“ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗುತ್ತಿದ್ದರು. ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ನೂತನವಾಗಿ 62 ಹಾಸ್ಟೆಲ್ ಮಂಜೂರು ಮಾಡಿರವುದನ್ನು ಎಸ್‌ಎಫ್‌ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸ್ವಾಗತ ಸಮಿತಿಯು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ ಎಫ್ ಐ ಜಿಲ್ಲಾಧ್ಯಕ್ಷ ಬಸವರಾಜ್ ಎಸ್ ಮಾತನಾಡಿ, “ಹಿಂದುಳಿದ ಸಮುದಾಯಕ್ಕೆ ಸೇರಿದ ಹತ್ತಾರು, ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿವಿಧ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಕ್ಕೆ ಬರುವ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗುತ್ತಿದ್ದರು. ನಮ್ಮ ಸಂಘಟನೆಯು ಗಮನಿಸಿ ನಿರಂತರವಾಗಿ ಹಾಸ್ಟೆಲ್ ಗಾಗಿ ಸಾವಿರಾರು ವಿದ್ಯಾರ್ಥಿಗಳು ಎಸ್‌ಎಫ್‌ಐ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲಾಗಳಲ್ಲಿ ಪ್ರತಿಭಟನೆ ಮಾಡಲಾಗಿತ್ತು” ಎಂದರು.
“ಹಾಸ್ಟೆಲ್ ಬಲವರ್ಧನೆಗಾಗಿ ರಾಜ್ಯವ್ಯಾಪ್ತಿ ಶೈಕ್ಷಣಿಕ ಜಾಥಾ ಮಾಡಿ ಹಾವೇರಿಯಲ್ಲಿ 29-30 ಅಕ್ಟೋಬರ್ 2025 ನಡೆದ ಎಸ್‌ಎಫ್‌ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೂತನ ಹಾಸ್ಟೆಲ್ ಮಂಜೂರು ಮಾಡುಂತೆ ಆಗ್ರಹಿಸಿ ಹೋರಾಟದ ನಿರ್ಣಯ ತೆಗೆದುಕೊಳ್ಳಲಾಗಿತ್ತು” ಎಂದರು.
“ನಮ್ಮ ಸಂಘಟನೆಯ ಹೋರಾಟದ ಪರಿಣಾಮವಾಗಿ ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ 100 ಸಂಖ್ಯೆ ಬಲವುಳ್ಳ 62 ಹಾಸ್ಟೆಲ್ ಮಂಜೂರು ಮಾಡಿರುವುದನ್ನು ಮತ್ತು ನಾಲ್ಕು ಐದು ತಿಂಗಳಿಂದ ನೀಡದೆ ಇರುವ ಶುಚಿ ಸಂಭ್ರಮ ಕಿಟ್ ಗಳನ್ನು ಪ್ರತಿ ಹಾಸ್ಟೆಲ್ ಗಳಿಗೆ ವಿತರಣೆ ಮಾಡುತ್ತಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ಸ್ವಾಗತ ಮಾಡುತ್ತದೆ” ಎಂದು ಹೇಳಿದರು.
ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ್ಮಾ ತನಾಡಿ, “ಹಾಸ್ಟೆಲ್ ಮಂಜೂರು ಮಾಡಲು ಕಾರಣರಾದ ರಾಜ್ಯದ ಮುಖ್ಯಮಂತ್ರಿಗಳಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಿಗೆ, ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ” ಎಂದರು.
“ನೂತನ 62 ಹಾಸ್ಟೆಲ್ ಮಂಜೂರು ಮಾಡಿದಂತೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ಗಳು ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು” ಎಂದು ಒತ್ತಾಯಿಸಿದರು.
ರಾಜ್ಯ ಮಟ್ಟದ ಹಾಸ್ಟೆಲ್ ಸಮಾವೇಶದಲ್ಲಿ ತೆಗೆದುಕೊಂಡ ನಿರ್ಣಯಗಳು
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕವಾಗಿ 4500 ರೂ ಆಹಾರ ಭತ್ಯೆ ಹೆಚ್ಚಳ ಮಾಡಬೇಕು. ಹಾಸ್ಟೆಲ್ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಲ್ಪಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಜಾರಿಗೆ ಮಾಡಬೇಕು. ಹಾಸ್ಟೆಲ್ ನಿಲಯ ಪಾಲಕರು, ಅಡುಗೆ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿ ಹಾಗೂ ಸೂಕ್ತ ತರಬೇತಿ ನೀಡಬೇಕು. ಸರ್ಕಾರದ ಆದೇಶದ ಮೆನು ಅನ್ನು ಹಾಸ್ಟೆಲ್ ಗಳಲ್ಲಿ ಬದಲಾವಣೆ ಮಾಡಿರುವುದನ್ನು ಖಂಡಿಸಿ ಹಾಗೂ ಸರ್ಕಾರದ ಆದೇಶ ಅನ್ವಯ ಆಹಾರ ನೀಡಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಬೇಕು.
ತಾಲೂಕು ಮಟ್ಟದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ರಕ್ಷಣೆಗಾಗಿ (Anti-Narcotics Committee) ಮಾದಕ ದ್ರವ್ಯ ವಿರೋಧಿ ಸಮಿತಿ ರಚನೆ ಮಾಡಬೇಕು. ಶಾಲಾ ಕಾಲೇಜುಗಳ ಆರಂಭದ ದಿನದಿಂದಲೇ ವಸತಿ ನಿಲಯ ತೆರೆದು ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಲ್ಪಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಆರೋಗ್ಯ ಭದ್ರತೆ ಒದಗಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಹಾಗೂ ಭದ್ರತೆ ಒದಗಿಸುವಂತೆ ಒತ್ತಾಯಿಸಿ ತೆಗೆದುಕೊಳ್ಳಲಾಗಿದ ನಿರ್ಣಯಗಳು.
ಇದನ್ನು ಓದಿದ್ದೀರಾ? ರೋಣ ತಹಶೀಲ್ದಾರ್ ಕಚೇರಿಯಲ್ಲಿ ನಿರ್ವಹಣೆ ಕೊರತೆ: ದುರ್ನಾತ ಬೀರುತ್ತಿವೆ ಶೌಚಾಲಯಗಳು
“ಇವುಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಎಸ್ ಎಫ್ ಐ ಮೂಲಕ ಒತ್ತಾಯಿಸುತ್ತೇವೆ.
ಈ ಸಂದರ್ಭದಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯರು ಪರಿಮಳ ಜೈನ್, ಎಸ್ಎಫ್ಐ ಹಾಸ್ಟೆಲ್ ಉಪಸಮಿತಿಯ ರಾಜ್ಯ ಸಂಚಾಲಕ ಅರುಣ ನಾಗವತ, ಕಾಲೇಜು ಘಟಕ ಅಧ್ಯಕ್ಷೆ ಚೈತ್ರ ಕೊರವರ, ಧನುಷ್ ದೊಡ್ಡಮನಿ, ಪಕ್ಕಿರೇಶ ಎಂ ಉಪಸ್ಥಿತರಿದ್ದರು.





