ಹಾವೇರಿ | SFI ರಾಜ್ಯ ಮಟ್ಟದ ಸಮಾವೇಶದ ಸಮಾರೋಪ; ಹೋರಾಟದ ಮೂಲಕ ಬದಲಾವಣೆ ಆಗಲಿ: ಪರಿಮಳ ಜೈನ್

Date:

“ಈ ಸಮಾವೇಶದ ಮೂಲಕ ಇವತ್ತು ಹೋರಾಟದ ಹೆಜ್ಜೆಗಳು ಆರಂಭವಾಗಿವೆ. ಮುಂದಿನ ದಿನಮಾನಗಳಲ್ಲಿ ಹೋರಾಟ ಮೂಲಕ ಬದಲಾವಣೆ ಆಗಲಿ. ಇಲ್ಲಿ ಕೇವಲ ಹಾಸ್ಟೆಲ್ ಸಮಸ್ಯೆ ಅಷ್ಟೇ ಅಲ್ಲ, ಶಿಕ್ಷಣ ವ್ಯವಸ್ಥೆಯ ವಿಷಯಗಳ ಕುರಿತು ಚರ್ಚೆ ಆಗಿದೆ” ಎಂದು ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರು ಪರಿಮಳ ಜೈನ್ ಹೇಳಿದರು.

ಹಾವೇರಿ ಪಟ್ಟಣದ ಗುರು ಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಹಾಸ್ಟೆಲ್ ಗಳ ಬಲವರ್ಧನೆಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಮಾವೇಶದ ಸಮಾರೋಪದಲ್ಲಿ ಮಾತನಾಡಿದರು.

“ಇವತ್ತು ಕನ್ನಡ ಶಾಲೆಗಳು ಮುಚ್ಚುತ್ತಿವೆ. ಹಾಗಾಗಿ ಸಾರ್ವಜನಿಕ ಶಿಕ್ಷಣವಾಗಿ ಉಳಿಯಬೇಕು. ನಾವೆಲ್ಲರೂ ಈ ಕುರಿತು ಬದ್ದರಾಗಬೇಕು. ಸಮಾಜದ ಸುಧಾರಣೆಯಲ್ಲಿ ನಮ್ಮನ್ನು ತೊಡಗಿಸಿಗೋಳ್ಳೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಾಗತ ಸಮಿತಿ ಸದಸ್ಯರು ಹಾಗೂ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ “ನಮ್ಮ ವಿದ್ಯಾರ್ಥಿ ಚಳವಳಿಗೆ ತವರು ಮನೆ ಹಾಸ್ಟೆಲ್ ಗಳು. ನಾವೆಲ್ಲರೂ ಹಾಸ್ಟೆಲ್ ನಲ್ಲಿ ಓದಿರುವವರೇ. ಎಸ್ಎಫ್ಐ ಸಂಘಟನೆ ರಾಜ್ಯದ ಎಲ್ಲ ಜಿಲ್ಲೆಯ ಹಾಸ್ಟೆಲ್  ಸಮಸ್ಯೆಗಳ ಕುರಿತು ಹೋರಾಟ ಮಾಡುತ್ತಲೇ ಬಂದಿದೆ” ಎಂದು ಸಮಾವೇಶದ ಸ್ವಾಗತ ಸಮಿತಿ ಸದಸ್ಯರು ಹಾಗೂ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.

“ಈ ಹಿಂದೆ ಹೋರಾಟ ಮಾಡಿದ ಘಟನೆ ನೆನಪಿಸಿಕೊಂಡು ಮಾತನಾಡಿದ ಅವರು “ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾಗಿ ಊಟ ಸಿಗುತ್ತಿರಲಿಲ್ಲ. ಗುಣಮಟ್ಟದ ಆಹಾರ ಇರಲಿಲ್ಲ. ಅಂದಿನ ಶಾಸಕರು ನೆಹರು ಓಲೇಕಾರ ಅವರನ್ನು ಹಾಸ್ಟೆಲ್ ಸಮಸ್ಯೆ, ಸೌಲಭ್ಯಗಳನ್ನು ಕೇಳಿದ್ದಕ್ಕೆ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಿಂದ ಹೊರ ಹಾಕಿದರು. ಶಾಸಕರ ಮನೆಗೆ ಹೋದಾಗ ಮಾತು ಸೌಜನ್ಯದಿಂದ ಆರಂಭವಾಗಿತ್ತು. ಹೊರ ಹಾಕಿದ ವಿದ್ಯಾರ್ಥಿಗಳನ್ನು ಮತ್ತೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದಾಗ ನಮ್ಮನ್ನು ಜೈಲಿಗೆ ಹಾಕಿದರು” ಎಂದು ಹೇಳಿದರು.

