ಹಾವೇರಿ | ಅನಧಿಕೃತ ರಸ್ತೆ ಅಗೆದ ಅಂಗಡಿ ಪರವಾನಗಿ ರದ್ದು, ಮಾಲೀಕನಿಗೆ 12 ಸಾವಿರ ದಂಡ

Date:

“ನಗರಸಭೆ ಪರವಾನಗಿ ಪಡೆಯದೆ ಅನಧಿಕೃತವಾಗಿ ಒಳಚರಂಡಿ ಸಂಪರ್ಕ ಮಾಡಲು ರಸ್ತೆ ಅಗೆದ ಅಂಗಡಿ ಮಾಲೀಕನಿಗೆ 12 ಸಾವಿರ ದಂಡ ಹಾಗೂ ನಗರಸಭೆಯಲ್ಲಿ ಒಳ ಚರಂಡಿ ಸಂಪರ್ಕ ಪರವಾನಿಗೆ ಪಡೆದಿದ್ದ ಗುತ್ತಿಗೆದಾರನ ಪರವಾನಗಿ ರದ್ದು ಮಾಡಲಾಗಿದೆ” ಎಂದು ನಗರಸಭೆ ಪೌರಾಯುಕ್ತರಾದ ಎಫ್.ಐ.ಇಂಗಳಗಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ಪಟ್ಟಣದ ನಗರಸಭೆ ವ್ಯಾಪ್ತಿಯ ಸಿದ್ದೇಶ್ವರ ನಗರದಲ್ಲಿ ಗುತ್ತಿಗೆದಾರ ನಾಗರಾಜ ಹೊಸಪೇಟೆ ಎಂಬುವರು ಯಾವುದೇ ಪರವಾನಗಿ ಪಡೆಯದೆ  ಅಂಗಡಿಗೆ ಒಳಚರಂಡಿ ಸಂಪರ್ಕ ಮಾಡಲು ರಸ್ತೆ ಅಗೆದಿದ್ದರು.

ಈ ಹಿನ್ನೆಲೆ ‌ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ‌ಅಂಗಡಿ ಮಾಲೀಕ ಪರವಾನಗಿ ಪಡೆದಿಲ್ಲ ಎಂಬುದು ಗೊತ್ತಾಗಿದೆ. ತಕ್ಷಣ ನಗರಸಭೆ ಪೌರಾಯುಕ್ತರಾದ ಎಫ್.ಐ.ಇಂಗಳಗಿ ಭೇಟಿ ನೀಡಿ ಅಂಗಡಿ ಮಾಲೀಕನಿಗೆ ಹನ್ನೆರಡು ಸಾವಿರ ದಂಡ ಹಾಗೂ ಗುತ್ತಿಗೆದಾರನ ಪರವಾನಗಿ ರದ್ದು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉದ್ಯೋಗ ಮಾಹಿತಿ | ಅಂಗನವಾಡಿಗಳ 2,500 ಹುದ್ದೆಗೆ ನೇಮಕಾತಿ

“ನಗರಸಭೆ ವ್ಯಾಪ್ತಿಯಲ್ಲಿ ಬರುವಂತಹ ಸಾರ್ವಜನಿಕರು ಯಾವುದೇ ವಸತಿ ಹಾಗೂ ವಾಣಿಜ್ಯ ಮಳಿಗೆಗಳಿಗೆ ಒಳಚರಂಡಿ ಸಂಪರ್ಕವನ್ನು ಪರವಾನಗಿ ಪಡೆದು ಮಾಡಬೇಕು. ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಪೌರಾಯುಕ್ತ ಎಫ್.ಐ.ಇಂಗಳಗಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...