ಹಾವೇರಿ | ಸರ್ಕಾರಿ ಪ್ರೌಢ ಶಾಲೆಗಿಲ್ಲ ಖಾಯಂ ಶಿಕ್ಷಕರು: ಶಿಕ್ಷಕರಿಗಾಗಿ ವಿದ್ಯಾರ್ಥಿಗಳು, ಎಸ್ಎಫ್ಐ ಪ್ರತಿಭಟನೆ

Date:

 ನೂತನವಾಗಿ ಆರಂಭವಾದ ಸರ್ಕಾರಿ ಪ್ರೌಢ ಶಾಲೆಯ ಎದುರು ನೂತನವಾಗಿ ಪ್ರಾರಂಭವಾದ ಸರ್ಕಾರಿ ಪ್ರೌಢ ಶಾಲೆಗೆ ಖಾಯಂ ಶಿಕ್ಷಕರು ನೇಮಕಾತಿ ಆಗಬೇಕಿತ್ತು. ಆದರೆ ಶಾಲೆಗೆ ಖಾಯಂ ಶಿಕ್ಷಕರಿಲ್ಲದೆ, ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಕುಂಠಿತಗೊಳ್ಳುತ್ತಿದ್ದೂ ಹೆಚ್ಚುವರಿಯಾಗಿ ವರ್ಗಾವಣೆಗೊಂಡ ಶಿಕ್ಷಕರನ್ನು ಮುಂದುವರೆಯುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸದಸ್ಯರು ಊರಿನ ಗ್ರಾಮಸ್ಥರು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಬೆಂಬಲದೊಂದಿಗೆ ಪ್ರತಿಭಟನಾ ಧರಣಿ ನಡೆಸಿದರು. 

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಅರಳೀಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಉನ್ನತೀಕರಿಸಿದ ಪ್ರೌಢ ಶಾಲೆಯಾಗಿ 2024-25ನೇ ಸಾಲಿನಲ್ಲಿ ಮಂಜೂರಾದ ಶಾಲೆಗೆ ಹೊಲಬಿಕೊಂಡ ಸರ್ಕಾರಿ ಶಾಲೆಯಿಂದ ರಘು ಎಮ್ ಎನ್ (ಟಿಜಿಟಿ) ನಿಯೋಜನೆ ಮೇರೆಗೆ ಜೂನ್ ತಿಂಗಳಿಂದ ಇಲ್ಲಿವರೆಗೂ ಕಾರ್ಯ ನಿರ್ವಹಿಸುತ್ತಿದ್ದಾರೆ.

1 ರಿಂದ 9ನೇ ತರಗತಿಯವರೆಗೆ 204 ವಿದ್ಯಾರ್ಥಿಗಳ ಪೈಕಿ 8ನೇ ತರಗತಿಯವೆರೆಗೆ ವಿಷಯವಾರು ಶಿಕ್ಷಕರಿದ್ದಾರೆ. ಆದರೆ  ನೂತನವಾಗಿ ಮಂಜೂರಾದ ಪ್ರೌಢಶಾಲೆಗೆ ಒಬ್ಬರೂ  ಖಾಯಂ ಶಿಕ್ಷಕರಿಲ್ಲ. ನಿಯೋಜಿತ ವರ್ಗಾವಣೆಯಲ್ಲಿದ್ದ ಬಬ್ಬರು ಶಿಕ್ಷಕರನ್ನು ರಾಣೆಬೆನ್ನೂರು ತಾಲ್ಲೂಕಿನ ಅರೆಮಲ್ಲಾಪುರ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಶಾಲೆಗೆ ವರ್ಗಾವಣೆ ಆಗಿರುತ್ತದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಪಿಎಸ್ ಅರೇಮಲ್ಲಾಪುರದಲ್ಲಿ ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಶಿಕ್ಷಕರು ಇದ್ದಾರೆ. ನಮ್ಮಲ್ಲಿ ಹೊಸದಾಗಿ ಪ್ರೌಢ ಶಾಲೆ ಮಂಜೂರು ಆಗಿದ್ದು ಮುಂದಿನ ದಿನಗಳಲ್ಲಿ ಪ್ರವೇಶಾತಿ ಮತ್ತು ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ರಘು ಎಮ್ ಎನ್ ಶಿಕ್ಷಕರನ್ನು ವರ್ಗಾವಣೆ ಮಾಡಬಾರದು.  ಮಕ್ಕಳ ಶೈಕ್ಷಣಿಕ ಮತ್ತು ಪರೀಕ್ಷಾ ದೃಷ್ಟಿಯಿಂದ ಅರಳಿಕಟ್ಟೆಯಲ್ಲಿ ಈ ಶೈಕ್ಷಣಿಕ ಅವಧಿ ಮುಗಿಯುವವರೆಗೂ ಮುಂದುವರಿಸಬೇಕು ” ಎಂದು ಗ್ರಾಮಸ್ಥರು ಆಗ್ರಹಿಸಿದರು.

