ಹಾವೇರಿ | ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣನ ಪ್ರಕರಣ, ನ್ಯಾಯಾಲಯ ತೀರ್ಪು: ಡಿವೈಎಫ್ಐ ಸ್ವಾಗತ

Date:

“ಲೈಂಗಿಕ ದೌರ್ಜನ್ಯ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ವಿಕೃತ ರಾಸಲೀಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಳೆದ ವರ್ಷದಿಂದ ನಡೆದಿದ್ದ ಪ್ರಕರಣ ಅಂತಿಮವಾಗಿ ತೀರ್ಪು ನೀಡಿದ್ದು, ನಾಳೆ ಶಿಕ್ಷೆಯ ಪ್ರಮಾಣವನ್ನು ಘೋಷಿಸುವುದಾಗಿ ತಿಳಿಸಿದೆ. ಈ ತೀರ್ಪನ್ನು ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯು ಸ್ವಾಗತಿಸುತ್ತದೆ” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.

ಹಾವೇರಿ ಪಟ್ಟಣದಲ್ಲಿ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, “ಜನಪ್ರತಿನಿಧಿಯಾಗಿ ಹಲವಾರು ಮಹಿಳೆಯರ ಮೇಲೆ ವಿಕೃತ ಲೈಂಗಿಕ ದೌರ್ಜನ್ಯ ವೆಸಗಿರುವ ಅಪರಾಧಿ ಪ್ರಜ್ವಲ್ ರೇವಣ್ಣನಿಗೆ ಗರಿಷ್ಟ ಪ್ರಮಾಣದ ಶಿಕ್ಷೆಯನ್ನು ವಿಧಿಸಬೇಕೆಂದು ಕೋರುತ್ತದೆ” ಎಂದು ಹೇಳಿದರು.

“ಪ್ರಜ್ವಲ್ ರೇವಣ್ಣನ ಈ ವಿಕೃತ ಪ್ರಕರಣವು ಹೊರಬಂದಾಗಿನಿಂದ ಮಹಿಳಾ ಸಂಘಟನೆಗಳು, ಡಿವೈಎಫ್ಐ ಸೇರಿದಂತೆ ರಾಜ್ಯದ ಎಲ್ಲ ಜನಪರ ಚಳುವಳಿಗಳು ರಾಜ್ಯದ್ಯಂತ ಪ್ರತಿಭಟನೆ ನಡೆಸಿ ಪ್ರಜ್ವಲ್ ರೇವಣ್ಣನಿಗೆ ಸೂಕ್ತ ಶಿಕ್ಷೆ ವಿಧಿಸಲು ಒತ್ತಾಯಿಸಿದ್ದವು. ಹಾಸನದಲ್ಲೂ ಹಲವು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಅಂತಿಮವಾಗಿ ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ 2024 ಮೇ 30 ರಂದು ಹಾಸನ ನಗರದಲ್ಲಿ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ‌ ಸಮಾವೇಶದಲ್ಲಿ ನಾಡಿನಾದ್ಯಂತ ಆಗಮಿಸಿದ್ದ ಹತ್ತಾರು ಸಾವಿರ ಜನರು ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಮತ್ತು‌ ಮಹಿಳೆಯರ ಘನತೆಯನ್ನು ಎತ್ತಿ ಹಿಡಿಯಲು ಆಗ್ರಹಿಸಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೌರ್ಜನ್ಯಗಳಲ್ಲಿ ನೊಂದ ಸಂತ್ರಸ್ತರಿಗೆ ಈ ಪ್ರಕರಣದಲ್ಲಿ ನ್ಯಾಯಾಲಯವು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪವನ್ನು ಸಾಬೀತುಪಡಿಸುವ ಜೊತೆಯಲ್ಲಿ ನೊಂದ ಸಂತ್ರಸ್ತರಿಗೆ ನ್ಯಾಯ ಒದಗಿಸಿರುವುದು ನಿಜಕ್ಕೂ ಸಮಾಧಾನದ ಸಂಗತಿಯಾಗಿದೆ. ಅಲ್ಲದೇ ಸಂತ್ರಸ್ತರು ಧೈರ್ಯವಾಗಿ ಎದುರಿಸಿದರೆ ನ್ಯಾಯ ಸಿಗುತ್ತದೆ, ಎಂಬುದಕ್ಕೆ ಸಾಕ್ಷಿಯಾಗಿದೆ. ಮನೆಗೆಲಸದ ಮಹಿಳೆಯ ಮೇಲೆ ನಡೆದ ಅತ್ಯಾಚಾರದ ಒಂದು ಪ್ರಕರಣದಲ್ಲಿ ಮಾತ್ರ ಈಗ ತೀರ್ಪು ಹೊರಬಂದಿದ್ದು ಉಳಿದ ಪ್ರಕರಣಗಳ ತೀರ್ಪು ಕೂಡ ಶೀಘ್ರವಾಗಿ ಹೊರಬಂದು ಸಂತ್ರಸ್ತರಿಗೆ ನ್ಯಾಯ ಸಿಗಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಶಿರಹಟ್ಟಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಓ ಭರತ್ ಎಸ್ ಭೇಟಿ

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಹಿಳೆಯರ ಘನತೆಗೆ ಧಕ್ಕೆ ತಂದೊಡ್ಡಿರುವ ಅಶ್ಲೀಲ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಮತ್ತು  ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕವಾಗಿ ಹಂಚಿರುವ ಹೀನ ಮನಸ್ಥಿತಿಯ ದುರುಳರಿಗೂ ಸೂಕ್ತ ಶಿಕ್ಷೆ ನೀಡಬೇಕು” ಡಿವೈಎಫ್ಐ ರಾಜ್ಯ  ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...