ಹಾವೇರಿ | ಸ್ಮಶಾನ ಭೂಮಿಗೆ, ಡಾ. ಬಾಬು ಜಗಜೀವನ ರಾಮ ಭವನಕ್ಕೆ ಜಮೀನು ನೀಡಲು ಮನವಿ

Date:

ಎಸ್ಸಿ/ಎಸ್ಟಿ ಸಮುದಾಯಕ್ಕೆ ಸ್ಮಶಾನ ಭೂಮಿ ಇಲ್ಲದೇ ಇರುವುದರಿಂದ ನಮ್ಮ ಸಮಾಜಕ್ಕೆ 6 ಎಕರೆ ಜಮೀನು ಮತ್ತು ಡಾ// ಬಾಬು ಜಗಜೀವನ ರಾಮ ಅವರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 1 ಎಕರೆ ಜಮೀನು ಮಂಜೂರು ಮಾಡಬೇಕು” ಎಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು ಡಾ.ಮೂರ್ತಿ ಎಲ್ ಅವರಿಗೆ ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಮನವಿ ಸಲ್ಲಿಸಲಾಯಿತು.

“ಎಸ್ಸಿ/ಎಸ್ಟಿ ಸಮುದಾಯಗಳು ನಗರದಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದು, ಸ್ಮಶಾನಕ್ಕೆ ಭೂಮಿ ನೀಡಬೇಕು. ಬಹುದಿನಗಳಿಂದ ಆಳುವ ಸರ್ಕಾರಗಳಿಗೆ ಮನವಿ ಸಲ್ಲಿಸುತ್ತಾ ಬರುತ್ತಿದ್ದೇವೆ. ಡಾ.ಬಾಬು ಜನಜೀವನ ರಾಮ್ ಅವರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 1 ಎಕರೆ ಸರ್ಕಾರಿ ಜಮೀನು ನೀಡಿದರೆ ನಮ್ಮ ಸಮುದಾಯ ಹಾಗೂ ಎಲ್ಲಾ ಸಮುದಾಯಗಳ ಬಡವರ ವಿವಿಧ ಕಾರ್ಯಕ್ರಮಗಳನ್ನು ಮಾಡಲು ಸಹಾಯವಾಗುತ್ತದೆ” ಎಂದು ಮುಖಂಡರು ಮನವಿ ಮಾಡಿದರು.

“ಜಿಲ್ಲೆಯಲ್ಲಿನ ಇನ್ನೂ ಅನೇಕ ಹಳ್ಳಿಗಳಲ್ಲಿ ಸ್ಮಶಾನದ ಸಮಸ್ಯೆಗಳು ಕಂಡು ಬಂದಲ್ಲಿ ಶೀಘ್ರವಾಗಿ ಜಿಲ್ಲಾಡಳಿತ ಸ್ಪಂದಿಸಬೇಕು. ಜಿಲ್ಲೆಯ ಎಲ್ಲಾ ಎಸ್ಸಿ/ಎಸ್ಪಿ ಸಮುದಾಯದವರಿಗೆ ಮನೆ ನಿರ್ಮಾಣ ಮಾಡಲು ನಿಗಮದಿಂದ ಹೆಚ್ಚಿನ ಅನುದಾನ ನೀಡಬೇಕು. ವಸತಿ ಯೋಜನೆಯ ಮನೆಗಳಿಗೆ ಹೆಚ್ಚಿನ ಸಹಾಯಧನ ನೀಡಲು ಕ್ರಮಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದಲ್ಲಿ ಭಾರಿ ಅವ್ಯವಹಾರವಾಗಿರುವ ಮಾತುಗಳು ಕೇಳಿ ಬರುತ್ತಿದ್ದು, ಸಮಗ್ರ ತನಿಖೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ, ಡಿಎಸ್‌ಎಸ್ ಜಿಲ್ಲಾ ಸಂಚಾಲಕರು ಮಾಲತೇಶ ಯಲ್ಲಾಪುರ, ವಾಲ್ಮೀಕಿ ಸಮಾಜದ ಅಧ್ಯಕ್ಷರು ರಮೇಶ ಆನವಟ್ಟಿ, ವಕೀಲರು ಬಸವರಾಜ ಹಾದಿಮನಿ, ಮುಖಂಡರು ಫಕ್ಕಿರೇಶ ಹರಿಜನ,ಬಸವರಾಜ ಅರಳೇಶ್ವರ, ಗುಡ್ಡಪ್ಪ ಬಣಕಾರ, ಜಗದೀಶ ಹರಿಜನ ಸೇರಿದಂತೆ ಡಿಎಸ್‌ಎಸ್ ಮತ್ತು ವಿವಿಧ ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...