡಿದರು.

ಮನವಿ ಕಾರ್ಮಿಕರು, ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಹಾವೇರಿಯ ಉಪ ತಹಶೀಲ್ದಾರ ಎಸ್.ಎಚ್ ಏರಿಮನಿ ಅವರ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸಲ್ಲಿಸಲಾಯಿತು.

ಪ್ರತಿಭಟನಾ ಮೆರವಣಿಗೆಯು ಸುರಿಯುವ ಮಳೆಯಲ್ಲಿಯೇ ನಗರದ ಮುರುಘರಾಜೇಂದ್ರ ಮಠದಿಂದ ಆರಂಭಗೊಂಡು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ, ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಹಾವೇರಿ | ಮಕ್ಕಳಿಗೆ ಸಾವಿರ ಠೇವಣಿ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ

ಪ್ರತಿಭಟನೆಯಯಲ್ಲಿ ವಿವಿಧ ಸಂಘಟನೆಗಳ ಜಿಲ್ಲಾ ಮುಖಂಡರಾದ ನಾರಾಯಣ ಕಾಳೆ, ಸುಭಾಸ್ ಸೊಟ್ಟೆಪ್ಪನವರ, ಚನವೀರಯ್ಯ ಹಿರೇಮಠ, ರಿಯಾಜ್ ಅಹ್ಮದ್ ಮರಪಾಜೆ, ಹುಸೇನಸಾಬ್ ಏರಿಮನಿ, ಈರಪ್ಪ ವಡ್ಡರ, ರಿಯಾಸ್ ಕೋಟೆನವರ, ಸಾಬೀರ ಕಡಕೋಳ, ಹನುಮಂತಪ್ಪ ಗೊರವರ, ಗುಡ್ಡಪ್ಪ ಗಾಜಿ, ಫಕ್ಕಿರೇಶ ಹಕ್ಕಿಮರೆಣ್ಣನವರ, ರೇಣುಕಮ್ಮ ಕಸವಾಡ, ನಾಗಮ್ಮ ಒಣರೊಟ್ಟಿ, ಮಂಜುಳಾ ಹಾನಗಲ್, ಮಂಜುಳಾ ತಡಸ ಜಯಮ್ಮ ಬೆಳವಿಗಿ, ದೀಪಾ ಛಲವಾದಿ, ಜ್ಯೋತಿ ಮಾಸೂರು, ನೇತ್ರಾ ಹರಿಜನ, ಲಕ್ಷ್ಮೀ ತಳವಾರ, ಆದಂ ದೇವಿಹೊಸೂರು, ಜಾಫರಸಾಬ ಮನ್ನಂಗಿ, ಎಚ್.ಎಚ್. ನದಾಫ, ಶಿವರಾಜ ಹಿತ್ಲರ್, ಸುನೀಲಕುಮಾರ್ ಎಲ್, ಅರುಣ ನಾಗವಂದ, ಸುನೀತಾ ಬಾಡನಾಯ್ಕ, ಶೋಭಾ ಡೊಳ್ಳೆಶ್ವರ, ಆರ್ ಶ್ರೀಕೃಷ್ಣ ಚೈತನ್ಯ, ಸಿ ರಾಜಶೇಖರ್, ಲಲಿತಾ ಹರಿಜನ, ಪವಿತ್ರಾ ಮಾಳಗಿ ವಹಿಸಿದ್ದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳಿಂದ ಎರಡುನೂರಕ್ಕೂ ಹೆಚ್ಚು ಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...