“ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ಸರ್ಕಾರದ ಆದೇಶದ ಅನ್ವಯ ಪ್ರತಿ ಕ್ವಿಂಟಲ್ ಗೆ ರೂ.2.400ರಂತೆ. ಬೆಂಬಲ ಬೆಲೆ ಅಡಿಯಲ್ಲಿ ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್‌ನಂತೆ, ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲಾಗುವುದು” ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
“ಜಿಲ್ಲೆಯ ಹಾವನೂರು, ಗುತ್ತಲ, ಬೆಳವಿಗಿ, ನೆಗಳೂರು. ಕಮದೋಡ, ಕರೂರ ಹಾಗೂ ಇಟಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ.
“ಡಿಸೆಂಬರ್ 4ರಿಂದ ನೋಂದಣಿ ಆರಂಭಿಸಲಾಗುವುದು. ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