“ಶಿಕ್ಷಣ ಇಲಾಖೆಯ ತಾಂತ್ರಾಂಶದಲ್ಲಿ ನಮ್ಮ ಊರಿನ ಶಾಲೆಗೆ ಖಾಲಿ ಇರುವ ಹುದ್ದೆಗಳನ್ನು ತೋರಿಸುತ್ತಿಲ್ಲ. ಹುದ್ದೆಗಳು ಖಾಲಿರುವುದನ್ನು ಇತರೆ ಶಿಕ್ಷಕರ ನೋಡಿ ವರ್ಗಾವಣೆ ತೆಗೆದುಕೊಂಡು ಬರುತ್ತಿದ್ದರು. ಆದರೆ ಇಲಾಖೆಯ ನಿರ್ಲಕ್ಷ್ಯದಿಂದಾಗಿ ನಮ್ಮ ಶಾಲೆಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಭರ್ತಿ ಮಾಡುತ್ತಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಸರ್ಕಾರ ಹಾಗೂ ಅಧಿಕಾರಿಗಳು ಸ್ಪಂದಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಊರಿನ ಗ್ರಾಮಸ್ಥರು ಬೃಹತ್ ಹೋರಾಟ ಮಾಡುತ್ತೇವೆ” ಎಂದು ಕಾರ್ಮಿಕ ಮುಖಂಡರಾದ ಸಚಿನ್ ಬೂದಿಹಾಳ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಿ ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ನಾಗವತ್ ಮಾತನಾಡಿ, ಶೈಕ್ಷಣಿಕ ವರ್ಷದ ಕೊನೆಯ ಹಂತ, ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯದ ಜೊತೆಗೆ ಇಲಾಖೆಯ ಅಧಿಕಾರಗಳು ಚೆಲ್ಲಾಟ ಆಡುವುದು ಸರಿಯಲ್ಲ. ವಿದ್ಯಾರ್ಥಿಗಳ ಬೇಡಿಕೆಯಾದ ಶಿಕ್ಷಕರ ವರ್ಗಾವಣೆಯ ಆದೇಶವನ್ನು ರದ್ದು ಪಡಿಸಿ, ಕೂಡಲೇ ಪ್ರಸ್ತುತ ಶಿಕ್ಷಕರನ್ನು ಮುಂದುವರೆಸಬೇಕು. ಹಾಗೂ ಇತರೆ ಪ್ರೌಢಶಾಲಾ ಶಿಕ್ಷಕರನ್ನು ಖಾಯಂ ನೇಮಕ ಮಾಡಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಒಂದು ವೇಳೆ ಅಧಿಕಾರಿಗಳು ಬೇಡಿಕೆ ಈಡೇರಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ  ಎಸ್.ಡಿ.ಎಮ್.ಸಿ ಅಧ್ಯಕ್ಷರು ಕಂತೇಶ ಮುದ್ದೆರ್, ರೈತ ಮುಖಂಡರು ಫಕ್ಕೀರಪ್ಪ ಸಂಗೋಡ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುಭಾಷ ಉಕ್ಕುಂದ್ರು, ಪೋಷಕರು ಶಿವಾನಂದ ಮಾದರ, ರಮೇಶ  ಮಾಡ್ಲೆರ್, ನಾಗರಾಜ್ ಬಿದರಿ, ಹೇಗಪ್ಪಾ ಹದಗಲ್ , ಗುಡ್ಡಪ್ಪ ಕಾಸೆಂಬರ್, ವಿದ್ಯಾರ್ಥಿಗಳು ದಿವ್ಯಾ ಕಡೆಮನಿ, ದೀಪಾ ಅರಳಕಟ್ಟಿ, ರಮ್ಯಾ ಮುಡೇರ್, ಸುಮನ್ ಬಾನು ಅಜೀಜ, ತಾಸಿನ ಬಾನು, ಶಿಲ್ಪಾ ಬೂದಿಹಾಳ, ಪವಿತ್ರಾ ಬಸೂರ್, ಕಾವ್ಯ ಗುಡ್ಡಪ್ಪ, ಅನು ರಟ್ಟಿಹಳ್ಳಿ, ವೇದ ಹುಚ್ಚಪ್ಪ, ನಿರ್ಮಲ, ರಾಘು ಎನ್, ಕಾರ್ತಿಕ್ ಬಿ, ಯಲ್ಲಪ್ಪ ಹೆಚ್ಚ, ಪೃಥ್ವಿ ಕಾಸಂಬಿ, ಪ್ರದೀಪ ಅರ್, ಶ್ರೀಧರ ಬಿ, ಸಿದ್ದು ಹೆಚ್ಛ, ಮನು  ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...