ಹಾವೇರಿ | ಮಹಾತ್ಮ ಗಾಂಧೀಜಿ ಹುತಾತ್ಮದಿನದಂದು ಅಗೌರವ ತೋರಿದ ಅಧಿಕಾರಿಗಳು; ಕ್ರಮಕ್ಕೆ ಒತ್ತಾಯ

Date:

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಗಾಂಧೀಜಿಯವರ ಹುತಾತ್ಮ ದಿನದಂದು ಅವರ ಪ್ರತಿಮೆಗಳು ಅನಾಥವಾಗಿ ನಿಂತಿವೆ. ಕನಿಷ್ಠ ಹೂಮಾಲೆ ಹಾಕಿ ಗೌರವಿಸದ ಅಧಿಕಾರಿಗಳು‌ ಹಾಗೂ ಜನಪ್ರತಿನಿಧಿಗಳ ಅಸಡ್ಡೆ ಮತ್ತು ಬೇಜವಾಬ್ದಾರಿ ನಡೆಯು ಅಕ್ಷಮ್ಯವಾದುದು” ಎಂದು ಡಿವೈಎಫ್ಐ, ಎಸ್ಎಫ್ಐ, ಡಿಎಸ್ಎಸ್, ಡಿಎಚ್ಎಸ್, ಬಿಎಸ್.ಪಿ, ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಅಲೆಮಾರಿ ಸಮುದಾಯ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ.

ಹಾವೇರಿ ನಗರದ ಗಾಂಧೀಜಿ ಪ್ರತಿಮೆಗಳಿಗೆ ಸ್ಥಳೀಯ ನಗರಸಭೆ ಆಡಳಿತ ಹಾಗೂ ಜನಪ್ರತಿನಿಧಿಗಳು ಸೇರಿದಂತೆ ಗಾಂಧೀ ಅನುಯಾಯಿಗಳು ಎಂದು ಹೇಳಿಕೊಳ್ಳುವವರು ಕೂಡ ಕನಿಷ್ಠ ಗೌರವ ನೀಡದಿರುವುದು ಬಹಳ ನೋವಿನ ಸಂಗತಿ.

“ಗಾಂಧೀಜಿಯವರ ಹುತಾತ್ಮ ದಿನದಂದು ಪ್ರತಿಮೆಗಳನ್ನು ಸ್ವಚ್ಛಗೊಳಿಸಿ, ಅಲಂಕಾರ ಮಾಡಬೇಕೆಂದು ನಾಲ್ಕು ದಿನ ಮುಂಚಿತವಾಗಿಯೇ ನಗರಸಭೆಯ ಆಯುಕ್ತರನ್ನು ಭೇಟಿಯಾಗಿ ತಿಳಿಸಲಾಗಿತ್ತು. ಅದಾಗ್ಯೂ ನಗರಸಭೆಯ ಆಯುಕ್ತರು, ನಗರದಲಿರುವ ಗಾಂಧೀ ವೃತ್ತ ಹಾಗೂ ಹೊಸಮನಿ ಸಿದ್ದಪ್ಪ ಪ್ರೌಢ ಶಾಲಾ ಆವರಣದಲ್ಲಿರುವ ಗಾಂಧೀಜಿ ಪ್ರತಿಮೆಗಳು ಹಾಗೂ ಆವರಣವನ್ನು ಸ್ವಚ್ಛಗೊಳಿಸದೇ ಗಾಂಧೀಜಿಯನ್ನು ಅವಮಾನಿಸಿರುವಯದನ್ನು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಂಧೀಜಿ ಪ್ರತಿಮೆಗಳನ್ನು ಸ್ವಚ್ಛಗೊಳಿಸಿ ಗೌರವಿಸಲು ಮನವಿ ಮಾಡಿದಾಗ್ಯೂ ಅಸಡ್ಡೆ ತೋರಿದ ನಗರಸಭೆಯ ಅಧಿಕಾರಿಗಳ ಮೇಲೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸುತ್ತವೆ.

ಗಾಂಧೀಜಿ ಹುತಾತ್ಮವಾದ ದಿನದಂದು ಪ್ರತಿವರ್ಷವೂ ಗೌರವ ಸಲ್ಲುವಂತಾಗಬೇಕು. ಮುಂದಿನ ಈ ರೀತಿಯಾಗದಂತೆ ಗಾಂಧೀಜಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲುವಂತೆ ಜಿಲ್ಲಾಡಳಿತ, ಶಾಸಕರು, ನಗರಸಭೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಪ್ರಗತಿಪರ ಸಂಘಟನೆಗಳಿಂದ ಛೀಮಾರಿ ಹಾಕಿ ಪ್ರತಿಭಟನೆ ನಡೆಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಡಿಎಸ್ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಉಡಚಪ್ಪ ಮಾಳಗಿ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಡಿಚ್ಎಸ್ ಜಿಲ್ಲಾ ಸಂಚಾಲಕ ವೀರಣ್ಣ ಗಡ್ಡಿಯವರ, ರೈತ ಸಂಘಟನೆ ಮುಖಂಡರು ಸುರೇಶ ಛಲವಾದಿ, ಅಲೆಮಾರಿ ಸಮುದಾಯ ಸಂಘಟನೆಯ ಜಿಲ್ಲಾಧ್ಯಕ್ಷರು ಶೆಟ್ಟಿ ವಿಭೂತಿ ನಾಯಕ ಹಾಗೂ ಬಿಎಸ್ಪಿ ಜಿಲ್ಲಾಧ್ಯಕ್ಷ ಎಂ.ಕೆ ಮಕಬುಲ್ ಎಚ್ಚರಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...