ಹಾವೇರಿ | ಎಸ್ಎಫ್ಐ ಪ್ರತಿಭಟನೆ ಫಲ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೌಲಭ್ಯ

Date:

ಹಾವೇರಿ ನಗರದ ಹೊರವಲಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಬಾಲಕರ ವಸತಿ ನಿಲಯ ನಂಬರ್-2  ವಿದ್ಯಾರ್ಥಿಗಳಿಗೆ ಪುಸ್ತಕಗಳು, ಬೆಡ್, ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ವಂಚನೆ ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನವೆಂಬರ್ 21-22ರಂದು ಪ್ರತಿಭಟನೆ ನಡೆಸಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಈಡೇರಿಸಿದ್ದಾರೆ.

ಹಾವೇರಿ ಪಟ್ಟಣದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ವಸತಿ ನಿಲಯದ ಎದುರು ವಿದ್ಯಾರ್ಥಿಗಳು ದಿನವಿಡೀ ಪ್ರತಿಭಟನಾ ಧರಣಿ ನಡೆಸಿ, ಸ್ಥಳದಲ್ಲಿಯೇ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟುಹಿಡಿದ್ದರು.

“ವಿದ್ಯಾರ್ಥಿಗಳ ಪರವಾಗಿ ಎಸ್ಎಫ್ಐ ಮನವಿಗೆ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಪ್ರಶಾಂತ ವರಗಪ್ಪನವರ ಸ್ಪಂದಿಸಿ ವಸತಿ ನಿಲಯದಲ್ಲಿ ಅನೇಕ ದಿನಗಳಿಂದ ಬಂದ್ ಆದ ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್ ತೆರೆಸಿದ್ದರು, ಹಳೆ ಬೆಡ್ ತೆರುವುಗೊಳಿಸಿ ಹೊಸದಾಗಿ ಬಂದ ಬೆಡ್ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿಸಿದ್ದರು. ನೀರು ಶೇಖರಣೆ ಮಾಡುವ ಎಲ್ಲಾ ಸಿಂಟೆಕ್ಸ್ ಗಳು, ಶೌಚಾಲಯ, ಸ್ನಾನದ ಕೊಠಡಿ, ಅಡುಗೆ ಕೊಠಡಿ, ವಸತಿ ಕೊಠಡಿಗಳನ್ನು ಸ್ವಚ್ಛತೆ ಮಾಡಿಸಿ ಎಲ್ಲಾ ವಿದ್ಯಾರ್ಥಿಗಳ ಪ್ರತಿ ರೂಮ್ ಗೂ ಕಸದ ಬುಟ್ಟಿ, ಬಕೆಟ್  ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿಸಿದ್ದಾರೆ” ಎಂದು ಎಸ್ ಎಫ್ ಐ ಜಿಲ್ಲಾಧ್ಯಕ್ಷರು ಬಸವರಾಜ ಎಸ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊಸ ವಸ್ತುಗಳ ವಿತರಣೆ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡಿದೆ. ಸಿಬ್ಬಂದಿಗಳಿಗೆ ಕಟ್ಟುನಿಟ್ಟಾಗಿ ಹಾಸ್ಟೆಲ್ ವ್ಯವಸ್ಥೆ ಕಾಪಾಡಿಕೊಂಡು ಹೋಗುಬೇಕು” ಎಂದು ಸಮಾಜ ಕಲ್ಯಾಣ ಅಧಿಕಾರಿ ಹೇಳಿದ್ದಾರೆ” ಎಂದರು.

“ಮುರಿದ ಬಾಗಿಲು ರಿಪೇರಿ ಮಾಡಿಸಿ ಹೊಸದಾಗಿ ಹಾಕಿಸಿದ್ದಾರೆ. ಉಳಿದಂತೆ ವಿದ್ಯಾರ್ಥಿಗಳ ಬೇಡಿಕೆಗಳಾದ ದಿನನಿತ್ಯ ವಾರ್ತಾ ಪತ್ರಿಕೆಗಳು ಮುಂದುವರೆಸಬೇಕು. ಸಿ.ಸಿ.ಕ್ಯಾಮರಾ, ಪುಸ್ತಕಗಳು, ಊಟದ ವ್ಯವಸ್ಥೆ, ಸಂಪೂರ್ಣ ಹಾಸ್ಟೆಲ್ ವ್ಯವಸ್ಥೆ ಸುಧಾರಿಸಲು ಜವಾಬ್ದಾರಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಮುತುವರ್ಜಿಯಿಂದ ಸರಿಪಡಿಸಲ ಮುಂದಾಗಬೇಕು” ಎಂದು ಬಸವರಾಜ್ ಎಸ್ ತಿಳಿಸಿದರು.

