ಹಾವೇರಿ | ರೋಶನಿ ಸಮಾಜ ಸೇವಾ ಸಂಸ್ಥೆಯಿಂದ ವಿಶ್ವ ವಿಕಲಚೇತನರ ದಿನಾಚರಣೆ

Date:

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಶನಿ ಸಮಾಜ ಸೇವಾ ಸಂಸ್ಥೆ, ಸೇಂಟ್ ಜೋಸೆಫ್ ಕಾಲೇಜ್ ಆಫ್ ಲಾ ಬೆಂಗಳೂರು ಕಾನೂನು ಸೇವಾ ಸಮಿತಿ ಹಾನಗಲ್ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ರೋಷನಿ ವ್ಯಸನ ಮುಕ್ತ ಕೇಂದ್ರ ನಾಲ್ಕರ ಕ್ರಾಸ್ ನಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಸ್ತಾವಕವಾಗಿ ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜ ಅವರು ಮಾತನಾಡಿ, “ನಮ್ಮ ಸಂಸ್ಥೆಯಿಂದ ಸುಮಾರು ಏಳು ನೂರು ನೂನ್ಯತೆ ಹೊಂದಿರುವ ಮಕ್ಕಳನ್ನು ಗುರುತಿಸಿ, ಅವರ ಸಾಮರ್ಥ್ಯವನ್ನು ಹೆಚ್ಚಿಸುವಂತಹ ಕೆಲಸವನ್ನು ಮಾಡಲಾಗಿದೆ” ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಂತಿ ಸದನ ಕಾನ್ವೆಂಟಿನ ಸಿಸ್ಟರ್ ಅಮಿತಾ ಮಸ್ಕರೇನಸ್ ಸುಪಿರಿಯರ್ ಅವರ ರು ಮಾತನಾಡಿ, “ಸಮಾಜದಲ್ಲಿರುವ ಪ್ರತಿಯೊಬ್ಬ ಸದಸ್ಯರನ್ನು ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಹೊಣೆಯಾಗಿದೆ. ವಿಶೇಷ ಚೇತನರನ್ನ ಸಬಲೀಕರಣ ಮಾಡುವ ಮೂಲಕ ಸಮಾಜವನ್ನು ಉತ್ತಮಪಡಿಸಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷರು ಪುಟ್ಟಪ್ಪ ಮಲ್ಲಪ್ಪ ಜಲವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ರೋಶನಿ ಸಮಾಜ ಸೇವಾ ಸಂಸ್ಥೆಯ ಕಾರ್ಯಕ್ರಮಗಳನ್ನು ಅಭಿನಂದಿಸಿ, ಅನುಕಂಪದ ಬದಲಾಗಿ ವಿಶೇಷ ಚೇತನರಿಗೆ ಅವಕಾಶಗಳನ್ನು ಕೊಡಬೇಕಾಗಿದೆ” ಎಂದರು.

ಪ್ರಗತಿಪರ ಸಂಘಟನೆಯ ಅಧ್ಯಕ್ಷರು ಎನ್.ಎಂ.ಪೂಜಾರ್ ಮಾತನಾಡಿ, “ಮಕ್ಕಳಲ್ಲಿ ದೇವರನ್ನ ಕಾಣೊಣ. ಈ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಪ್ರಗತಿಪರ ಸಂಘಟನೆ ಯಾವತ್ತೂ ಕೈಜೋಡಿಸುತ್ತಿದೆ” ಎಂದು ಹೇಳಿದರು.

ಅಂಬೇಡ್ಕರ್ ಪರಿನಿರ್ವಾಹಣ ದಿನದಂದು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಸಂಘಟನೆಯಿಂದ ಬಹುಮಾನ ವಿತರಿಸಲಾಯಿತು. ಮಕ್ಕಳ ಪಾಲಕರಾದ ರಮೇಶ್ ಹಿಂದಿನಮನಿ ಇವರನ್ನು ಸನ್ಮಾನಿಸಲಾಯಿತು. ಹಾಗೂ  ಹಾನಗಲ್ ತಾಲೂಕಿನ ಇಬ್ಬರು ವಿಶೇಷ ಚೇತನ ವ್ಯಕ್ತಿಗಳು ಗುತ್ತೇಪ್ಪ ಅಜ್ಜಪ್ಪ ಅಂಬಿಗೇರ್ ಮತ್ತು ಸಂಜೀವಯ್ಯ ಮಲ್ಲಯ್ಯ ಹಿರೇಮಠ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಹಾನಗಲ್ ಮತ್ತು ಶಿಗ್ಗಾವ್ ತಾಲೂಕಿನ ವಿಶೇಷ ಚೇತನ ಮಕ್ಕಳು ಮತ್ತು ಅವರ ಪಾಲಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಶಿಗ್ಗಾವಿ ಮತ್ತು ಹಾನಗಲ್ಲ ತಾಲೂಕಿನ ವಿವಿಧೋದ್ದೇಶ ಕಾರ್ಯಕರ್ತರು ಶೇಕಪ್ಪ ಹುಲ್ಲತ್ತಿ, ಸಿದ್ದಪ್ಪ ಮಸಳಿ ಹಾಗೂ ಜಗದೀಶ ಘಂಟನವರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರಗತಿಪರ ಸಂಘಟನೆ ಸದಸ್ಯರು, ಜನ ವೇದಿಕೆ ಮುಖಂಡರು, ಹಳ್ಳಿ ಅಭಿವೃದ್ಧಿ ಸಮಿತಿಯ ಸದಸ್ಯರು, ಸ್ವಸಹಾಯ ಸಂಘದ ಮಹಿಳೆಯರು, ರೋಶನಿ ಸಂಸ್ಥೆಯ ಸಿಬ್ಬಂದಿಗಳು, ವಿಶೇಷ ಚೇತನ ಶಾಲಾ ಮಕ್ಕಳು ಮತ್ತು ಅವರ ಸಿಬ್ಬಂದಿ ವರ್ಗದವರು,  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಿರ್ಮಲ ಅವರು ಸರ್ವರನ್ನ ಸ್ವಾಗತಿಸಿದರು. ಎಸ್. ವಿ. ಪಾಟೀಲ್ ನಿರೂಪಿಸಿದರು. ಗೌರಮ್ಮ ವೈ. ಕೆ. ವಂದಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...