ಹಾವೇರಿ | ಪಹಲ್ಗಾಮ್ ದಾಳಿ; ಭಯೋತ್ಪಾದಕರ ಮೇಲೆ ಕಠಿಣ ಕ್ರಮಕ್ಕೆ ಡಿವೈಎಫ್ಐ-ಎಸ್ಎಫ್ಐ

Date:

ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿ ತಾಣವಾದ ಬೈಸಾರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ 28 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರ ಮೇಲೆ ಕಠಿಣ ಕಾರ್ಯಾಚಾರಣೆ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.

ಹಾವೇರಿ ಪಟ್ಟಣದ ಜಿ ಎಚ್ ಕಾಲೇಜು ಎದುರು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ), ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಸಂಘಟನೆಗಳು ಒಗ್ಗೂಡಿ ಭಯೋತ್ಪಾದನೆ ದಾಳಿ ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.

“ನಮ್ಮ ರಾಜ್ಯದ ಮಂಜುನಾಥ್ ಹಾಗೂ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯ ತೀವ್ರ ಖಂಡನೀಯ. ಇದರ ವಿರುದ್ಧ ಎಲ್ಲ ಜನತೆಯೂ ಐಕ್ಯತೆಯಿಂದ ಪ್ರತಿರೋಧಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯು ಆಘಾತಕಾರಿಯಾದುದು. ಹೃದಯ ವಿದ್ರಾವಕ ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಡಿವೈಎಫ್ಐ-ಎಸ್ಎಫ್ಐ ಸಂತಾಪಗಳನ್ನು ಸಲ್ಲಿಸುತ್ತವೆ. ಅಮಾಯಕರ ಮೇಲೆ ಹೀನ ದಾಳಿಗೈದು ಅಮೂಲ್ಯ ಜೀವಗಳನ್ನು ಕೊಲೆಗೈದ ‌ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತೆ ಕಟ್ಟುನಿಟ್ಟಿನ ಕ್ರಮವನ್ನು ಕೇಂದ್ರ ಸರ್ಕಾರ ಖಾತ್ರಿಪಡಿಸಬೇಕು. ಜಮ್ಮು ಕಾಶ್ಮೀರ ಜನರ ಸಮಸ್ಯೆಗಳಿಗೆ ರಾಜಕೀಯ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದರು.

“ರಾಷ್ಟ್ರಕ್ಕೆ ಭದ್ರತೆ ಪ್ರಮುಖವಾಗಿದೆ. ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ಸಹಜ ಸ್ಥಿತಿಯಿದೆಯೆಂದು ಹೇಳುತ್ತಲೇ ಇದೆ. ಆದರೂ ವಾಸ್ತವ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳು, ವಲಸೆ ಕಾರ್ಮಿಕರು ಹಾಗೂ ಪ್ರವಾಸಿಗರ ಮೇಲೆ ದಾಳಿಗಳು ನಡೆಯುತ್ತಲೇ ಇವೆ. ಆದ್ದರಿಂದ ಕೇಂದ್ರ ಸರ್ಕಾರ ಈಗಲಾದರೂ ಜಮ್ಮು ಕಾಶ್ಮೀರದಲ್ಲಿ ಸಹಜಸ್ಥಿತಿ ನೆಲೆಸಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು”‌ ಎಂದು ಒತ್ತಾಯಿಸಿದರು.

“ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದುಹಾಕಲು ಸಾಧ್ಯವಿಲ್ಲ. ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ ಪಿಡುಗಿನ ವಿರುದ್ಧ ದೇಶದ ಜನತೆ ಒಟ್ಟಾಗಿ ನಿಲ್ಲುವುದು ಅಗತ್ಯವಿದೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ”‌ ಎಂದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ದುರುಗಪ್ಪ ಯಮ್ಮಿಯವರ ಮಾತನಾಡಿ, “ಭಯೋತ್ಪಾದನೆಗೆ ಅಥವಾ ಅಂತಹ ಅಪರಾಧಗಳಿಗೆ ಸಹಕರಿಸುವ ಮತ್ತು ಸಹಾಯ ಮಾಡುವ ಶಕ್ತಿಗಳಿಗೆ ಸಹಿಷ್ಣುತೆ ಇರಲು ಸಾಧ್ಯವಿಲ್ಲ. ಜನರು ಮತ್ತು ಸಮುದಾಯಗಳಲ್ಲಿ ವಿಭಾಗಗಳನ್ನು ಸೃಷ್ಟಿಸಲು ಈ ದುರಂತವನ್ನು ಬಳಸಿಕೊಳ್ಳಲು ಕೋಮು ಅಥವಾ ಮೂಲಭೂತವಾದಿ ಅಂಶಗಳ ಯಾವುದೇ ಪ್ರಯತ್ನಗಳು ಖಂಡನೀಯ” ಎಂದರು.

“ಈ ನಿರ್ಣಾಯಕ ಕ್ಷಣದಲ್ಲಿ, ನಾವು ಭಾರತದ ಜನತೆ ಒಗ್ಗಟ್ಟಾಗಿರುವಂತೆ ಡಿವೈಎಫ್ಐ-ಎಸ್ಎಫ್ಐ ಕರೆ ನೀಡುತ್ತವೆ. ಭಯೋತ್ಪಾದನೆ ನಮ್ಮ ಸಮಾಜವನ್ನು ವಿಂಗಡಿಸಲು ಪ್ರಯತ್ನಿಸುತ್ತದೆ. ಆದರೆ ನಾವು ನಮ್ಮ ಒಗ್ಗಟ್ಟು, ಸಾಮರಸ್ಯ ಮತ್ತು ಬದ್ಧತೆಯಿಂದ ಪ್ರತಿಕ್ರಿಯಿಸುವ ಜತೆಯಲ್ಲಿ ನಮ್ಮ ದೇಶದ ಜಾತ್ಯತೀತ ಬುನಾದಿ ಬಲಪಡಿಸಲು ಮತ್ತು ಶಾಂತಿ, ನ್ಯಾಯ ಹಾಗೂ ಸಹಬಾಳ್ವೆಯ ತತ್ವಗಳನ್ನು ರಕ್ಷಿಸಲು ನಾವು ಒಟ್ಟಿಗೆ ಸಾಗಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 4ರಂದು ಸಿಎಂ ಶಂಕುಸ್ಥಾಪನೆ

ಶ್ರದ್ಧಾಂಜಲಿ: ಪ್ರತಿಭಟನೆಯ ಆರಂಭದಲ್ಲಿ ವಿದ್ಯಾರ್ಥಿಗಳು, ಭಯೋತ್ಪಾದನೆಯಲ್ಲಿ ಮಡಿದವರಿಗೆ ಮೌನ ಶ್ರದ್ಧಾಂಜಲಿ ಸಲ್ಲಿಸಿದರು. ಭಯೋತ್ಪಾದಕರ ದುಷ್ಕೃತ್ಯವನ್ನು ಖಂಡಿಸಿ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಗದಿಗೆಯ್ಯ ಅರಾಧ್ಯಮಠ, ನಿರಂಜನ ಕುಲಕರ್ಣಿ, ಲಿಂಗರಾಜ ಬಣಕಾರ, ಮಾಲತೇಶ ಕರೆಣ್ಣನವರ, ಮಲ್ಲಪ್ಪ ಪೂಜಾರ, ಕುಮಾರ, ಅನು ಕವಲಿ, ಅನಿತಾ ದೇಸಾಯಿ, ಗಂಗಾ ಯಲ್ಲಾಪೂರ, ಗಾಯತ್ರಿ ಹೊಂಬಳಿ, ಮೋನಿಕಾ ಬಸೆಗಣ್ಣಿ, ಧನ್ಯಶ್ರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...