ಹಾವೇರಿ | ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು : ಎಸ್ಎಫ್ಐ-ಡಿವೈಎಫ್ಐ ಆಗ್ರಹ

Date:

“ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ಶುಷ್ರೂಕಿಯಾಗಿ ಕೆಲಸ ಮಾಡುತ್ತಿದ್ದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ (22) ಹತ್ಯೆಗೈದ ಘಟನೆಯನ್ನು ಸಮಗ್ರ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.

ಹಾವೇರಿ ಪಟ್ಟಣದಲ್ಲಿ ಶುಕ್ರವಾರ ಸಂಜೆ ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ ಪ್ರತಿಮೆ ಹತ್ತಿರ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ವತಿಯಿಂದ ಸ್ವಾತಿ ಹತ್ಯೆ ಖಂಡಿಸಿ ಮೇಣದ ಬತ್ತಿ ಬೆಳಗಿ ಪ್ರತಿಭಟಿಸಿ,  ಮಾತನಾಡಿದರು.

“ಈ ಘಟನೆ ಕುರಿತಂತೆ ಪೋಲಿಸರು ಒಬ್ಬ ಆರೋಪಿಯನ್ನು ಬಂಧಿಸಿರುವ ವರದಿಯಿದೆ. ಇನ್ನುಳಿದ ಇಬ್ಬರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಮೃತ ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಲೆಗಡುಕರಿಗೆ, ಅತ್ಯಚಾರಗಳಿಗೆ ಹಾಗೂ ಸಮಾಜ ಘಾತುಕರಿಗೆ ಜಾತಿ ಧರ್ಮ ಇರುವುದಿಲ್ಲ. ಇಂತಹ ದುಷ್ಟರನ್ನು ಮಟ್ಟ ಹಾಕಲು ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕು. ಮಹಿಳೆಯರನ್ನು ಕೇವಲ ಬೋಗದ ವಸ್ತುವನ್ನಾಗಿ ಹಾಗೂ ಎರಡನೇ ದರ್ಜೆ ಪ್ರಜೆಯಾಗಿ ನೋಡುವ ಪುರುಷ ಪ್ರಧಾನ್ಯ ವ್ಯವಸ್ಥೆಯನ್ನು ತೊಡೆದು ಹಾಕಿ, ಲಿಂಗ ಸಮಾನತೆಗೆ ಮುಂದಾಗಬೇಕಿದೆ. ಇದನ್ನು ಸಾಧಿಸಲು ಸರಕಾರ ಮತ್ತು ಸಮಾಜ ಗಂಭೀರ ಪ್ರಯತ್ನ ಮಾಡಬೇಕು” ಎಂದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ  ಹಾಗೂ ಭದ್ರತೆ ಒದಗಿಸಬೇಕು. ದುರುಳರಿಂದ ಕೊಲೆಯಾಗಿರುವ ಸ್ವಾತಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಹಾಗೂ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಭದ್ರತೆ ಒದಗಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪಿಎಸ್​ಐ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ

ಪ್ರತಿಭಟನೆಯಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾಧ್ಯಕ್ಷ ಉಡಚಪ್ಪ ಮಾಳಗಿ, ಅಲೆಮಾರಿ ಸಮುದಾಯ ಸಂಘಟನೆ ಜಿಲ್ಲಾಧ್ಯಕ್ಷ ಶೆಟ್ಟಿ ವಿಭೂತಿ ನಾಯಕ್, ಧನುಷ್ ದೊಡ್ಡಮನಿ, ಗಾಯತ್ರಿ ದಂಡಿ, ದಿವ್ಯ ಹುಡೇದಕರ, ರೇಷ್ಮಾ ಎನ್, ಭೂಮಿಕಾ ನರೆಗಲ್, ಅನ್ವಿಕಾ ಆರ್.ಬಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...