ಹಾವೇರಿ | ಒನಕೆ ಓಬವ್ವ ವಿಶ್ವವಿದ್ಯಾಲಯ ಮಟ್ಟದಲ್ಲಿ  ಪಠ್ಯ ಆಗಬೇಕು: ಸಾಹಿತಿ ಸಿ. ಎಸ್. ಮರಳಿಹಳ್ಳಿ

Date:

“ಒನಕೆ ಓಬವ್ವಳ ಕುರಿತು ಪ್ರಾಥಮಿಕ ಶಾಲೆಯಲ್ಲಿ ಮಾತ್ರವಲ್ಲ, ವಿಶ್ವವಿದ್ಯಾಲಯ ಮಟ್ಟದಲ್ಲಿಯೂ  ಪಠ್ಯ ಆಗಬೇಕು” ಎಂದು ಹಿರಿಯ ಸಾಹಿತಿ ಸಿ. ಎಸ್. ಮರಳಿಹಳ್ಳಿ ಅಭಿಪ್ರಾಯ ಪಟ್ಟರು.

ಹಾವೇರಿ ಪಟ್ಟಣದ ಗಾಂಧಿ ಭವನದಲ್ಲಿ ರಾಜ್ಯ ಒನಕೆ ಓಬವ್ವ ಟ್ರಸ್ಟ್ ಬೆಂಗಳೂರು ಸಹಯೋಗದಲ್ಲಿ ಒನಕೆ ಓಬವ್ವ ಕವಿಗೋಷ್ಠಿ ಮತ್ತು ಧ್ವನಿ ಸುರಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.

“ಒನಕೆ ಓಬವ್ವ ನಿಷ್ಠೆ, ಪ್ರಾಮಾಣಿಕತೆಗೆ ಹೆಸರಗಿದ್ದಳು. ನಿಸ್ವಾರ್ಥ ಸೇವೆ ಸಲ್ಲಿಸಿ, ಹೋರಾಟ ಮಾಡಿ ಶತ್ರುಗಳನ್ನು ಸದೆಬಡೆದು ಜಯಶಾಲಿಯಾಗಿ ಚಿತ್ರದುರ್ಗದ ಇತಿಹಾಸವನ್ನು ಅಜರಾಮರವಾಗಿಸಿದ  ವೀರ ಒನಕೆ ಓಬವ್ವ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸಾಪ ಜಿಲ್ಲಾಧ್ಯಕ್ಷ  ಲಿಂಗಯ್ಯ ಬಿ ಹಿರೇಮಠ ಅವರು ಒನಕೆ ಓಬವ್ವ ಜೀವನ ಚರಿತ್ರೆಯ ಧ್ವನಿ ಸುರಳಿ ಬಿಡುಗಡೆಗೊಳಿಸಿ ಮಾತನಾಡಿ, “ಒನಕೆ ಓಬವ್ವ ಚರಿತ್ರೆಯ ಕುರಿತು ಸಂಶೋಧನ ಸಂಶೋಧನಗಳು ಆಗಬೇಕು. ಸಂಶೋಧನ ವಿಷಯಾವಾಗಿ ತೆಗೆದುಕೊಳ್ಳುವಂತೆ ಸಂಶೋಧಕರಿಗೆ ಪ್ರೆರೇಪಿಸಬೇಕಿದೆ” ಎಂದು ಹೇಳಿದರು.

ಜಿಲ್ಲೆಯ ಮುವತ್ತೆಂಟು ಹಿರಿ-ಕಿರಿಯ ಕವಿಗಳು ಸ್ವ ರಚಿತ ಕವನಗಳನ್ನು ವಾಚಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಭಗತ್ ಸಿಂಗ್ ಹುತಾತ್ಮ ದಿನದಂದು ಸರ್ಕಾರಿ ಶಾಲೆಗಳನ್ನು ಉಳಿಸುವ ಸಂಕಲ್ಪ

ಕಾರ್ಯಕ್ರಮದಲ್ಲಿ ಮಾಜಿ ಶಾಸಕರು ನೆಹರು ವಾಲಿಕಾರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ ಡಿ ಮದ್ಲೇರ, ನಿವೃತ್ತ ಅಬಕಾರಿ ಅಧಿಕಾರಿ ಬಿ. ಸಾವಕ್ಕನವರ, ನಿವೃತ್ತ ಎಸ್. ಬಿ. ಐ ಮ್ಯಾನೇಜರ್ ಮಂಜಪ್ಪ ಮಿನಗಲವರ, ನಿವೃತ್ತ ಸಹಾಯಕ ನಿರ್ದೇಶಕರು  ಎನ್. ಬಿ ಕಾಳೆ ಇದ್ದರು. ಗೌರವ ಉಪಸ್ಥಿತಿ ಸಾಹಿತಿ, ಧ್ವನಿ ಸುರಳಿ ಕರ್ತೃ ಅಶೋಕ ಕೊಂಡ್ಲಿ, ಹಿರಿಯ ಲೇಖಕರು ಸತೀಶ ಕುಲಕರ್ಣಿ, ಪೃಥ್ವಿರಾಜ ಬೆಟಗೇರಿ ಹಾಗೂ ಅನೇಕರು ಭಾಗವಹಿಸದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...