“ಮರುದಿನ ಜೈಲಿಗೆ ಹಾಕಿದ್ದನ್ನು ಖಂಡಿಸಿ ಹಾವೇರಿಯಲ್ಲಿ ಎಸ್ ಎಫ್ ಐ ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟ ಸಿದ್ದಪ್ಪ ಕಂಬಳಿ ವೃತ್ತದಲ್ಲಿ ನಡೆಯಿತು. ಇದರ ಫಲವಾಗಿ ಬಿಜೆಪಿ ಸರಕಾರ ಮತ್ತು ಶಾಸಕರು ಮಣಿದು ಬಿಡುಗಡೆ ಜೊತೆಗೆ ಹೊರ ಹಾಕಿದ ವಿದ್ಯಾರ್ಥಿಗಳನ್ನು ಮತ್ತೆ ಹಾಸ್ಟೆಲ್ಗೆ ಸೇರಿಸಲಾಯಿತು” ಎಂದು ಹೇಳಿದರು.

“ರಾಣಿಬೆನ್ನೂರಿನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದಾಗ, ಎಸ್ ಎಫ್ ಐ ಹೋರಾಟ ಮಾಡಿ, ಆ ವಿದ್ಯಾರ್ಥಿ ಕುಟುಂಬಕ್ಕೆ ಸರಕಾರದಿಂದ 25ಲಕ್ಷ ರೂ ಪರಿಹಾರ ಕೊಡಿಸಲಾಯಿತು” ಎಂದರು.

“ಈ ನಿಟ್ಟಿನಲ್ಲಿ ಎಸ್ ಎಫ್ ಐ ವಿದ್ಯಾರ್ಥಿಗಳಿಗಾಗಿ ಹೋರಾಟ ಮಾಡುತ್ತಾ ಬಂದಿದೆ. ಹಾಸ್ಟೆಲ್ ಸಮಸ್ಯೆಗಳ ಕುರಿತು ಇವತ್ತು ಸಮಾವೇಶ ಮಾಡಲಾಯಿತು. ಇಲ್ಲಿಂದ ಹೋದ ಮೇಲೆ ಹಾಸ್ಟೆಲ್ ಸಮಸ್ಯೆಗಳ ಕುರಿತು ಚಳವಳಿಗಳನ್ನು ರೂಪಿಸಬೇಕು, ಹೋರಾಟ ಮಾಡಬೇಕು” ಎಂದು ಕರೆ ನೀಡಿದರು.

IMG 20251030 WA0344 1

ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಮಾತನಾಡಿ, “ಎಸ್ ಎಫ್ ಐ ಹೋರಾಟಗಳನ್ನು ಗಮನಿಸುತ್ತ ಬಂದಿರುವ ನಾನು ಬಂಡಾಯ ಸಾಹಿತ್ಯ ಆಶಯಗಳನ್ನು ಒಳಗೊಂಡಿರುವ ಸಂಘಟನೆ ಆಗಿದೆ. ನಿಮ್ಮ ಯಾವುದೇ ಹೋರಾಟಗಳಿಗೆ ನಾವು ನಿಮ್ಮ ಜೊತೆಗೆ ಇರುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪುನೀತ್ ಸ್ಮರಣಾರ್ಥ ಆರ್ಯ ಈಡಿಗ ಸಂಘದಿಂದ ಪುಷ್ಪನಮನ ಹಾಗೂ ಉಪಹಾರ ವಿತರಣೆ

ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಸ್ವಾಗತ ಸಮಿತಿ ಸದಸ್ಯರು ನಾಗರಾಜ ಕಾಳೆ, ಹರ್ಷ, ರೇಣುಕಾ ಕಹಾರ, ಸತೀಶ ಎಂ. ಬಿ, ಚಕೋರ ವೇದಿಕೆ ಸಂಚಾಲಕರು ಮಾರುತಿ ತಳವಾರ, ಎಸ್ ಎಫ್ ಐ ರಾಜ್ಯಾಧ್ಯಕ್ಷರು ಅಬ್ಲೀಕರ ಶಿವಪ್ಪ ಎನ್, ರಾಜ್ಯ ಕಾರ್ಯದರ್ಶಿ ವಿಜಯಕುಮಾರ ಟಿ. ಎಸ್. ಕೇಂದ್ರ ಸಮಿತಿ ಸದಸ್ಯರು ಸುಜಾತಾ ವೈ, ಕೇಂದ್ರ ಸಮಿತಿ ಸದಸ್ಯರು ಬಸವರಾಜ ಡಾ. ಬಸವರಾಜ ಗುಳೇದಾಳ, ಜಿಲ್ಲಾಧ್ಯಕ್ಷರು ಬಸವರಾಜ ಎಸ್ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...