“ಗ್ರಂಥಾಲಯದಲ್ಲಿದ ಚೇರ್, ಟೇಬಲ್, ಕಂಪ್ಯೂಟರ್ ಲ್ಯಾಬ್ ನಲ್ಲಿರುವ ಸಾಮಗ್ರಿಗಳನ್ನು ಮಾರಿಕೊಂಡು ಭಾರಿ ಪ್ರಮಾಣದ ಭ್ರಷ್ಟಾಚಾರದ ನಡೆದಿದೆ ಎಂಬ ಅನುಮಾನ ಕಾಡುತ್ತಿದೆ ಅದಕ್ಕೆ ಸಾಕ್ಷಿಯಾಗು ಅಧಿಕಾರಿಗಳೇ ಬೇರೆ ಚೇರ್ ಗಳನ್ನು ತಂದು ಹಾಕಿದ್ದಾರೆ ಇದರು ವಿರುದ್ಧ ದೂರ ದಾಖಲಿಸಿಕೊಂಡು ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸವವರೆಗೂ ಹೋರಾಟವನ್ನು ವಿಭಿನ್ನ ಹಂತಕ್ಕೆ ಕೊಂಡೊಯ್ಯುತ್ತೇವೆ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಎಚ್ಚರಿಕೆ ನೀಡಿದರು.

ಇನ್ನೂ ಉಳಿದ ಎಲ್ಲಾ ಸಮಸ್ಯೆಗಳಿಗೂ ಮೇಲಾಧಿಕಾರಿಗಳು ಈತ್ತ ಗಮನ ಹರಿಸಬೇಕು. ಆದಷ್ಟು ಶೀಘ್ರವಾಗಿ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡ ಒದಗಿಸಬೇಕು. ಆಹಾರ ಭತ್ಯೆ ಹೆಚ್ಚಿಸಲು ಮುಖ್ಯಮಂತ್ರಿಗಳು, ಸಚಿವರು, ಶಾಸಕರ ಮುಂದಾಗಬೇಕು ” ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ಹಾಸ್ಟೆಲ್ ಉಪಸಮಿತಿಯ ರಾಜ್ಯ ಸಂಚಾಲಕ ಅರುಣ್ ನಾಗವತ್ ಹೇಳಿದರು.

ಸೌಲಭ್ಯಗಳನ್ನು ಪಡೆದ ಖುಷಿಯಲ್ಲಿ ವಿದ್ಯಾರ್ಥಿಗಳು ಜಯಕಾರದ ಘೋಷಣೆಗಳನ್ನು ಕೂಗಿ ಸಂಭ್ರಮ ಪಟ್ಟರು. ಸೌಲಭ್ಯಗಳನ್ನು ಪಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡ ಫಕ್ಕಿರೇಶ್ ಮ್ಯಾಗಳಮನಿ, ಹಾಸ್ಟೆಲ್ ಘಟಕ ಅಧ್ಯಕ್ಷ ಸಂಜೀವ ಕೆ, ಕಾರ್ಯದರ್ಶಿ  ಮನೋಜ್ ಬಣಕಾರ್, ಉಪಾಧ್ಯಕ್ಷ ಕಿರಣ್ ಕೆ, ವಿನಾಯಕ್ ಶಿವುರು, ನಿಂಗಪ್ಪ ತಳವಾರ್, ಪ್ರತಾಪ್ ಎಸ್, ಹನುಮಂತ ಬಿ, ಗಣೇಶ್ ಎಂ ಪ್ರಶಾಂತ್  ಲಮಾಣಿ, ಸಕ್ರಪ್ಪ ಲಮಾಣಿ, ಸಹ ಕಾರ್ಯದರ್ಶಿ ಆಕಾಶ್ ವಡ್ಡರ, ವಿಜಯ ಸಿದ್ದಾಣವರ, ಪ್ರೇಮ್ ಲಮಾಣಿ, ಭರತ್ ಪೀ, ಮಹಾಂತೇಶ್ ಎನ್ , ಪ್ರತಾಪ್ ಆರ್, ಭರತ್ ಸಿ, ಪ್ರದೀಪ್ ಡಿ, ಗಣೇಶ್ ಸವಣೂರು, ಕಾರ್ತೀಕ ಸಿ, ಹೇಮಂತ್ ವಡ್ಡರ, ಅರುಣ್ ಲಮಾಣಿ, ನಂದೀಶ್ ಪೂಜಾರ್, ಕಿರಣ್ ಎಲ್, ಮಲ್ಲೇಶ್ ಹರಿಜನ, ರೋಹಿತ್ ಕೆ , ಗಣೇಶ ಲಮಾಣಿ, ಅಶೋಕ್ ಎಂ ಎಸ್  ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...